AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರದ ಕೇಸ್ ನಡುವೆಯೇ ಮಡೆನೂರು ಮನು ನಟನೆಯ ಸಿನಿಮಾ ಈ ವಾರ ರಿಲೀಸ್

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಮಡೆನೂರು ಮನು ಅವರಿಗೆ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಒಂದೆಡೆ ಅವರು ನಟಿಸಿದ ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ಬಿಡುಗಡೆ ಆಗುತ್ತಿದೆ, ಇನ್ನೊಂದೆಡೆ ಅತ್ಯಾಚಾರದ ಕೇಸ್​ನಲ್ಲಿ ಅವರು ಪೊಲೀಸರಿಂದ ವಿಚಾರಣೆ ಎದುರಿಸುತ್ತಿದ್ದಾರೆ. ಈ ವಾರ ಬಿಡುಗಡೆ ಆಗುತ್ತಿರುವ ಸಿನಿಮಾಗಳ ಬಗ್ಗೆ ಇಲ್ಲಿದೆ ಮಾಹಿತಿ..

ಅತ್ಯಾಚಾರದ ಕೇಸ್ ನಡುವೆಯೇ ಮಡೆನೂರು ಮನು ನಟನೆಯ ಸಿನಿಮಾ ಈ ವಾರ ರಿಲೀಸ್
Movie Releasing On 23 May
ಮದನ್​ ಕುಮಾರ್​
|

Updated on: May 22, 2025 | 7:19 PM

Share

ಈ ರೀತಿ ಆಗುತ್ತದೆ ಎಂದು ನಟ ಮಡೆನೂರು ಮನು (Madenur Manu) ಅವರು ಕನಸಿನಲ್ಲಿಯೂ ಊಹಿಸಿರಲಿಲ್ಲ. ಭಾರಿ ಉತ್ಸಾಹದಲ್ಲಿ ಅವರು ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ಮಾಡಿದ್ದಾರೆ. ಅದರ ಬಿಡುಗಡೆಗೆ ಅವರು ಸಾಕಷ್ಟು ತಯಾರಿ ಮಾಡಿಕೊಂಡಿದ್ದರು. ಹಲವು ಊರುಗಳಿಗೆ ತೆರಳಿ ಅವರು ಪ್ರಮೋಷನ್ ಕೂಡ ಮಾಡಿದರು. ಆದರೆ ಇನ್ನೇನು ಸಿನಿಮಾ ನಾಳೆ ಬಿಡುಗಡೆ ಆಗಬೇಕು ಎನ್ನುವಾಗ ಮಡೆನೂರು ಮನು ಮೇಲೆ ಅತ್ಯಾಚಾರದ ಆರೋಪ ಕೇಳಿಬಂತು. ಅದರ ನಡುವೆಯೂ ಶುಕ್ರವಾರ (ಮೇ 23) ‘ಕುಲದಲ್ಲಿ ಕೀಳ್ಯಾವುದೋ’ (Kuladalli Keelyavudo) ಸಿನಿಮಾ ರಿಲೀಸ್ ಆಗುತ್ತಿದೆ.

ಕೆ. ರಾಮ್ ನಾರಾಯಣ್ ಅವರು ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಮಡೆನೂರು ಮನು ಮತ್ತು ಮೌನ ಗುಡ್ಡೆಮನೆ ಅವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರಕ್ಕಾಗಿ ಮನು ಅವರು ತುಂಬ ಸಮಯ ಮೀಸಲಿಟ್ಟಿದ್ದರು. ಅಂತಿಮವಾಗಿ ಸಿನಿಮಾವನ್ನು ತೆರೆಕಾಣಿಸಲಾಗುತ್ತಿದೆ. ಈ ಸಿನಿಮಾ ಮೇಲೆ ಮನು ತುಂಬಾ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದರೆ ರಿಲೀಸ್ ಸಮಯವನ್ನು ಎಂಜಾಯ್ ಮಾಡಲು ಅವರಿಗೆ ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ಅತ್ಯಾಚಾರದ ಆರೋಪದಲ್ಲಿ ಅವರು ಕಾನೂನಿನ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಯೋಗರಾಜ್ ಭಟ್ ಮತ್ತು ಇಸ್ಲಾವುದ್ದೀನ್ ಅವರು ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಆ ಕಾರಣದಿಂದಲೂ ಸಿನಿಪ್ರಿಯರಿಗೆ ನಿರೀಕ್ಷೆ ಇದೆ. ಇನ್ನು, ಈ ವಾರ ಈ ಚಿತ್ರಕ್ಕೆ ಪೈಪೋಟಿ ನೀಡಲು ಸ್ಟಾರ್ ಸಿನಿಮಾಗಳು ಯಾವವೂ ಇಲ್ಲ. ಒಂದುವೇಳೆ ಫಸ್ಟ್ ಡೇ ಫಸ್ಟ್ ಶೋ ನೋಡಿದ ಪ್ರೇಕ್ಷಕರು ಒಳ್ಳೆಯ ವಿಮರ್ಶೆ ನೀಡಿದರೆ ಉತ್ತಮ ಕಲೆಕ್ಷನ್ ಆಗುತ್ತದೆ.

