Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್ ಕುಮಾರಸ್ವಾಮಿಗಾಗಿ ಬೆಂಗಳೂರಿಗೆ ಬಂದ ಲೈಕಾ ಕುಟುಂಬ, ಅದ್ಧೂರಿ ಮುಹೂರ್ತ

Nikhil Kumaraswamy: ರಾಜಕೀಯಕ್ಕಾಗಿ ಸಿನಿಮಾ ರಂಗದಿಂದ ಬ್ರೇಕ್ ಪಡೆದಿದ್ದ ನಿಖಿಲ್ ಕುಮಾರಸ್ವಾಮಿ ಈಗ ಮತ್ತೆ ಚಿತ್ರರಂಗಕ್ಕೆ ಮರಳಿದ್ದಾರೆ. ದೊಡ್ಡ ನಿರ್ಮಾಣ ಸಂಸ್ಥೆಯೊಂದು ನಿಖಿಲ್ ಸಿನಿಮಾಕ್ಕೆ ಬಂಡವಾಳ ಹೂಡಲಿದ್ದು, ಸಿನಿಮಾದ ಮುಹೂರ್ತ ಇಂದು ಅದ್ಧೂರಿಯಾಗಿ ನೆರವೇರಿದೆ.

ನಿಖಿಲ್ ಕುಮಾರಸ್ವಾಮಿಗಾಗಿ ಬೆಂಗಳೂರಿಗೆ ಬಂದ ಲೈಕಾ ಕುಟುಂಬ, ಅದ್ಧೂರಿ ಮುಹೂರ್ತ
ನಿಖಿಲ್ ಕುಮಾರಸ್ವಾಮಿ
Follow us
ಮಂಜುನಾಥ ಸಿ.
|

Updated on: Aug 23, 2023 | 7:53 PM

ನಿಖಿಲ್ ಕುಮಾರಸ್ವಾಮಿ (Nikhil Kumaraswamy), ರಾಜಕೀಯದಿಂದ ಮತ್ತೆ ಸಿನಿಮಾ ರಂಗಕ್ಕೆ ಮರಳಿದ್ದಾರೆ. 2021 ರಲ್ಲಿ ಬಿಡುಗಡೆ ಆದ ‘ರೈಡರ್‘ (Rider) ಸಿನಿಮಾ ಬಳಿಕ ಚಿತ್ರರಂಗದಿಂದ ಅಂತರ ಕಾಯ್ದುಕೊಂಡು ರಾಜಕೀಯದಲ್ಲಿ ನಿಖಿಲ್ ಸಕ್ರಿಯರಾಗಿದ್ದರು. ವಿಧಾನಸಭೆ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸಿದ ನಿಖಿಲ್ ಕುಮಾರಸ್ವಾಮಿ ನಿರಾಸೆ ಅನುಭವಿಸಿದರು. ರಾಜಕೀಯದಲ್ಲಿ ಹಿನ್ನಡೆ ಅನುಭವಿಸಿದ ಬಳಿಕ ಈಗ ಮತ್ತೆ ಚಿತ್ರರಂಗಕ್ಕೆ ಮರಳಿದ್ದಾರೆ. ಅದೂ ಈ ಭಾರಿ ದೊಡ್ಡ ನಿರ್ಮಾಣ ಸಂಸ್ಥೆಯೊಂದು ನಿಖಿಲ್ ಸಿನಿಮಾಕ್ಕೆ ಬಂಡವಾಳ ಹೂಡಲು ಮುಂದಾಗಿದೆ.

ಕಮಲ್ ಹಾಸನ್, ಚಿರಂಜೀವಿ, ದಳಪತಿ ವಿಜಯ್, ವಿಕ್ರಂ, ಧನುಶ್ ಅಂಥಹಾ ಸ್ಟಾರ್ ನಟರ ಭಾರಿ ಬಜೆಟ್ ಸಿನಿಮಾಗಳಿಗೆ ಬಂಡವಾಳ ಹೂಡಿರುವ ಭಾರತದ ಅಗ್ರಗಣ್ಯ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾದ ಲೈಕಾ ಪ್ರೊಡಕ್ಷನ್ಸ್, ಇದೀಗ ನಿಖಿಲ್ ಕುಮಾರಸ್ವಾಮಿ ಜೊತೆ ಸಿನಿಮಾ ಮಾಡಲು ಮುಂದಾಗಿದೆ. ಲೈಕಾ ನಿರ್ಮಾಣ ಸಂಸ್ಥೆಯಡಿಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿನಿಯಿಸಲಿರುವ ಹೊಸ ಸಿನಿಮಾದ ಮುಹೂರ್ತ ಇಂದು (ಆಗಸ್ಟ್ 23) ನೆರವೇರಿದೆ. ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲ ನಿಖಿಲ್ ಹೊಸ ಸಿನಿಮಾಕ್ಕೆ ಅಧಿಕೃತ ಚಾಲನೆ ನೀಡಲಾಗಿದ್ದು, ಕಾರ್ಯಕ್ರಮಕ್ಕೆ ಮಾಜಿ ಪ್ರಧಾನ ಮಂತ್ರಿಗಳಾದ ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಭಾಗವಹಿಸಿದ್ದರು.

