AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಷ್ಟಿದ್ರೆ ಆ ರೀತಿಯ ಪಾತ್ರವನ್ನೇ ಮಾಡಬಾರದು’; ಗೀತಾ ಬಾಡಿ ಶೇಮಿಂಗ್ ಆರೋಪಕ್ಕೆ ಮಿಲನಾ ಖಡಕ್ ಉತ್ತರ

'ಲವ್ ಮಾಕ್ಟೇಲ್' ಚಿತ್ರದಲ್ಲಿ ಬಾಡಿಶೇಮಿಂಗ್ ಡೈಲಾಗ್ ಕುರಿತು ಗೀತಾ ಭಾರತಿ ಭಟ್ ಅಸಮಾಧಾನ ಹೊರಹಾಕಿದ್ದರು. ‘ಹೂ ತರ ಇದ್ಲು, ಹೂಕೋಸ್ ತರ ಆಗಿದ್ದಾಳೆ’ ಎಂಬ ಸಂಭಾಷಣೆಗೆ ಅವರ ಅಸಮಾಧಾನವಿತ್ತು. ಇದಕ್ಕೆ ಚಿತ್ರತಂಡದ ಮಿಲನಾ ನಾಗರಾಜ್ ಮತ್ತು ನಿರ್ದೇಶಕ ಕೃಷ್ಣ ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಪಾತ್ರದ ಕುರಿತು ಕಲಾವಿದರಿಗೆ ಮೊದಲೇ ತಿಳಿದಿರುತ್ತದೆ, ಒಪ್ಪಿಗೆ ಇಲ್ಲದಿದ್ದರೆ ನಟಿಸಬಾರದಿತ್ತು ಎಂದು ಖಡಕ್ ಉತ್ತರ ನೀಡಿದ್ದಾರೆ.

‘ಅಷ್ಟಿದ್ರೆ ಆ ರೀತಿಯ ಪಾತ್ರವನ್ನೇ ಮಾಡಬಾರದು’; ಗೀತಾ ಬಾಡಿ ಶೇಮಿಂಗ್ ಆರೋಪಕ್ಕೆ ಮಿಲನಾ ಖಡಕ್ ಉತ್ತರ
ಮಿಲನಾ-ಕೃಷ್ಣ
ರಾಜೇಶ್ ದುಗ್ಗುಮನೆ
|

Updated on:Mar 10, 2026 | 7:10 AM

Share

ಗೀತಾ ಭಾರತಿ ಭಟ್ ಅವರು ಸಿನಿಮಾದಲ್ಲಿ ತಮಗಾದ ಬಾಡಿಶೇಮಿಂಗ್ ಬಗ್ಗೆ ಮಾತನಾಡಿದ್ದರು. ‘ಲವ್ ಮಾಕ್ಟೇಲ್’ ಚಿತ್ರದಲ್ಲಿ ‘ಹೂ ತರ ಇದ್ಲು, ಹೂಕೋಸ್ ತರ ಆಗಿದ್ದಾಳೆ’ ಎಂಬ ಡೈಲಾಗ್ ಇದೆ. ಈ ದೃಶ್ಯವನ್ನು ಗೀತಾ ಮಾಡಿದರು. ಥಿಯೇಟರ್​​​ನಲ್ಲಿ ನೋಡಿದಾಗ ಅವರಿಗೆ ಶಾಕ್ ಆಗಿತ್ತಂತೆ. ಅದಕ್ಕೆ ಅವರು ತಕರಾರು ತೆಗೆದಿದ್ದರು. ಈ ವಿಷಯಕ್ಕೆ ಚಿತ್ರದ ನಿರ್ಮಾಪಕಿ ಮಿಲನಾ ನಾಗರಾಜ್ ಹಾಗೂ ನಿರ್ದೇಶಕ ಕೃಷ್ಣ ಅವರು ಪ್ರತಿಕ್ರಿಯಿಸಿದ್ದಾರೆ. ‘ಅಷ್ಟಿದ್ರೆ ಸಿನಿಮಾನೇ ಒಪ್ಪಿಕೊಳ್ಳಬಾರದಿತ್ತು’ ಎಂದು ಖಡಕ್ ಆಗಿ ಉತ್ತರಿಸಿದ್ದಾರೆ.

