AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಫರೆಂಟ್ ಶೀರ್ಷಿಕೆಯ ‘ಲಾರ್ಡ್ ಗಾಗ’ ಸಿನಿಮಾದಿಂದ ಟೀಸರ್ ರಿಲೀಸ್

‘ಲಾರ್ಡ್ ಗಾಗ’ ಸಿನಿಮಾದಲ್ಲಿ ಶೂನ್ಯ, ಸ್ವರೂಪಿಣಿ, ದಿಶಾ ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಕನ್ನಡದ ಈ ಸಿನಿಮಾ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಮುಕಿ ರೆಘುನಾಥನ್ ಅವರು ಬಂಡವಾಳ ಹೂಡಿದ್ದು, ನಿರ್ದೇಶಕ ವೈ.ಕೆ. ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ಈ ಚಿತ್ರದ ಟೀಸರ್ ಗಮನ ಸೆಳೆದಿದೆ.

ಡಿಫರೆಂಟ್ ಶೀರ್ಷಿಕೆಯ ‘ಲಾರ್ಡ್ ಗಾಗ’ ಸಿನಿಮಾದಿಂದ ಟೀಸರ್ ರಿಲೀಸ್
Lord Gaaga Team
ಮದನ್​ ಕುಮಾರ್​
|

Updated on: Nov 06, 2026 | 10:02 PM

Share

ಚಂದನವನದಲ್ಲಿ ಕೆಲವು ಸಿನಿಮಾಗಳು ಸ್ಟಾರ್ ಕಲಾವಿದರಿಂದ ಹಾಗೂ ಬಿಗ್ ಬಜೆಟ್ ಕಾರಣದಿಂದ ಗಮನ ಸೆಳೆದರೆ, ಇನ್ನು ಕೆಲವು ಸಿನಿಮಾಗಳು ತಮ್ಮ ಡಿಫರೆಂಟ್ ಶೀರ್ಷಿಕೆ ಹಾಗೂ ಅಪರೂಪದ ಕಥಾವಸ್ತುವಿನ ಕಾರಣದಿಂದ ಗಮನ ಸೆಳೆಯುವಲ್ಲಿ ಯಶಸ್ವಿಯಾಗುತ್ತವೆ. ಇತ್ತೀಚೆಗೆ ಹೀಗೆ ತನ್ನ ಟೈಟಲ್, ಕಂಟೆಂಟ್ ಮತ್ತು ಪ್ರೆಸಂಟೇಷನ್ ಮೂಲಕ ಗಮನ ಸೆಳೆಯುತ್ತಿರುವ ಚಿತ್ರ ‘ಲಾರ್ಡ್ ಗಾಗ’. ಈ ಸಿನಿಮಾದ ಹೊಸ ಟೀಸರ್ ರಿಲೀಸ್ ಆಗಿದೆ.

ಸದ್ದಿಲ್ಲದೇ ತನ್ನ ಬಹುತೇಕ ಚಿತ್ರೀಕರಣ ಪೂರ್ಣಗೊಳಿಸಿರುವ ‘ಲಾರ್ಡ್ ಗಾಗ’ ಚಿತ್ರತಂಡ ಕೆಲವು ತಿಂಗಳ ಹಿಂದಷ್ಟೇ ಟೈಟಲ್ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿತ್ತು. ಇದೀಗ ಚಿತ್ರತಂಡದವರು ತಮ್ಮ ಸಿನಿಮಾದ ಮೊದಲ ಟೀಸರ್ ಅನಾವರಣ ಮಾಡಿದ್ದಾರೆ. ‘ಲಾರ್ಡ್ ಗಾಗ’ ಸಿನಿಮಾಗೆ ಯುವ ನಿರ್ದೇಶಕ ವೈಕೆ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಝೀರೋ ಗ್ರ್ಯಾವಿಟಿ ಫಿಲ್ಮ್ಸ್’ ಬ್ಯಾನರ್ ಮೂಲಕ ನಿರ್ಮಾಣವಾಗುತ್ತಿರುವ ಈ ಸಿನಿಮಾಗೆ ಉದ್ಯಮಿ ಮುಕಿ ರೆಘುನಾಥನ್ ಅವರು ಬಂಡವಾಳ ಹೂಡಿದ್ದಾರೆ.

