Mafia Movie: ‘ಮಾಫಿಯಾ’ ಚಿತ್ರತಂಡದಿಂದ ಪ್ರಜ್ವಲ್ ದೇವರಾಜ್ ಜನ್ಮದಿನಕ್ಕೆ ಹೊಸ ಪೋಸ್ಟರ್ ರಿಲೀಸ್
Prajwal Devaraj Birthday: ಆಗಸ್ಟ್ನಲ್ಲಿ ‘ಮಾಫಿಯಾ’ ಬಿಡುಗಡೆ ಮಾಡಬೇಕು ಎಂಬ ಗುರಿ ಇಟ್ಟುಕೊಂಡು ಚಿತ್ರತಂಡ ಕಾರ್ಯನಿರತವಾಗಿದೆ. ಪ್ರಜ್ವಲ್ ದೇವರಾಜ್ ಅವರ ಬರ್ತ್ಡೇ ಪ್ರಯುಕ್ತ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ.
ನಟ ಪ್ರಜ್ವಲ್ ದೇವರಾಜ್ (Prajwal Devaraj) ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಆ ಎಲ್ಲ ಸಿನಿಮಾಗಳ ಕೆಲಸಗಳು ಭರದಿಂದ ಸಾಗುತ್ತಿವೆ. ಪ್ರಜ್ವಲ್ ದೇವರಾಜ್ ನಟನೆಯ ‘ಮಾಫಿಯಾ’ ಸಿನಿಮಾ (Mafia movie) ಬಗ್ಗೆ ಒಂದಷ್ಟು ಕುತೂಹಲ ಮನೆ ಮಾಡಿದೆ. ಈ ಮೊದಲೇ ಬಿಡುಗಡೆ ಆಗಿದ್ದ ಪೋಸ್ಟರ್ ಗಮನ ಸೆಳೆದಿತ್ತು. ಈಗ ಪ್ರಜ್ವಲ್ ಅವರ ಹುಟ್ಟುಹಬ್ಬದ ಪ್ರಯುಕ್ತ ಹೊಸ ಪೋಸ್ಟರ್ ಹಂಚಿಕೊಳ್ಳಲಾಗಿದೆ. ‘ಬೆಂಗಳೂರು ಕುಮಾರ್ ಫಿಲ್ಮ್ಸ್’ ಬ್ಯಾನರ್ ಮೂಲಕ ಕುಮಾರ್ ಬಿ. ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಲೋಹಿತ್ ಹೆಚ್. (Lohith H) ಅವರು ನಿರ್ದೇಶನ ಮಾಡಿದ್ದು, ಚಿತ್ರಕ್ಕೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ.
‘ಮಮ್ಮಿ’, ‘ದೇವಕಿ’ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ಲೋಹಿತ್ ಅವರು ‘ಮಾಫಿಯಾ’ ಸಿನಿಮಾದಲ್ಲಿ ಒಂದು ಮಾಸ್ ಕಥೆಯನ್ನು ಹೇಳಲಿದ್ದಾರೆ. ‘ಡೈನಾಮಿಕ್ ಪ್ರಿನ್ಸ್’ ಪ್ರಜ್ವಲ್ ದೇವರಾಜ್ ಅವರಿಗೆ ಈ ಚಿತ್ರದಲ್ಲಿ ಭಿನ್ನವಾದ ಪಾತ್ರ ಇದೆ. ಶೀರ್ಷಿಕೆಯಿಂದಲೇ ‘ಮಾಫಿಯಾ’ ಸಿನಿಮಾ ಗಮನ ಸೆಳೆಯುತ್ತಿದೆ. ಇಂದು (ಜುಲೈ 4) ಪ್ರಜ್ವಲ್ ದೇವರಾಜ್ ಅವರ ಜನ್ಮದಿನ. ಆ ಪ್ರಯುಕ್ತ ಹಲವು ಚಿತ್ರತಂಡಗಳು ಶುಭ ಕೋರಿವೆ. ‘ಮಾಫಿಯಾ’ ಟೀಮ್ ಕೂಡ ವಿಶೇಷ ಪೋಸ್ಟರ್ ಹಂಚಿಕೊಂಡು ಹುಟ್ಟುಹಬ್ಬಕ್ಕೆ ವಿಶ್ ಮಾಡಿದೆ.
