Darling Krishna Milana Nagaraj Coronavirus| ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ಲವ್​​ ಮಾಕ್​ಟೈಲ್ ಖ್ಯಾತ ಜೋಡಿ​ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ತಗುಲಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

Darling Krishna Milana Nagaraj Coronavirus| ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ದೃಢ
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ದೃಢ
ಸಾಧು ಶ್ರೀನಾಥ್​

Updated on: Apr 14, 2021 | 12:58 PM

ಬೆಂಗಳೂರು: ಲವ್​​ ಮಾಕ್​ಟೈಲ್ ಖ್ಯಾತ ಜೋಡಿ​ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ತಗುಲಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ಸ್ಯಾಂಡಲ್​ವುಡ್ ಯುವ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್​ ಪ್ರೇಮಿಗಳ ದಿನದಂದು ಗಣ್ಯಾತಿಗಣ್ಯರ ಸಮ್ಮುಖದಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿದ್ದರು. ಅದ್ಧೂರಿ ಆರತಕ್ಷತೆ ಸಮಾರಂಭವೂ ನೆರವೇರಿತ್ತು.

ಕೆಲ ತಿಂಗಳ ಹಿಂದೆ ಸಪ್ತ ಪದಿ ತುಳಿದು ಮಾಲ್ಡೀವ್ಸ್​ನಲ್ಲಿ ಹನಿಮೂನ್ ಪ್ರವಾಸದ ಬಳಿಕ ವಾಪಾಸ್ ಆಗಿದ್ದ ಸ್ಯಾಂಡಲ್​ವುಡ್ ಕ್ಯೂಟ್ ಜೋಡಿ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ತಮ್ಮ ತಮ್ಮ ಸಿನಿಮಾ ಕೆಲಸಗಳಲ್ಲಿ ನಿರತರಾಗಿದ್ದರು. ಮದುವೆ ನಂತರ ಮಿಲನಾ ನಾಗರಾಜ್ ತಮ್ಮ ಹೊಸ ಸಿನಿಮಾದ ಶೂಟಿಂಗ್​ನಲ್ಲಿ ಭಾಗಿಯಾಗಿದ್ದರು. ಹಾಗೂ ಡಾರ್ಲಿಂಗ್ ಕೃಷ್ಣ ಕೂಡ ಕೆಲಸದಲ್ಲಿ ತೊಡಗಿಕೊಂಡಿದ್ದರು. ಈಗ ಈ ಜೋಡಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ನ್ಮಮ ಸಂಪರ್ಕಕ್ಕೆ ಬಂದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಡಾರ್ಲಿಂಗ್ ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮೂಲಕ ತಿಳಿಸಿದ್ದಾರೆ.

ಇದನ್ನು ಓದಿ: ಸಪ್ತಪದಿ ತುಳಿದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್

(Love mocktail pair darling krishna and milana nagaraj contracted coronavirus)

Published On - 12:33 pm, Wed, 14 April 21

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us