AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ ಬಿ. ಶೆಟ್ಟಿ ಎದುರು ಕನ್ನಡಿಗರದ್ದು ಅದೊಂದೇ ಕೋರಿಕೆ; ಈಡೇರೋದು ಯಾವಾಗ?

ರಾಜ್ ಬಿ ಶೆಟ್ಟಿ ಅವರು ‘ಸು ಫ್ರಮ್ ಸೋ’ ಚಿತ್ರದ ಮೂಲಕ ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಮಧ್ಯೆ ಅವರ ಒಡೆತನದ ‘ಲೈಟರ್ ಬುದ್ಧ’ ಮಲಯಾಳಂನ ‘ಲೋಕಃ’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡುತ್ತಿದೆ. ಕನ್ನಡ ವರ್ಷನ್ ಇನ್ನೂ ಬಿಡುಗಡೆಯಾಗಿಲ್ಲ. ಇದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ‘ಲೋಕಃ’ ಚಿತ್ರದ ತಮಿಳು ಮತ್ತು ಹಿಂದಿ ಆವೃತ್ತಿಗಳು ಲಭ್ಯವಿದ್ದರೂ ಕನ್ನಡ ಆವೃತ್ತಿ ಲಭ್ಯವಿಲ್ಲದಿರುವುದು ವಿಪರ್ಯಾಸ.

ರಾಜ್ ಬಿ. ಶೆಟ್ಟಿ ಎದುರು ಕನ್ನಡಿಗರದ್ದು ಅದೊಂದೇ ಕೋರಿಕೆ;  ಈಡೇರೋದು ಯಾವಾಗ?
ರಾಜ್ ಬಿ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Sep 12, 2025 | 8:44 AM

Share

ರಾಜ್ ಬಿ. ಶೆಟ್ಟಿ (Raj b Shetty) ಅವರು ‘ಸು ಫ್ರಮ್ ಸೋ’ ಮೂಲಕ ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ಗೆಲುವು ಅವರಿಗೆ ದೊಡ್ಡ ಹುರುಪನ್ನು ನೀಡಿದೆ. ಸದ್ಯ ಅವರು ಹೊಸ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹೀಗಿರುವಾಗಲೇ ಅವರು ಕನ್ನಡಿಗರ ಕೋರಿಕೆಯನ್ನು ಈಡೇರಿಸಿಲ್ಲ. ಈ ವಿಚಾರ ಫ್ಯಾನ್ಸ್ ಬೇಸರಕ್ಕೆ ಕಾರಣ ಆಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರನ್ನು ಪ್ರಶ್ನೆ ಮಾಡಲಾಗುತ್ತಿದೆ.

‘ಸು ಫ್ರಮ್ ಸೋ’ ಸಿನಿಮಾ ಕನ್ನಡದಲ್ಲಿ ಜನಪ್ರಿಯತೆ ಪಡೆದ ಬಳಿಕ ಮಲಯಾಳಂನಲ್ಲಿ ರಿಲೀಸ್ ಆಯಿತು. ಆ ಭಾಷೆಗೆ ಡಬ್ ಮಾಡಿಯೇ ಚಿತ್ರವನ್ನು ತೆರೆಮೇಲೆ ತರಲಾಯಿತು. ಮಲಯಾಳಂ ಮಂದಿ ಈ ಚಿತ್ರವನ್ನು ಕನ್ನಡದಲ್ಲಿ ಅಲ್ಲ, ಬದಲಿಗೆ ಮಲಯಾಳಂ ಭಾಷೆಯಲ್ಲೇ ನೋಡಿದರು. ಆದರೆ, ಮಲಯಾಳಂನ ‘ಲೋಕಃ’ ಚಿತ್ರವನ್ನು ರಾಜ್ ಕರ್ನಾಟಕದಲ್ಲಿ ಹಂಚಿಕೆ ಮಾಡುತ್ತಿದ್ದು, ಈವರೆಗೆ ಕನ್ನಡದಲ್ಲಿ ರಿಲೀಸ್ ಆಗಿಲ್ಲ.

‘ಸು ಫ್ರಮ್ ಸೋ’ ಚಿತ್ರವನ್ನು ಮಲಯಾಳಂನಲ್ಲಿ ಹಂಚಿಕೆ ಮಾಡಿದ್ದು ದುಲ್ಖರ್ ಸಲ್ಮಾನ್ ಅವರು. ದುಲ್ಖರ್ ನಿರ್ಮಾಣ ಮಾಡಿದ ‘ಲೋಕಃ’ ಹೆಸರಿನ ಮಲಯಾಳಂ ಚಿತ್ರವನ್ನು ರಾಜ್ ಅವರ ಒಡೆತನದ ‘ಲೈಟರ್ ಬುದ್ಧ’ ಕರ್ನಾಟಕದಲ್ಲಿ ಹಂಚಿಕೆ ಮಾಡಿದೆ. ಸಿನಿಮಾ ರಿಲೀಸ್ ಆಗಿ ಎರಡು ವಾರಗಳು ಕಳೆದರೂ ಈವರೆಗೆ ಸಿನಿಮಾದ ಕನ್ನಡ ವರ್ಷನ್ ರಿಲೀಸ್ ಆಗಿಲ್ಲ. ಇದು ಅನೇಕರ ಬೇಸರಕ್ಕೆ ಕಾರಣ ಆಗಿದೆ.