ಪ್ರಜ್ವಲ್ ದೇವರಾಜ್ ಅವರು ಅಭಿಮಾನಿಗಳ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಫ್ಯಾನ್ಸ್ ಜೊತೆ ಸೇರಿ ಜನ್ಮದಿನ ಆಚರಿಸಲು ಅವರಿಗೆ ಸಾಧ್ಯವಾಗಿರಲಿಲ್ಲ. ಆದರೆ ಈ ವರ್ಷ ಖುಷಿಯಿಂದ ಎಲ್ಲರ ಜೊತೆ ಸೇರಿ ಅವರು ಕೇಕ್ ಕತ್ತರಿಸಿದ್ದಾರೆ. ‘ಮಾಫಿಯಾ’ ಸಿನಿಮಾ ತಂಡ ಕೂಡ ಪ್ರಜ್ವಲ್ ದೇವರಾಜ್ ಅವರ ಬರ್ತ್ಡೇ ಸೆಲೆಬ್ರೇಟ್ ಮಾಡಿದೆ. ಈ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯಕ್ಕೆ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.
ಇದನ್ನೂ ಓದಿ: Prajwal Devaraj: ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಹೊರಟ ಪ್ರಜ್ವಲ್ ದೇವರಾಜ್; ಈ ಚಿತ್ರದ ಹೆಸರು ‘ಜಾತರೆ’
ಆಗಸ್ಟ್ನಲ್ಲಿ ‘ಮಾಫಿಯಾ’ ಬಿಡುಗಡೆ ಮಾಡಬೇಕು ಎಂಬ ಗುರಿ ಇಟ್ಟುಕೊಂಡು ಚಿತ್ರತಂಡ ಕಾರ್ಯನಿರತವಾಗಿದೆ. ಆ್ಯಕ್ಷನ್-ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಲಾಗುತ್ತಿದೆ. ಆ್ಯಕ್ಷನ್ ಸಿನಿಮಾವನ್ನು ಇಷ್ಟಪಡುವವರಿಗೆ ಈ ಚಿತ್ರ ಸಖತ್ ಮನರಂಜನೆ ನೀಡಲಿದೆ. ಈ ಸಿನಿಮಾಗಾಗಿ ಪ್ರಜ್ವಲ್ ಅವರು ತುಂಬ ಶ್ರಮ ವಹಿಸಿದ್ದಾರೆ. ವಿಭಿನ್ನ ಗೆಟಪ್ನಲ್ಲಿ ಅವರು ಅವರು ಕಾಣಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ: Prajwal Devaraj: ಟೈಮ್ ಲೂಪ್ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್; ‘ಮಮ್ಮಿ’ ಖ್ಯಾತಿಯ ಲೋಹಿತ್ ನಿರ್ದೇಶನ
ಪ್ರಜ್ವಲ್ ದೇವರಾಜ್ ನಟನೆಯ 35ನೇ ಚಿತ್ರವಾಗಿ ‘ಮಾಫಿಯಾ’ ಮೂಡಿಬರುತ್ತಿದೆ. ಈ ಸಿನಿಮಾದಲ್ಲಿ 3 ಸಾಂಗ್ಸ್ ಇವೆ. ಅನೂಪ್ ಸೀಳಿನ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಎಸ್. ಪಾಂಡಿಕುಮಾರ್ ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸಿದ್ದಾರೆ. ಪ್ರಜ್ವಲ್ ದೇವರಾಜ್ ಅವರಿಗೆ ಜೋಡಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ದೇವರಾಜ್ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ ಎಂಬುದು ವಿಶೇಷ. ಸಾಧುಕೋಕಿಲ, ವಿಜಯ್ ಚೆಂಡೂರ್, ಶೈನ್ ಶೆಟ್ಟಿ, ವಾಸುಕಿ ವೈಭವ್ ಸೇರಿದಂತೆ ಅನೇಕರು ‘ಮಾಫಿಯಾ’ ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.