AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಜನ್ಮದಿನ ಆಚರಿಸಿಕೊಳ್ಳುವುದಿಲ್ಲ, ಕಾರಣ ನಿಮಗೂ ತಿಳಿದಿದೆ’; ಅಭಿಮಾನಿಗಳಿಗೆ ಶ್ರೀಮುರಳಿ ಪತ್ರ

ಡಿಸೆಂಬರ್​ 3ರಂದು ಶ್ರೀಮುರಳಿ ಅಭಿನಯದ ‘ಮದಗಜ’ ಸಿನಿಮಾ ರಿಲೀಸ್​ ಆಗಿ ಮೆಚ್ಚುಗೆ ಪಡೆದುಕೊಂಡಿದೆ. ಸಾಕಷ್ಟು ಆ್ಯಕ್ಷನ್ ದೃಶ್ಯಗಳನ್ನು ಹೊಂದಿರುವ ಈ ಚಿತ್ರ ಕೋಟ್ಯಂತರ ರೂಪಾಯಿ ಕಮಾಯಿ ಮಾಡಿದೆ. ಈ ಕಾರಣಕ್ಕೆ ಅವರಿಗೆ ಈ ಬಾರಿಯ ಬರ್ತ್​ಡೇ ವಿಶೇಷವಾಗಬೇಕಿತ್ತು.

‘ನಾನು ಜನ್ಮದಿನ ಆಚರಿಸಿಕೊಳ್ಳುವುದಿಲ್ಲ, ಕಾರಣ ನಿಮಗೂ ತಿಳಿದಿದೆ’; ಅಭಿಮಾನಿಗಳಿಗೆ ಶ್ರೀಮುರಳಿ ಪತ್ರ
ಶ್ರೀಮುರಳಿ
TV9 Web
| Edited By: |

Updated on: Dec 16, 2021 | 5:11 PM

Share

ಪುನೀತ್​ ರಾಜ್​ಕುಮಾರ್​ ಅವರು ಅಕಾಲಿಕ ಮರಣ ಹೊಂದುತ್ತಾರೆ ಎಂದು ಯಾರೆಂದರೆ ಯಾರೂ ಭಾವಿಸಿರಲಿಲ್ಲ. ಅವರ ಆಪ್ತ ವರ್ಗದವರಿಗೆ, ಅಭಿಮಾನಿಗಳಿಗೆ ಈ ಸುದ್ದಿಯನ್ನು ಇನ್ನೂ ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಸಾಕಷ್ಟು ಅಭಿಮಾನಿಗಳು ಪುನೀತ್​ ಸಮಾಧಿಗೆ ತೆರಳಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ.  ಸ್ಯಾಂಡಲ್​ವುಡ್​ನ ಸ್ಟಾರ್​ ನಟ ಶ್ರೀಮುರಳಿ ಹಾಗೂ ಪುನೀತ್​ ಆಪ್ತರಾಗಿದ್ದರು. ಅಪ್ಪು ನಿಧನ ಹೊಂದಿದ ವಿಚಾರ ಶ್ರೀಮುರಳಿಗೆ ಬೇಸರಮೂಡಿಸಿದೆ. ಡಿಸೆಂಬರ್​ 17 ಅವರ ಬರ್ತ್​ಡೇ. ಪುನೀತ್​ ಇಲ್ಲ ಎಂಬ ಕಾರಣಕ್ಕೆ ಶ್ರೀಮುರಳಿ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಡಿಸೆಂಬರ್​ 3ರಂದು ಶ್ರೀಮುರಳಿ ಅಭಿನಯದ ‘ಮದಗಜ’ ಸಿನಿಮಾ ರಿಲೀಸ್​ ಆಗಿ ಮೆಚ್ಚುಗೆ ಪಡೆದುಕೊಂಡಿದೆ. ಸಾಕಷ್ಟು ಆ್ಯಕ್ಷನ್ ದೃಶ್ಯಗಳನ್ನು ಹೊಂದಿರುವ ಈ ಚಿತ್ರ ಕೋಟ್ಯಂತರ ರೂಪಾಯಿ ಕಮಾಯಿ ಮಾಡಿದೆ. ಈ ಕಾರಣಕ್ಕೆ ಅವರಿಗೆ ಈ ಬಾರಿಯ ಬರ್ತ್​ಡೇ ವಿಶೇಷವಾಗಬೇಕಿತ್ತು. ಆದರೆ, ಆ ರೀತಿ ಆಗಿಲ್ಲ. ಪುನೀತ್​ ನಿಧನದ ನೋವು ಅವರನ್ನು ಇನ್ನೂ ಕಾಡುತ್ತಿದೆ. ಹೀಗಾಗಿ, ಬರ್ತ್​ಡೇ ಆಚರಣೆ ಮಾಡಿಕೊಳ್ಳದಿರಲು ನಿರ್ಧರಿಸಿದ್ದಾರೆ.

ಶ್ರೀಮುರಳಿ ಬರ್ತ್​ಡೇ ದಿನ ಅವರ ಅಭಿಮಾನಿಗಳು ಮನೆಯ ಮುಂದೆ ಜಮಾಯಿಸುತ್ತಿದ್ದರು. ಕೇಕ್ ಕತ್ತರಿಸಿ ಸಂಭ್ರಮಿಸುತ್ತಿದ್ದರು. ಅವರು ಕೂಡ ಅಭಿಮಾನಿಗಳ ಜತೆಗೂಡಿ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗುತ್ತಿದ್ದರು. ಆದರೆ, ಪುನೀತ್​ ಸಾವಿನಿಂದ ಇಡೀ ಕರ್ನಾಟಕಕ್ಕೆ ಸೂತಕದ ಛಾಯೆ ಆವರಿಸಿದೆ.

‘ನನ್ನ ಪ್ರೀತಿಯ ಅಭಿಮಾನಿಗಳೇ. ಈ ಬಾರಿ ನಿಮ್ಮೊಂದಿಗೆ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಲಾಗುವುದಿಲ್ಲ. ಕಾರಣವೇನೆಂದು ನಿಮಗೆ ಗೊತ್ತಿರುವುದೆಂದು ಭಾವಿಸುವೆ. ನಾನು ಬೆಂಗಳೂರಿನಲ್ಲೂ ಇರುವುದಿಲ್ಲ. ಸದಾ ನಿಮ್ಮ ಪ್ರೀತಿ ಹಾಗು ಆಶೀರ್ವಾದವನ್ನು ಬಯಸುವ ನಿಮ್ಮ, ಶ್ರೀಮುರಳಿ (ಅಭಿಮಾನಿಗಳ ಅಭಿಮಾನಿ)’ ಎಂದು ಶ್ರೀಮುರಳಿ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಮದಗಜ’ ಫಸ್ಟ್​ ಡೇ ಕಲೆಕ್ಷನ್​ ಎಷ್ಟು ಕೋಟಿ? ಶ್ರೀಮುರಳಿ ಚಿತ್ರದ ಬಾಕ್ಸ್​ ಆಫೀಸ್​ ಲೆಕ್ಕ ಇಲ್ಲಿದೆ

ಮುಂದುವರಿದ ‘ಮದಗಜ’ ಆರ್ಭಟ; 2ನೇ ದಿನಕ್ಕೆ ಶ್ರೀಮುರಳಿ ಚಿತ್ರದ ಕಲೆಕ್ಷನ್​ ಎಷ್ಟು?

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!