ಶೀರ್ಷಿಕೆಯೇ ಹೇಳುವಂತೆ ‘ಲಾರ್ಡ್ ಗಾಗ’ ಎಂಬುದು ಒಂದು ರಗಡ್ ಆದಂತಹ ಕಥೆಯ ಸಿನಿಮಾ. ಮನುಷ್ಯನ ಮನಸ್ಸಿನಲ್ಲಿ ಮೂಡುವ ಪ್ರೀತಿ, ಪ್ರೇಮ, ಪ್ರಣಯ, ಭಾವನೆ, ವ್ಯಸನ, ಆಯ್ಕೆ ಎಲ್ಲದರ ಚಿತ್ರಣ ಈ ಸಿನಿಮಾದಲ್ಲಿ ಇರಲಿದೆ. ಅದನ್ನು ರೊಮ್ಯಾಂಟಿಕ್ ಸೈಕಾಲಜಿಕಲ್ ಥ್ರಿಲ್ಲರ್ ಶೈಲಿಯಲ್ಲಿ ತೆರೆಮೇಲೆ ತೋರಿಸಿದ್ದೇವೆ ಎಂದು ಚಿತ್ರತಂಡದವರು ಹೇಳಿದ್ದಾರೆ.

ಈಗ ಬಿಡುಗಡೆಯಾಗಿರುವ ಮೊದಲ ಟೀಸರ್ ಕೂಡ ಕಲ್ಟ್ ಶೈಲಿಯಲ್ಲಿ ಮೂಡಿಬಂದಿದ್ದು, ಹೊಸ ರೀತಿಯಲ್ಲಿ ನೋಡುಗರನ್ನು ಆಕರ್ಷಿಸುತ್ತದೆ. ಈ ಟೀಸರ್ ಮೂಲಕ ಕಥಾಹಂದರದ ಎಳೆಯನ್ನು ಮಾತ್ರ ಬಿಟ್ಟುಕೊಟ್ಟಿರುವ ಚಿತ್ರತಂಡ, ಶೀಘ್ರದಲ್ಲೇ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಬಿಡುಗಡೆ ಮಾಡಲು ಯೋಜನೆ ಹಾಕಿಕೊಂಡಿದೆ. ಅದಕ್ಕಾಗಿ ಸಿನಿಪ್ರಿಯರು ಕಾದಿದ್ದಾರೆ.

ಇದನ್ನೂ ಓದಿ: ‘ಲಾರ್ಡ್ ಗಾಗ’ ಸಿನಿಮಾದ ಫಸ್ಟ್ ಲುಕ್, ಮೋಶನ್ ಪೋಸ್ಟರ್ ಬಿಡುಗಡೆ

‘ಲಾರ್ಡ್ ಗಾಗ’ ಸಿನಿಮಾದಲ್ಲಿ ಶೂನ್ಯ ಅವರು ಹೀರೋ ಆಗಿ ಅಭಿನಯಿಸಿದ್ದಾರೆ. ಸ್ವರೂಪಿಣಿ ಹಾಗೂ ದಿಶಾ ಅವರು ನಾಯಕಿಯರಾಗಿ ನಟಿಸಿದ್ದಾರೆ. ನಿರ್ಮಾಪಕ ಮುಕಿ ರೆಘುನಾಥನ್ ಸಹ ಈ ಸಿನಿಮಾದ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಮಲಯಾಳಂ, ಹಿಂದಿ, ಬೆಂಗಾಲಿ, ಭೋಜಪುರಿ ಸೇರಿದಂತೆ ಏಳಕ್ಕೂ ಅಧಿಕ ಭಾಷೆಗಳಲ್ಲಿ ತೆರೆಗೆ ತರುವ ಪ್ರಯತ್ನದಲ್ಲಿದೆ ಚಿತ್ರತಂಡ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More