AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಾರ್ಡ್ ಗಾಗ’ ಸಿನಿಮಾದ ಫಸ್ಟ್ ಲುಕ್, ಮೋಶನ್ ಪೋಸ್ಟರ್ ಬಿಡುಗಡೆ

ಉಡುಪಿ, ಗೋಕರ್ಣ, ಹಾಸನ ಸುತ್ತಮುತ್ತ ‘ಲಾರ್ಡ್ ಗಾಗ’ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಶೂನ್ಯ, ಸ್ವರೂಪಿಣಿ, ದಿಶಾ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಶೀಘ್ರದಲ್ಲೇ ಚಿತ್ರದ ಟೀಸರ್ ಬಿಡುಗಡೆ ಆಗಲಿದೆ. ಕನ್ನಡದ ಜೊತೆಗೆ ಏಕಕಾಲಕ್ಕೆ 7ಕ್ಕೂ ಹೆಚ್ಚು ಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಮಾಡುವ ಪ್ರಯತ್ನ ಜಾರಿಯಲ್ಲಿದೆ.

‘ಲಾರ್ಡ್ ಗಾಗ’ ಸಿನಿಮಾದ ಫಸ್ಟ್ ಲುಕ್, ಮೋಶನ್ ಪೋಸ್ಟರ್ ಬಿಡುಗಡೆ
Lord Gaaga Kannada Film Poster
ಮದನ್​ ಕುಮಾರ್​
|

Updated on: Oct 11, 2026 | 12:57 PM

Share

ಭಿನ್ನ ಶೀರ್ಷಿಕೆ ಹೊಂದಿರುವ ‘ಲಾರ್ಡ್ ಗಾಗ’ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ. ಮನುಷ್ಯನ ಮನಸ್ಸಿನಲ್ಲಿ ಮೂಡುವ ಪ್ರೀತಿ, ಪ್ರೇಮ, ಪ್ರಣಯ, ಭಾವನೆ, ವ್ಯಸನ, ಆಯ್ಕೆ ಎಲ್ಲದರ ಚಿತ್ರಣ ಈ ಸಿನಿಮಾದಲ್ಲಿ ಇರಲಿದೆ. ಅದನ್ನು ರೊಮ್ಯಾಂಟಿಕ್ ಸೈಕಾಲಜಿಕಲ್ ಥ್ರಿಲ್ಲರ್ ಶೈಲಿಯಲ್ಲಿ ತೆರೆಮೇಲೆ ತೋರಿಸುವುದಾಗಿ ಚಿತ್ರತಂಡ ಹೇಳಿದೆ. ಇದೊಂದು ಕಾಲಾತೀತ ಕಥೆಯ ಸಿನಿಮಾ. ಇಗೋ ಸೆಂಟ್ರಿಕ್ ಆಗಿರುವಂತಹ ಕಥೆಯೊಂದು ಈ ಸಿನಿಮಾದಲ್ಲಿದೆ. ಹಿಮ್ಮುಖ ನಿರೂಪಣೆಯಲ್ಲಿ ಇಡೀ ಚಿತ್ರದ ಕಥೆ ಸಾಗುತ್ತದೆ ಎಂದು ಚಿತ್ರತಂಡ ವಿವರಣೆ ನೀಡಿದೆ.