ಇದು ಲೈಕಾ ಸಂಸ್ಥೆಯ ಮೊಟ್ಟ ಮೊದಲ ಕನ್ನಡ ಸಿನಿಮಾ ಆಗಿದ್ದು, ಮುಹೂರ್ತಕ್ಕೆ ಇಡಿ ಲೈಕಾ ಕುಟುಂಬ ಲಂಡನ್ ನಿಂದ ಬೆಂಗಳೂರಿಗೆ ಆಗಮಿಸಿದ್ದು ವಿಶೇಷ. ಈ ಸಂದರ್ಭದಲ್ಲಿ ಮಾತನಾಡಿದ ಲೈಕಾ ಸಂಸ್ಥೆಯ ಚೇರ್​ಮನ್ ಸುಭಾಷ್ಕರನ್, ನಿಖಿಲ್ ಸಿನಿಮಾ ನಿರ್ಮಾಣ ಮಾಡಲು ಮೂರು ವರ್ಷಗಳ ಕಾಲ ಕಾಯುತ್ತಿದ್ದೆ. ಈಗ ಚಾಲನೆ ನೀಡಿರುವುದು ಖುಷಿಯ ವಿಚಾರ ಎಂದರು. ಇನ್ನು ಮುಹೂರ್ತದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ವರ್ಷಕ್ಕೆ ಮೂರು ಸಿನಿಮಾಗಳನ್ನು ಇನ್ನು ಮುಂದೆ ಮಾಡಲೇ ಬೇಕೆಂಬ ಯೋಜನೆ ಹಾಕಿಕೊಂಡಿದ್ದೇನೆ. ಒಂದರಹಿಂದೊಂದು ಸಿನಿಮಾಗಳನ್ನು ಮಾಡಿ ವೀಕ್ಷಕರನ್ನು ರಂಜಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ:Nikhil Kumaraswamy: ನಿಖಿಲ್ ಕುಮಾರಸ್ವಾಮಿ ರಾಜೀನಾಮೆ, ಮುಂದಿನ ಜೆಡಿಎಸ್​ ಯುವ ಸಾರಥಿ ಯಾರು?

ನಿಖಿಲ್ ನಟನೆಯ ಈ ಸಿನಿಮಾವನನ್ನು ಲಕ್ಷಣ್ ನಿರ್ದೇಶನ ಮಾಡಲಿದ್ದಾರೆ. ನಟಿ ಯುಕ್ತಿ ತರೇಜಾ ಈ ಸಿನಿಮಾಕ್ಕೆ ನಾಯಕಿ. ಇದು ಅವರ ಮೊದಲ ಕನ್ನಡ ಸಿನಿಮಾ ಸಹ ಹೌದು. ಕೋಮಲ್ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದು ಅಜನೀಶ್ ಲೋಕನಾಥ್ ಈ ಸಿನಿಮಾಕ್ಕೆ ಸಂಗೀತ ನೀಡುತ್ತಿದ್ದಾರೆ, ರಘು ನಿಡುವಳ್ಳಿ ಸಂಭಾಷಣೆ ಹಾಗೂ ಹಾಡುಗಳನ್ನು ಬರೆಯಲಿದ್ದಾರೆ. ಸೆಪ್ಟೆಂಬರ್ ತಿಂಗಳಿನಿಂದ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಲಿದೆ. ಐದು ತಿಂಗಳಲ್ಲಿ ಚಿತ್ರೀಕರಣ ಮುಗಿಸಿ ಆದಷ್ಟು ಬೇಗ ಸಿನಿಮಾ ರಿಲೀಸ್ ಮಾಡೋ ಯೋಜನೆಯಲ್ಲಿದ್ದಾರೆ ನಿರ್ದೇಶಕ ಲಕ್ಷಣ್. ಈ ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಿಸುವ ಯೋಜನೆಯಲ್ಲಿದೆ ಲೈಕಾ ಪ್ರೊಡಕ್ಷನ್ಸ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್