ಇದನ್ನೂ ಓದಿ
Image
ಅಕ್ಷಯ್ ಹೇಗೆ ಅಷ್ಟು ಬೇಗ ಸಿನಿಮಾ ಮಾಡ್ತಾರೆ? ಅಜಯ್ ದೇವಗನ್ ಫನ್ನಿ ವಿವರಣೆ
Image
ಟಾಪ್​ನಲ್ಲಿ ಯಾರೂ ಊಹಿಸದ ಸೀರಿಯಲ್; ‘ಅಮೃತಧಾರೆ’ಗೆ ಎಷ್ಟನೇ ಸ್ಥಾನ?
Image
ಮದುವೆ ಬಳಿಕ ಕೆಲಸಕ್ಕೆ ಮರಳಿದ ಅನುಶ್ರೀ ಈ ವಿಚಾರದಲ್ಲಿ ತಪ್ಪು ಮಾಡಲಿಲ್ಲ
Image
ಹಠ ಮಾಡಿ ವಿಷ್ಣುವರ್ಧನ್ ಸಿನಿಮಾದಲ್ಲಿ ನಟಿಸಿದ್ದ ನಟ ಅಕ್ಷಯ್ ಕುಮಾರ್

ಯಾವುದೇ ಸಿನಿಮಾ ಸಂಪೂರ್ಣವಾಗಿ ಅರ್ಥವಾಗಬೇಕು ಎಂದರೆ ಅದಕ್ಕೆ ಭಾಷೆ ತುಂಬಾನೇ ಮುಖ್ಯ. ಸಿನಿಮಾನ ಮಲಯಾಳಂನಲ್ಲೇ ನೋಡಿದರೆ ಚಿತ್ರದ ಸಂಪೂರ್ಣ ಸ್ವಾದ ಸಿಗೋದಿಲ್ಲ. ಹೀಗಾಗಿ, ಈ ಚಿತ್ರದ ಕನ್ನಡ ವರ್ಷನ್ ರಿಲೀಸ್ ಯಾವಾಗ ಎಂದು ಫ್ಯಾನ್ಸ್ ಪ್ರಶ್ನೆ ಮಾಡುತ್ತಿದ್ದಾರೆ. ವಿಚಿತ್ರ ಎಂದರೆ, ಈ ಚಿತ್ರದ ತಮಿಳು ಹಾಗೂ ಹಿಂದಿ ವರ್ಷನ್​ಗಳು ಬೆಂಗಳೂರಿನಲ್ಲಿ ಲಭ್ಯವಿದೆ. ಆದರೆ, ಕನ್ನಡದಲ್ಲಿ ಮಾತ್ರ ಸಿನಿಮಾ ನೋಡಲು ಅವಕಾಶ ಇಲ್ಲ. ಈ ಬಗ್ಗೆ ಅನೇಕರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ರಾಜ್ ಬಿ. ಶೆಟ್ಟಿ ಮುಟ್ಟಿದ್ದೆಲ್ಲ ಚಿನ್ನ; ಅವರು ಕರ್ನಾಟಕದಲ್ಲಿ ಹಂಚಿಕೆ ಮಾಡಿದ ‘ಲೋಕಃ’ ಗಳಿಕೆ ಇಷ್ಟೊಂದಾ?

‘ಲೋಕಃ: ಚಾಪ್ಟರ್ 1-ಚಂದ್ರ’ ಸಿನಿಮಾ ಅಭಿಮಾನಿಗಳಿಂದ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ಸೂಪರ್ ಹಿಟ್ ಆಗಿದೆ. ಫ್ಯಾನ್ಸ್ ಈ ಚಿತ್ರವನ್ನು ಮುಗಿಬಿದ್ದು ವೀಕ್ಷಣೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲೂ ಸಿನಿಮಾಗೆ ಸಾಕಷ್ಟು ಶೋಗಳು ಸಿಕ್ಕಿವೆ. ಈ ಚಿತ್ರದಲ್ಲಿ ಬಳಕೆ ಆದ ಭಾಷೆ ಬೇಸರ ಮೂಡಿಸುವ ರೀತಿಯಲ್ಲಿ ಇತ್ತು. ಆ ಬಳಿಕ ದುಲ್ಖರ್ ಅವರು ಈ ವಿಚಾರದಲ್ಲಿ ಕ್ಷಮೆ ಕೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಹರತಾಳು ಹಾಲಪ್ಪ ಭರ್ಜರಿ ಡ್ಯಾನ್ಸ್
ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಹರತಾಳು ಹಾಲಪ್ಪ ಭರ್ಜರಿ ಡ್ಯಾನ್ಸ್
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗ್ಯಾರಂಟಿ ಕೊಟ್ಟಿದ್ದೇವೆ, ಈಗ ಸಮಸ್ಯೆಯಲ್ಲಿ ಒದ್ದಾಡುತ್ತಿದ್ದೇವೆ: ಬಾಲಕೃಷ್ಣ
ಗ್ಯಾರಂಟಿ ಕೊಟ್ಟಿದ್ದೇವೆ, ಈಗ ಸಮಸ್ಯೆಯಲ್ಲಿ ಒದ್ದಾಡುತ್ತಿದ್ದೇವೆ: ಬಾಲಕೃಷ್ಣ
ಇಂದಿನಿಂದ ಪಿತೃಪಕ್ಷ ಪ್ರಾರಂಭ
ಇಂದಿನಿಂದ ಪಿತೃಪಕ್ಷ ಪ್ರಾರಂಭ
ಮೈಸೂರಿನಲ್ಲಿ ಕೇವಲ 8 ತಿಂಗಳಲ್ಲಿ 36 ಕೋಟಿ ರೂ. ಲೂಟಿ
ಮೈಸೂರಿನಲ್ಲಿ ಕೇವಲ 8 ತಿಂಗಳಲ್ಲಿ 36 ಕೋಟಿ ರೂ. ಲೂಟಿ
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ
ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