ಇದನ್ನೂ ಓದಿ
Image
ಎರಡು ಬಾರಿ ಪ್ರೆಗ್ನೆಂಟ್ ಆಗಿದ್ದೆ; ‘ಕಾಮಿಡಿ ಕಿಲಾಡಿ’ ಕಲಾವಿದರ ಜಗಳ ಬೀದಿಗೆ
Image
ಕನ್ನಡ ಕಿರುತೆರೆ ನಟಿಯ ಮೇಲೆ ಅತ್ಯಾಚಾರ; ನಟ ಮಡೆನೂರು ಮನು ವಿರುದ್ಧ FIR
Image
ಮೇ 23ಕ್ಕೆ ಕುಲದಲ್ಲಿ ಕೀಳ್ಯಾವುದೋ ರಿಲೀಸ್; ಕಾಮಿಡಿ ಕಿಲಾಡಿ ನಟನ ಹೊಸ ಜರ್ನಿ
Image
‘ಕುಲದಲ್ಲಿ ಕೀಳ್ಯಾವುದೋ’ ಟೈಟಲ್ ಸಿಕ್ಕಿದ್ದು ಅಣ್ಣಾವ್ರ ಆಶೀರ್ವಾದ: ಮಡೆನೂರು

ಈ ವಾರ ಕನ್ನಡದಲ್ಲಿ ‘ಕುಲದಲ್ಲಿ ಕೀಳ್ಯಾವುದೋ’ ಜೊತೆಗೆ ‘ಜೈ ಕಿಸಾನ್’, ‘ಕಿರಿಕ್’, ‘ಮಂಕು ತಿಮ್ಮನ ಕಗ್ಗ’ ಸಿನಿಮಾಗಳು ಕೂಡ ಬಿಡುಗಡೆ ಆಗುತ್ತದೆ. ಈ ಪೈಕಿ ಪ್ರೇಕ್ಷಕರು ಯಾವ ಚಿತ್ರಕ್ಕೆ ಬೆಂಬಲ ನೀಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ: ‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು

ಹಿಂದಿಯಲ್ಲಿ ರಾಜ್​ಕುಮಾರ್ ರಾವ್, ವಮಿಕಾ ಗಬ್ಬಿ ನಟನೆಯ ‘ಭೂಲ್ ಚುಕ್ ಮಾಫ್’ ಸಿನಿಮಾ ಕೂಡ ಮೇ 23ಕ್ಕೆ ತೆರೆ ಕಾಣುತ್ತಿದೆ. ಈಗಾಗಲೇ ಬಿಡುಗಡೆ ಆಗಿರುವ ಹಾಲಿವುಡ್​ನ ‘ಮಿಷನ್ ಇಂಪಾಸಿಬಲ್: ದಿ ಫೈನಲ್ ರೆಕನಿಂಗ್’, ‘ಫೈನಲ್ ಡೆಸ್ಟಿನೇಷನ್ ಬ್ಲಡ್​ಲೈನ್ಸ್’ ಸಿನಿಮಾಗಳು ಉತ್ತಮವಾಗಿ ಪ್ರದರ್ಶನ ಕಾಣುತ್ತಿವೆ. ಥ್ರಿಲ್ಲರ್ ಕಥೆ ಇರುವ ಈ ಸಿನಿಮಾಗಳನ್ನು ನೋಡಿ ಪ್ರೇಕ್ಷಕರು ಎಂಜಾಯ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!