ಮಾರ್ಚ್ 19ಕ್ಕೆ ‘ಟಾಕ್ಸಿಕ್’ ಬದಲು ರಿಲೀಸ್ ಆಗಲಿದೆ ‘ಲವ್ ಮಾಕ್ಟೇಲ್ 3’ ಸಿನಿಮಾ

ಏಪ್ರಿಲ್ ತಿಂಗಳಲ್ಲಿ ರಿಲೀಸ್ ಆಗಬೇಕಿದ್ದ ‘ಲವ್ ಮಾಕ್ಟೇಲ್ 3’ ಚಿತ್ರ ಮಾರ್ಚ್ 19ರಂದು ಬರಲಿದೆ. ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋದ ಬೆನ್ನಲ್ಲೇ ಈ ತೀರ್ಮಾನ ಮಾಡಲಾಗಿದೆ. ‘ಕೆವಿಎನ್’ ಸಂಸ್ಥೆಯೇ ‘ಲವ್ ಮಾಕ್ಟೇಲ್ 3’ ಸಿನಿಮಾವನ್ನು ವಿತರಣೆ ಮಾಡಲಿದೆ. ಆ ಬಗ್ಗೆ ಇಲ್ಲಿದೆ ವಿವರ..

ಮಾರ್ಚ್ 19ಕ್ಕೆ ‘ಟಾಕ್ಸಿಕ್’ ಬದಲು ರಿಲೀಸ್ ಆಗಲಿದೆ ‘ಲವ್ ಮಾಕ್ಟೇಲ್ 3’ ಸಿನಿಮಾ
Toxic, Love Mocktail 3 Posters

Updated on: Mar 04, 2026 | 3:43 PM

ಮಾರ್ಚ್ 19ರಂದು ‘ಟಾಕ್ಸಿಕ್’ (Toxic) ಸಿನಿಮಾ ನೋಡಲು ಸಿನಿಪ್ರಿಯರು ಕಾದಿದ್ದರು. ಆದರೆ ಕಾರಣಾಂತರಗಳಿಂದ ಆ ಸಿನಿಮಾದ ರಿಲೀಸ್ ದಿನಾಂಕವನ್ನು ಮುಂದೂಡಲಾಗಿದೆ. ಈಗ ‘ರಾಕಿಂಗ್ ಸ್ಟಾರ್’ ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗುತ್ತಲೇ, ಆ ದಿನಾಂಕದಲ್ಲಿ ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾವನ್ನು ಬಿಡುಗಡೆ ಮಾಡಲು ಡಾರ್ಲಿಂಗ್ ಕೃಷ್ಣ ಸಜ್ಜಾಗಿದ್ದಾರೆ. ಆ ಮೂಲಕ ಅವರು ಅಭಿಮಾನಿಗಳಿಗೆ ಗುಡ್​ ನ್ಯೂಸ್ ನೀಡಿದ್ದಾರೆ.

ಯುಗಾದಿಯ ರಜೆ, ಅದರ ಬೆನ್ನಲ್ಲಿಯೇ ಶುರುವಾಗುವ ವೀಕೆಂಡ್ ಸೇರಿದಂತೆ ಮಾರ್ಚ್ 19 ಎಲ್ಲ ರೀತಿಯಿಂದಲೂ ಚಿತ್ರತಂಡಗಳಿಗೆ ಸೂಕ್ತವಾದ ದಿನಾಂಕ. ಆ ದಿನಾಂಕದಂದು ‘ಟಾಕ್ಸಿಕ್’ ಬಿಡುಗಡೆ ಆಗದಿದ್ದರೂ, ಅದೇ ದಿನ ‘ಲವ್ ಮಾಕ್ಟೇಲ್ 3’ ಚಿತ್ರವನ್ನು ಬಿಡುಗಡೆ ಮಾಡಲು ‘ಕೆವಿಎನ್’ ಸಂಸ್ಥೆ ತೀರ್ಮಾನಿಸಿದೆ. ಈ ಸಿನಿಮಾವನ್ನು ಕೆವಿಎನ್ ಸಂಸ್ಥೆ ವಿತರಿಸುತ್ತಿದೆ.

‘ಲವ್ ಮಾಕ್ಟೇಲ್ 3’ ಸಿನಿಮಾಗೆ ಡಾರ್ಲಿಂಗ್ ಕೃಷ್ಣ ನಿರ್ದೇಶನ ಮಾಡಿ, ನಾಯಕನಾಗಿ ನಟಿಸಿದ್ದಾರೆ. ‘ಟಾಕ್ಸಿಕ್’ ಬಿಡುಗಡೆ ದಿನಾಂಕ ಮುಂದೆ ಹೋಗುತ್ತಲೇ ‘ಲವ್ ಮಾಕ್ಟೇಲ್ 3’ ಪಾಲಿಗೆ ಅದೃಷ್ಟ ಖುಲಾಯಿಸಿದೆ. ಈ ಚಿತ್ರವನ್ನು ಏಪ್ರಿಲ್ 10ರಂದು ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಲಾಗಿತ್ತು. ಆದರೆ ಬದಲಾದ ಸನ್ನಿವೇಶದಲ್ಲಿ, ಯುಗಾದಿ ರಜೆಯಂದೇ ‘ಲವ್ ಮಾಕ್ಟೇಲ್ 3’ ತೆರೆಕಾಣಿಸಲು ಚಿತ್ರತಂಡ ತೀರ್ಮಾನಿಸಿದೆ.

ಮಾರ್ಚ್ 19ರ ಸಮಯದಲ್ಲಿ ಯುಗಾದಿ, ರಂಜಾನ್ ಮುಂತಾದ ಹಬ್ಬಗಳಿಗೆ ಸಾಲು ಸಾಲು ರಜೆಗಳು ಇರಲಿವೆ. ಸಿನಿಮಾದ ಬಾಕ್ಸ್ ಆಫೀಸ್​​ ಗಳಿಕೆಗೆ ಅದು ಪ್ರಶಸ್ತವಾದ ಸಮಯ. ಅಂತಹ ಲಾಭದಾಯಕ ದಿನಾಂಕವು ‘ಲವ್ ಮಾಕ್ಟೇಲ್ 3’ ಸಿನಿಮಾಗೆ ಸಿಕ್ಕಿದೆ. ‘ಕ್ರಿಸ್‌ಮಿ’ ಬ್ಯಾನರ್ ಮೂಲಕ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: ಲವ್ ಮಾಕ್ಟೇಲ್ 3: ಹೊಸ ಹಾಡು ರಿಲೀಸ್

‘ಲವ್ ಮಾಕ್ಟೇಲ್’ ಮತ್ತು ‘ಲವ್ ಮಾಕ್ಟೇಲ್ 2’ ಹಿಟ್ ಆಗಿದ್ದರಿಂದ ‘ಲವ್ ಮಾಕ್ಟೇಲ್ 3’ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಜೊತೆ ಮಿಲನಾ ನಾಗರಾಜ್, ಸಂವೃತ, ಅಮೃತಾ ಅಯ್ಯಂಗಾರ್, ರೇಚಲ್ ಡೇವಿಡ್, ಅಭಿಲಾಶ್ ದಳಪತಿ ಮುಂತಾದವರು ನಟಿಸಿದ್ದಾರೆ. ಈಗಾಗಲೇ ಹಾಡುಗಳು ಬಿಡುಗಡೆಯಾಗಿ ಗಮನ ಸೆಳೆಯುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us