ನಟ ಮಹೇಶ್ ಬಾಬು ಅವರು ಸ್ಟಾರ್ ಹೀರೋ. ಅವರಿಗೆ ಟಾಲಿವುಡ್ನಲ್ಲಿ ಸಖತ್ ಬೇಡಿಕೆ ಇದೆ. ಅವರ ಮಗಳು ಸಿತಾರಾ ಘಟ್ಟಮನೇನಿ ಕೂಡ ಜನಪ್ರಿಯತೆ ಪಡೆದಿದ್ದಾರೆ. ಅವರು ಹಲವು ಚಿತ್ರರಂಗದಲ್ಲಿ ಗುರುತಿಸಿಕೊಳ್ಳೋ ಸೂಚನೆ ನೀಡಿದ್ದಾರೆ. ಅವರಿಷ್ಟದ ನಟಿ ಕನ್ನಡದವರು ಅನ್ನೋ ವಿಚಾರ ನಿಮಗೆ ಗೊತ್ತೇ? ಈ ಬಗ್ಗೆ ಅವರು ಸಂದರ್ಶನ ಒಂದರಲ್ಲಿ ಹೇಳಿಕೊಂಡಿದ್ದರು. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಆದರೆ, ಆ ನಟಿಯ ಬಗ್ಗೆ ಬಹುತೇಕ ಕನ್ನಡಿಗರಿಗೆ ದ್ವೇಷ ಇದೆ!
ಸಿತಾರಾ ಅವರು ಇತ್ತೀಚೆಗೆ ಸಂದರ್ಶನ ಒಂದರಲ್ಲಿ ಕಾಣಿಸಿಕೊಂಡಿದ್ದರು. ‘ನಿಮ್ಮಿಷದ ಕಲಾವಿದರು ಯಾರು’ ಎಂದು ಕೇಳಿದಾಗ ಅವರು ತಂದೆ ಮಹೇಶ್ ಬಾಬು ಹೆಸರನ್ನು ತೆಗೆದುಕೊಂಡಿದ್ದಾರೆ. ಅವರನ್ನು ಬಿಟ್ಟು ಒಬ್ಬರ ಹೆಸರನ್ನು ಹೇಳಿ ಎಂದಾಗ ಅವರು ತೆಗೆದುಕೊಂಡಿದ್ದು ನಟಿ ರಶ್ಮಿಕಾ ಮಂದಣ್ಣ ಹಾಗೂ ಶ್ರೀಲೀಲಾ ಅವರ ಹೆಸರು. ಈ ವಿಡಿಯೋ ಸಖತ್ ವೈರಲ್ ಆಗಿದೆ.
ಈ ಮೊದಲು ಮಹೇಶ್ ಬಾಬು ಹಾಗೂ ರಶ್ಮಿಕಾ ಮಂದಣ್ಣ ‘ಸರಿಲೇರು ನೀಕೆವ್ವರು’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಗಮನ ಸೆಳೆದಿತ್ತು. ಆಗ ಸಿತಾರಾಗೆ ರಶ್ಮಿಕಾ ಅವರ ಪರಿಚಯ ಆಗಿದೆ ಎನ್ನಲಾಗಿದೆ. ಅಷ್ಟೇ ಅಲ್ಲ, ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಸಿತಾರಾ ಅವರು ರಶ್ಮಿಕಾರ ಸಂದರ್ಶನ ಕೂಡ ಮಾಡಿದ್ದರು. ಈ ಎಲ್ಲಾ ಕಾರಣದಿಂದ ಸಿತಾರಾ ಹಾಗೂ ಮಹೇಶ್ ಬಾಬು ಮಧ್ಯೆ ಫ್ರೆಂಡ್ಶಿಪ್ ಬೆಳೆದಿದೆ.
ಸಿತಾರಾ ಅವರು ಈ ಮೊದಲು ‘ಸರ್ಕಾರು ವಾರಿ ಪಾಟ’ ಚಿತ್ರದ ಪ್ರಮೋಷನಲ್ ಸಾಂಗ್ನಲ್ಲಿ ಕಾಣಿಸಿಕೊಂಡಿದ್ದರು. ಈ ಮೂಲಕ ಅವರು ಗಮನ ಸೆಳೆದಿದ್ದರು. ಇದಾದ ಬಳಿಕ ಅವರು ಶಿಕ್ಷಣದ ಕಡೆ ಹೆಚ್ಚು ಗಮನ ಹರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿರೋ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.
ಇದನ್ನೂ ಓದಿ: ಒಂದೇ ದಿನ ರಿಲೀಸ್ ಆಗಲಿವೆ ರಶ್ಮಿಕಾ ಮಂದಣ್ಣ ನಟನೆಯ 2 ಬಹುನಿರೀಕ್ಷಿತ ಸಿನಿಮಾಗಳು
ರಶ್ಮಿಕಾ ಮಂದಣ್ಣ ಸಿನಿಮಾ ವಿಚಾರಕ್ಕೆ ಬರೋದಾದರೆ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಡಿಸೆಂಬರ್ 6ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಇನ್ನು ಅವರ ನಟನೆಯ ‘ಛಾವ್ವಾ’ ಕೂಡ ಬಿಡುಗಡೆ ಹೊಂದುತ್ತಿದೆ ಅನ್ನೋದು ವಿಶೇಷ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.