ಪರಪ್ಪನ ಅಗ್ರಹಾರಕ್ಕೆ ಮಡೆನೂರು ಮನು, 14 ದಿನ ನ್ಯಾಯಾಂಗ ಬಂಧನ

Madenuru Manu: ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ, ಕೊಲೆ ಬೆದರಿಕೆ, ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು ಕಳೆದ ಕೆಲ ದಿನಗಳಿಂದ ಪೊಲೀಸರ ವಶದಲ್ಲಿದ್ದ ಮನುವನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯ್ತು. ಇದೀಗ ನ್ಯಾಯಾಲಯವು ಮನುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಪರಪ್ಪನ ಅಗ್ರಹಾರಕ್ಕೆ ಮಡೆನೂರು ಮನು, 14 ದಿನ ನ್ಯಾಯಾಂಗ ಬಂಧನ
Madenuru Manu

Updated on: May 26, 2025 | 1:32 PM

ಕಾಮಿಡಿ ಕಿಲಾಡಿಗಳು (Comedy Kiladigalu) ಖ್ಯಾತಿಯ ಮಡೆನೂರು ಮನುಗೆ (Madenuru Manu) ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಬೆದರಿಕೆ ಆರೋಪಗಳ ಮೇಲೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಕೆಲ ದಿನಗಳ ಹಿಂದಷ್ಟೆ ಮಡೆನೂರು ಮನುವನ್ನು ಬಂಧಿಸಿದ್ದರು. ಪೊಲೀಸರು ಎರಡು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದ್ದರು. ಎರಡು ದಿನಗಳ ತನಿಖೆ, ಮಹಜರು, ಹೇಳಿಕೆ ದಾಖಲು ಇತ್ಯಾದಿಗಳ ಬಳಿಕ ಇಂದು (ಮೇ 26) ಪೊಲೀಸರು ಮಡೆನೂರು ಮನುವನ್ನು 3ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲವು 14 ದಿನಗಳ ಕಾಲ ಮಡೆನೂರು ಮನುಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಮನುವಿನ ಸಹನಟಿಯಾಗಿದ್ದ ಯುವತಿಯೊಬ್ಬರು ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದಾರೆ. ಅತ್ಯಾಚಾರ ಮಾತ್ರವೇ ಅಲ್ಲದೆ ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಬೆದರಿಕೆಗಳನ್ನು ಸಹ ಮನು ಹಾಕಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಮಡೆನೂರು ಮನು ನಟನೆಯ ‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾ ಬಿಡುಗಡೆ ಸಂದರ್ಭದಲ್ಲಿಯೇ ಯುವತಿ ದೂರು ದಾಖಲಿಸಿದ್ದರು. ದೂರು ದಾಖಲಾದ ಬೆನ್ನಲ್ಲೆ ಮಡೆನೂರು ಮನುವನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ:ಮಡೆನೂರು ಮನು ವಿರುದ್ಧ ಶಿವಣ್ಣ ಅಭಿಮಾನಿಗಳ ಆಕ್ರೋಶ, ಚೇಂಬರ್​ಗೆ ದೂರು

ಪೊಲೀಸರ ವಶದಲ್ಲಿದ್ದ ಮನುವಿನ ವಿಚಾರಣೆ ನಡೆಸಿ ಮನು ಇದ್ದ ಮನೆ, ಸಂತ್ರಸ್ತೆ ಇದ್ದ ಮನೆ, ಕೆಲ ರೆಸಾರ್ಟ್​ಗಳು ಇತ್ಯಾದಿಗಳ ಕಡೆ ಕರೆದೊಯ್ದು ಸ್ಥಳ ಮಹಜರನ್ನು ಪೊಲೀಸರು ಕಳೆದ ಎರಡು ದಿನಗಳಲ್ಲಿ ಮಾಡಿದ್ದರು. ತನಿಖೆ ಮುಗಿದ ಬಳಿಕ ಇಂದು (ಮೇ 26) ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮುಂದಿನ ತನಿಖೆಗೆ ಮನುವಿನ ಅಗತ್ಯ ಇಲ್ಲವೆಂದು ನ್ಯಾಯಾಲಯಕ್ಕೆ ತಿಳಿಸಿದರು. ಅದರಂತೆ ಮನುಗೆ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಮುಂದಿನ 14 ದಿನಗಳ ಕಾಲ ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಬೇಕಾಗಿದೆ. 14 ದಿನಗಳ ಬಳಿಕವೂ ಸಹ ಮನುಗೆ ಜಾಮೀನು ದೊರಕುವುದು ಕಷ್ಟ. ಮನು ವಿರುದ್ಧ ಸಂತ್ರಸ್ತೆ ಸಾಕಷ್ಟು ಆರೋಪಗಳನ್ನು ಮಾಡಿದ್ದು, ಮಾಧ್ಯಮಗಳ ಮುಂದೆಯೂ ಮಾತನಾಡಿದ್ದಾರೆ. ಇನ್ನೊಂದೆಡೆ ಬಂಧನಕ್ಕೆ ಮುಂಚೆ ಮಾತನಾಡಿದ್ದ ಮನು, ಸಂತ್ರಸ್ತೆಯನ್ನು ಮದುವೆಯಾಗಿದ್ದು ಆಕೆಯನ್ನು ಚೆನ್ನಾಗಿ ನೋಡಿಕೊಳ್ಳುವುದಾಗಿ ಹೇಳಿದ್ದರು. ಇನ್ನು ಮನುವಿನ ಅಧಿಕೃತ ಪತ್ನಿ ಮಾಧ್ಯಮಗಳ ಮುಂದೆ ಮಾತನಾಡಿ, ಮನು ಒಳ್ಳೆಯ ವ್ಯಕ್ತಿ ಆತನ ತಪ್ಪು ಏನೂ ಇಲ್ಲ ಎಂದಿದ್ದು, ಪತಿಯ ಪರವಾಗಿ ಹೋರಾಟ ಮಾಡುವುದಾಗಿ ಹೇಳಿದ್ದಾರೆ.

ಸಿನಿಮಾ ಸುದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