Sri Murali: ‘ಮದಗಜ’ ಫೈಟಿಂಗ್​ ವೇಳೆ ಗಾಯಗೊಂಡ ಶ್ರೀಮುರಳಿ! ರೋರಿಂಗ್​ ಸ್ಟಾರ್​ ಅಭಿಮಾನಿಗಳಿಗೆ ಬ್ಯಾಡ್​ ನ್ಯೂಸ್​

Madhagaja: ಸಾಹಸ ಸನ್ನಿವೇಶದ ಶೂಟಿಂಗ್​ನಲ್ಲಿ ಶ್ರೀಮುರಳಿ ಕಾಲಿಗೆ ಗಾಯವಾಗಿದೆ. ಅವರು 15 ದಿನಗಳ ಕಾಲ ಬೆಡ್​ ರೆಸ್ಟ್​ ತೆಗೆದುಕೊಳ್ಳಬೇಕಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ.

Sri Murali: ‘ಮದಗಜ’ ಫೈಟಿಂಗ್​ ವೇಳೆ ಗಾಯಗೊಂಡ ಶ್ರೀಮುರಳಿ! ರೋರಿಂಗ್​ ಸ್ಟಾರ್​ ಅಭಿಮಾನಿಗಳಿಗೆ ಬ್ಯಾಡ್​ ನ್ಯೂಸ್​
ಶ್ರೀಮುರಳಿ
Follow us
ಮದನ್​ ಕುಮಾರ್​
| Updated By: Digi Tech Desk

Updated on: Apr 07, 2021 | 2:03 PM

ನಟ ಶ್ರೀಮುರಳಿ ಅಭಿನಯಿಸುತ್ತಿರುವ ‘ಮದಗಜ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಆ ನಿರೀಕ್ಷೆಗೆ ತಕ್ಕಂತೆಯೇ ಸಿನಿಮಾವನ್ನು ಕಟ್ಟಿಕೊಡುತ್ತಿದ್ದಾರೆ ನಿರ್ದೇಶಕ ಮಹೇಶ್​. ಸದ್ಯ ಈ ಚಿತ್ರಕ್ಕೆ ಬಿರುಸಿನ ಶೂಟಿಂಗ್​ ನಡೆಯುತ್ತಿತ್ತು. ಆದರೆ ಒಂದು ಕಹಿ ಘಟನೆ ನಡೆದಿದೆ. ಸಾಹಸ ದೃಶ್ಯದ ಚಿತ್ರೀಕರಣದ ಸಂದರ್ಭದಲ್ಲಿ ನಟ ಶ್ರೀಮುರಳಿ ಅವರಿಗೆ ಗಾಯವಾಗಿದೆ. ಪರಿಣಾಮವಾಗಿ ಶೂಟಿಂಗ್​ ಸ್ಥಗಿತಗೊಳಿಸಬೇಕಾದ ಪರಿಸ್ಥಿತಿ ಎದುರಾಗಿದೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಮದಗಜ’ ಸಿನಿಮಾದ ಫೈಟಿಂಗ್​ ದೃಶ್ಯಗಳನ್ನು ಚಿತ್ರಿಸಲಾಗುತ್ತಿತ್ತು. ಸತತ 5 ದಿನಗಳ ಕಾಲ ಚಿತ್ರೀಕರಣ ನಡೆಸಲು ನಿರ್ದೇಶಕ ಮಹೇಶ್​ ಪ್ಲ್ಯಾನ್​ ಮಾಡಿಕೊಂಡಿದ್ದರು. ಎಲ್ಲವೂ ಸರಾಗವಾಗಿ ನಡೆಯುತ್ತಿತ್ತು. ಆದರೆ ಒಂದು ಸನ್ನಿವೇಶದ ಶೂಟಿಂಗ್​ನಲ್ಲಿ ಶ್ರೀಮುರಳಿ ಕಾಲಿಗೆ ಗಾಯವಾಗಿದೆ. ಎಷ್ಟರಮಟ್ಟಿಗೆಂದರೆ ಅವರು 15 ದಿನಗಳ ಕಾಲ ಬೆಡ್​ ರೆಸ್ಟ್​ ತೆಗೆದುಕೊಳ್ಳಬೇಕಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ.

‘ಭರಾಟೆ’ ಸಿನಿಮಾದ ಬಳಿಕ ಶ್ರೀಮರಳಿ ನಟಿಸುತ್ತಿರುವ ‘ಮದಗಜ’ ಚಿತ್ರ ಕೂಡ ಪಕ್ಕಾ ಮಾಸ್​ ಶೈಲಿಯಲ್ಲಿ ಮೂಡಿಬರುತ್ತಿದೆ. ‘ಅಯೋಗ್ಯ’ ಚಿತ್ರ ನಿರ್ದೇಶಿಸಿ ಯಶಸ್ಸು ಕಂಡ ಮಹೇಶ್​ ಈಗ ‘ಮದಗಜ’ಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್ ಭಾರಿ ನಿರೀಕ್ಷೆ ಮೂಡಿಸಿದೆ. ಭರ್ಜರಿ ಆ್ಯಕ್ಷನ್​ ದೃಶ್ಯಗಳು ಈ ಚಿತ್ರದಲ್ಲಿ ಇರಲಿವೆ. ಬಹಳ ದಿನಗಳ ಹಿಂದೆಯೇ ಈ ಸಿನಿಮಾ ಸೆಟ್ಟೇರಿತ್ತು. ಆದರೆ ಕೊರೊನಾ ಲಾಕ್​ಡೌನ್​ ಕಾರಣದಿಂದಾಗಿ ಚಿತ್ರದ ಕೆಲಸಗಳು ತಡವಾಗಿದ್ದವು. ಈಗ ಶ್ರೀಮರಳಿ ಗಾಯ ಮಾಡಿಕೊಂಡಿರುವುದರಿಂದ ಶೂಟಿಂಗ್​ ಇನ್ನಷ್ಟು ವಿಳಂಬ ಆಗಲಿದೆ.

ಈ ಸಿನಿಮಾದಲ್ಲಿ ಶ್ರೀಮರಳಿಗೆ ನಾಯಕಿಯಾಗಿ ಆಶಿಕಾ ರಂಗನಾಥ್​ ಅಭಿನಯಿಸುತ್ತಿದ್ದಾರೆ. ತೆಲುಗಿನ ಖ್ಯಾತ ನಟ ಜಗಪತಿ ಬಾಬು ಕೂಡ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಮುಂತಾದ ಭಾಷೆಗಳಲ್ಲೂ ಮದಗಜ ಮೂಡಿಬರುತ್ತಿದೆ. ‘ರಾಬರ್ಟ್​’ ಸಿನಿಮಾ ಮೂಲಕ ಭಾರಿ ಯಶಸ್ಸು ಕಂಡಿರುವ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಅವರು ‘ಮದಗಜ’ಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಇತ್ತೀಚಿಗಷ್ಟೇ ಈ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ‘ರಾಬರ್ಟ್​’ ಚಿತ್ರದ 25ನೇ ದಿನದ ಸಂಭ್ರಮವನ್ನು ಆಚರಿಸಲಾಯಿತು.

ಇದನ್ನೂ ಓದಿ: ‘ಮದಗಜ’ ನಿರ್ದೇಶಕ ಮಹೇಶ್​ಗೆ ರಾಬರ್ಟ್​ ನಿರ್ಮಾಪಕ ಉಮಾಪತಿಯಿಂದ ದುಬಾರಿ ಕಾರ್ ಗಿಫ್ಟ್​!

(Madhagaja actor Sri Murali injured during action sequence shooting)

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