ಫೈಟರ್ ವಿವೇಕ್ ಸಾವು ಪ್ರಕರಣ; ಎಲ್ಲದಕ್ಕೂ ಸ್ಪಷ್ಟನೆ ನೀಡಲು ಮುಂದಾದ ನಿರ್ಮಾಪಕ ಗುರು ದೇಶಪಾಂಡೆ
‘ಲವ್ ಯೂ ರಚ್ಚು’ ಚಿತ್ರದ ಚಿತ್ರೀಕರಣದ ವೇಳೆ ಫೈಟರ್ ವಿವೇಕ್ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಫೇಸ್ಬುಕ್ ಲೈವ್ ಬಂದು ಕೆಲವು ವಿಚಾರಗಳನ್ನು ಸ್ಪಷ್ಟಪಡಿಸಲಿದ್ದೇನೆ ಎಂದು ನಿರ್ಮಾಪಕ ಗುರು ದೇಶಪಾಂಡೆ ತಿಳಿಸಿದ್ದಾರೆ. ವಿವೇಕ್ ಕುಟುಂಬದವರನ್ನು ಭೇಟಿಯಾಗಿ ಸಾಂತ್ವಾನ ತಿಳಿಸುತ್ತೇನೆ ಎಂದು ಅವರು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
‘ಲವ್ ಯೂ ರಚ್ಚು’ ಚಿತ್ರದ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಫೇಸ್ಬುಕ್ ಲೈವ್ ಮುಖಾಂತರ ಸ್ಪಷ್ಟನೆ ನೀಡುವುದಾಗಿ ನಿರ್ಮಾಪಕ ಗುರು ದೇಶಪಾಂಡೆ ತಿಳಿಸಿದ್ದಾರೆ. ಪ್ರಕರಣದ ನಂತರ ನಾಪತ್ತೆಯಾಗಿದ್ದ ಗುರು ದೇಶಪಾಂಡೆ, ಇದೇ ಮೊದಲ ಬಾರಿಗೆ ಘಟನೆಯ ಕುರಿತಂತೆ ಪ್ರತಿಕ್ರಿಯಿಸಿದ್ದಾರೆ. ಫೇಸ್ಬುಕ್ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಅವರು, ‘‘ಈ 20 ದಿನ ಬಹಳ ಕಷ್ಟ ದಿನಗಳಾಗಿದ್ದವು. ವಿವೇಕ್ ಕುಟುಂಬಕ್ಕೆ ಆದ ನಷ್ಟಕ್ಕೆ ನಾನು ಕ್ಷಮೆ ಕೇಳುವೆ’’ ಎಂದು ಬರೆದುಕೊಂಡಿದ್ದಾರೆ.
ವಿವೇಕ್ ಕುಟುಂಬವನ್ನು ಭೇಟಿಯಾಗಿ ಸಾಂತ್ವಾನ ಹೇಳುವುದಾಗಿ ತಿಳಿಸಿರುವ ಗುರು ದೇಶಪಾಂಡೆ, ಅವರ ಕುಟುಂಬಕ್ಕೆ ಅಗತ್ಯವಿರುವ ಸಹಾಯವನ್ನು ಮಾಡುವುದಾಗಿ ಬರೆದುಕೊಂಡಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಫೇಸ್ಬುಕ್ನಲ್ಲಿ ಲೈವ್ ಬಂದು, ಕೆಲವು ವಿಚಾರಗಳನ್ನು ಸ್ಪಷ್ಟಪಡಿಸುವುದಾಗಿ ತಿಳಿಸಿದ್ಧಾರೆ.
ಗುರು ದೇಶಪಾಂಡೆ ಹಂಚಿಕೊಂಡಿರುವ ಪೋಸ್ಟ್:
ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿ ‘ಲವ್ ಯೂ ರಚ್ಚು’ ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ರೋಪ್ ಎಳೆಯುವಾಗ ಫೈಟರ್ ವಿವೇಕ್ ಮೃತಪಟ್ಟಿದ್ದರು. ವಿದ್ಯುತ್ ತಂತಿಗೆ ರೋಪ್ ಸ್ಪರ್ಶಿಸಿದ್ದು ಇದಕ್ಕೆ ಕಾರಣವಾಗಿತ್ತು. ಇದರಲ್ಲಿ ಚಿತ್ರತಂಡದ ನಿರ್ಲಕ್ಷ್ಯ ಎದ್ದು ಕಂಡಿದೆ. ಹೀಗಾಗಿ, ನಿರ್ದೇಶಕ ಶಂಕರಯ್ಯ, ಸಾಹಸ ನಿರ್ದೇಶಕ ವಿನೋದ್ ಕುಮಾರ್, ಕ್ರೇನ್ ಚಾಲಕ ಮಹದೇವ್ ಅವರನ್ನು ಬಂಧಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಚಿತ್ರದ ನಾಯಕ ನಟ ಅಜೇಯ್ ರಾವ್ ಮತ್ತು ನಾಯಕಿ ರಚಿತಾ ರಾಮ್ ಬಿಡದಿ ಸ್ಟೇಷನ್ ನಲ್ಲಿ ಹೇಳಿಕೆ ದಾಖಲಿಸಿದ್ದಾರೆ.
‘ಲವ್ ಯೂ ರಚ್ಚು’ ಸಿನಿಮಾದಲ್ಲಿ ಅಜಯ್ ರಾವ್ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದು, ರಚಿತಾ ರಾಮ್ ಚಿತ್ರದ ನಾಯಕಿಯಾಗಿದ್ದಾರೆ. ಶಂಕರ್ ರಾಜ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಗುರು ದೇಶಪಾಂಡೆ ನಿರ್ಮಾಣ ಮಾಡುತ್ತಿದ್ದಾರೆ.
ಇದನ್ನೂ ಓದಿ:
ಬೆಂಗಳೂರಿನಲ್ಲಿ ರಾಜ್ ಕುಮಾರ್, ಶಂಕರ್ ನಾಗ್, ವಿಷ್ಣುವರ್ಧನ್ ಸೇರಿದಂತೆ ಮಹಾನ್ ನಾಯಕರ ಪುತ್ಥಳಿಗಳು ಶೀಘ್ರದಲ್ಲೇ ತೆರವು
ಸುದೀಪ್ ಹುಟ್ಟು ಹಬ್ಬಕ್ಕೆ ವಿಶೇಷ ಗಿಫ್ಟ್; ಇ-ಬುಕ್ ಹಾಗೂ ಆಡಿಯೋ ರೂಪದಲ್ಲಿ ಬಿಡುಗಡೆಯಾಗಲಿದೆ ಕಿಚ್ಚನ ಬದುಕಿನ ಕತೆ
(Love You Rachchu film producer Guru Deshpande writes in fb that he will clarify and he will meet Vivek family)