‘ಲಾರ್ಡ್ ಗಾಗ’ ಸಿನಿಮಾಗೆ ವೈಕೆ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಝೀರೋ ಗ್ರ್ಯಾವಿಟಿ ಫಿಲ್ಮ್ಸ್’ ಬ್ಯಾನರ್ ಮೂಲಕ ಈ ಚಿತ್ರ ನಿರ್ಮಾಣ ಆಗುತ್ತಿದೆ. ಉದ್ಯಮಿ ಮುಕಿ ರೆಘುನಾಥನ್ ಅವರು ನಿರ್ಮಿಸುತ್ತಿದ್ದಾರೆ. ರೊಮ್ಯಾಂಟಿಕ್ ಥ್ರಿಲ್ಲರ್ ಶೈಲಿಯ ಈ ಚಿತ್ರದಲ್ಲಿ ಶೂನ್ಯ ಅವರು ಹೀರೋ ಆಗಿ ನಟಿಸಿದ್ದು, ಸ್ವರೂಪಿಣಿ ಹಾಗೂ ದಿಶಾ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ನಿರ್ಮಾಪಕ ಮುಕಿ ರೆಗುನಾಥನ್ ಕೂಡ ಒಂದು ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ಇತ್ತೀಚೆಗೆ ‘ಲಾರ್ಡ್ ಗಾಗ’ ಸಿನಿಮಾದ ಟೈಟಲ್ ಪೋಸ್ಟರ್ ಹಾಗೂ ಮೋಶನ್ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈಗಾಗಲೇ ಸದ್ದಿಲ್ಲದೆ ತನ್ನ ಬಹುತೇಕ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ, ಚಿತ್ರದ ಕಲಾವಿದರು ಮತ್ತು ತಂತ್ರಜ್ಞರನ್ನು ಪರಿಚಯಿಸಿದೆ.

Lord Gaaga Movie Team

Lord Gaaga Movie Team

‘ಈ ಸಿನಿಮಾ ಇಡೀ ಚಿತ್ರರಂಗಕ್ಕೆ ಹೊಸ ಮೈಲಿಗಲ್ಲು ಆಗಬೇಕು ಎಂದು ಎಲ್ಲರೂ ಸಾಕಷ್ಟು ಪರಿಶ್ರಮ ಹಾಕಿದ್ದೇವೆ. ಅನೇಕ ತಿದ್ದುಪಡಿಗಳ ನಂತರ ಒಂದೊಳ್ಳೆ ಸಿನಿಮಾ ಆಗಿದೆ. ಈಗಾಗಲೇ ಸುಮಾರು ಮೂರು ಸಾವಿರಕ್ಕೂ ಅಧಿಕ ಬೇರೆ ಬೇರೆ ವರ್ಗದ ಪ್ರೇಕ್ಷಕರಿಗೆ ಚಿತ್ರವನ್ನು ತೋರಿಸಲಾಗಿದ್ದು, ಎಲ್ಲರ ಅನಿಸಿಕೆ, ಅಭಿಪ್ರಾಯ, ಸಲಹೆ ಪಡೆದುಕೊಂಡು ಇದೀಗ ಸಿನಿಮಾ ಅಂತಿಮ ರೂಪ ಪಡೆದುಕೊಂಡಿದೆ’ ಎಂದು ನಿರ್ಮಾಪಕ ಮುಕಿ ರೆಗುನಾಥನ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ಜೈಲರ್ 2 ಅಬ್ಬರ: ಬುಕಿಂಗ್ ಶುರುವಾದ ಒಂದೇ ದಿನದಲ್ಲಿ 20 ಕೋಟಿ ರೂ. ಗಳಿಕೆ

ನಟ ಶೂನ್ಯ ಮಾತನಾಡಿ, ‘ನಾನು ಈ ಸಿನಿಮಾದ ಹೀರೋ ಎಂಬುದಕ್ಕಿಂತ ಒಂದು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದೇನೆ ಎಂದು ಹೇಳಬಹುದು. ಯಾಕೆಂದರೆ ಈ ಚಿತ್ರದಲ್ಲಿ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯೇ ನಿಜವಾದ ಹೀರೋ. ಈ ಸಿನಿಮಾಕ್ಕೂ ಮುನ್ನ ಸುಮಾರು 45ಕ್ಕೂ ಹೆಚ್ಚು ಕಥೆಗಳನ್ನು ಕೇಳಿದ್ದೆ. ಅಂತಿಮವಾಗಿ ಈ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡೆ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