ಈ ಮೊದಲು ಮಾತನಾಡಿದ್ದ ಗೀತಾ ಅವರು, ನಿರ್ದೇಶಕ ಕೃಷ್ಣ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ಸಿನಿಮಾದಲ್ಲಿ ಈ ರೀತಿಯ ಡೈಲಾಗ್ ಇದೆ ಎಂಬುದೇ ಗೊತ್ತಿರಲಿಲ್ಲ ಎಂದು ಆರೋಪಿಸಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ‘ಫಸ್ಟ್ ಡೇ ಫಸ್ಟ್ ಶೋ ಕನ್ನಡ’ ಯೂಟ್ಯೂಬ್ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಮಿಲನಾ ಹಾಗೂ ಕೃಷ್ಣ ಮಾತನಾಡಿದ್ದಾರೆ.

‘ಅದು ಬಾಡಿ ಶೇಮಿಂಗ್ ಮಾಡಿದ್ದಲ್ಲ. ರೈಮಿಂಗ್ ಆಗಿ ಬರೆದಿದ್ದು ಅಷ್ಟೇ’ ಎಂದು ಕೃಷ್ಣ ಅವರು ಹೇಳಿದ್ದಾರೆ. ‘ಅವರಿಗೆ ಸಿನಿಮಾ ಪಾತ್ರ ಗೊತ್ತಿತ್ತು. ಈಗ ಮಾತನಾಡುವ ಅವಶ್ಯಕತೆ ಇಲ್ಲ. ಅವರು ಸಂಪೂರ್ಣ ದೃಶ್ಯವನ್ನೇ ಮಾಡಿ ಹೋಗಿದ್ದಾರೆ. ಕಲಾವಿದರಿಗೆ ಹೇಳದೆ ನಾವು ದೃಶ್ಯ ಮಾಡೋಕಾಗಲ್ಲ. ಅವರಿಗೆ ಆ ಬಳಿಕ ಹಾಗೆ ಅನಿಸಿರಬಹುದು. ಅಷ್ಟಿದ್ರೆ ಅವರು ಆ ರೀತಿಯ ಪಾತ್ರಗಳನ್ನು ಮಾಡಬಾರದು. ಯಾವುದನ್ನು ಮುಚ್ಚಿಟ್ಟು ಮಾಡಲ್ಲ. ಆಡಿಷನ್ ಮಾಡಿ ಕಾಸ್ಟ್ ಮಾಡಿರೋದು. ನಿಮಗೆ ಆಗಲ್ಲ ಅಂದ್ರೆ ಬಿಡಿ’ ಎಂದು ಮಿಲನ ಖಡಕ್ ಆಗಿ ಹೇಳಿದ್ದಾರೆ.

‘ಗೀತಾ ಅವರು ಧಾರಾವಾಹಿ ಮಾಡುತ್ತಾ ಇದ್ದರು. ಅದರಲ್ಲೂ ಅದೇ ಕಥೆ ಇತ್ತು. ಮೂರು ವರ್ಷ ಆ ರೀತಿಯ ಧಾರಾವಾಹಿ ಮಾಡಿ, ನಮ್ಮ ಒಂದು ದೃಶ್ಯಕ್ಕೆ ತಕರಾರು ತೆಗೆದರೆ ಹೇಗೆ? ಮೇಕಿಂಗ್ ವಿಡಿಯೋ ಯೂಟ್ಯೂಬ್​​ನಲ್ಲೇ ಇದೆ. ಯಾರಿಗೂ ಹರ್ಟ್ ಮಾಡಬೇಕು ಎಂದು ಮಾಡಿದ್ದಲ್ಲ. ಅನೇಕರಿಗೆ ಕನೆಕ್ಟ್ ಆಗಿರೋ ವಿಷಯ ಅದು’ ಎಂದು ಕೃಷ್ಣ ಅವರು ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ‘ಲವ್ ಮಾಕ್ಟೇಲ್​ನಲ್ಲಿ ನನಗೆ ಬಾಡಿ ಶೇಮಿಂಗ್ ಆಗಿದೆ, ಆ ಪಾತ್ರ ಮಾಡಿ ತಪ್ಪು ಮಾಡಿದೆ’; ಗೀತಾ ಭಾರತಿ ಭಟ್

‘ಕಥಾ ನಾಯಕ ಆದಿ ಏನು ಫೀಲ್ ಮಾಡ್ತಾನೆ ಎಂದು ಬರೆದಿದ್ದು. ಕೆಲವರಿಗೆ ಬೇಸರ ಆಗಬಹುದು, ಕೆಲವರಿಗೆ ಖುಷಿ ಆಗಿರಬಹುದು. ಏನು ಮಾಡೋಕೂ ಆಗಲ್ಲ’ ಎಂದರು ಕೃಷ್ಣ. ‘ಕಾಮಿಡಿಯನ್ನು ಕಾಮಿಡಿತರ ತಗೋಬೇಕು’ ಎಂಬುದು ಮಿಲನಾ ಕೋರಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:10 am, Tue, 10 March 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