ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ಮಹೇಶ್ ಬಾಬು (Mahesh Babu) ‘ಸರಿಲೇರು ನೀಕೆವ್ವರು’ (Sarileru Neekevvaru) ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ರಿಲೀಸ್ ಆಗಿ ಒಳ್ಳೆಯ ಕಲೆಕ್ಷನ್ ಮಾಡಿತ್ತು. ಈ ಸಿನಿಮಾದಿಂದ ರಶ್ಮಿಕಾ ಬೇಡಿಕೆ ಹೆಚ್ಚಿತ್ತು. ಅಷ್ಟೇ ಅಲ್ಲ, ಮಹೇಶ್ ಬಾಬು ಹಾಗೂ ರಶ್ಮಿಕಾ ನಡುವೆ ಒಳ್ಳೆಯ ಫ್ರೆಂಡ್ಶಿಪ್ ಬೆಳೆದಿತ್ತು. ಆದರೆ, ಈಗ ಅವರನ್ನು ಮಹೇಶ್ ಬಾಬು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆ. ಹೀಗೇಕೆ ಎನ್ನುವ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಕಾಡುತ್ತಿದೆ. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.
‘ಪುಷ್ಪ’ ಸಿನಿಮಾ ರಿಲೀಸ್ ಆಗಿ 300 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಈಗ ಅಮೇಜಾನ್ ಪ್ರೈಮ್ ವಿಡಿಯೋದಲ್ಲೂ ಸಿನಿಮಾ ರಿಲೀಸ್ ಆಗಿದೆ. ಐದು ಭಾಷೆಯಲ್ಲಿ ಜನರು ಸಿನಿಮಾವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಇದಕ್ಕೂ ಮೊದಲು ಮಹೇಶ್ ಬಾಬು ಅವರು ಈ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ನಟ ಅಲ್ಲು ಅರ್ಜುನ್ ಹಾಗೂ ನಿರ್ದೇಶಕ ಸುಕುಮಾರ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಆದರೆ, ಎಲ್ಲಿಯೂ ಅವರು ರಶ್ಮಿಕಾ ನಟನೆ ಬಗ್ಗೆ ಒಂದೇ ಒಂದು ಮಾತನ್ನೂ ಹೇಳಿಲ್ಲ.
‘ಅಲ್ಲು ಅರ್ಜುನ್ ನಟನೆಯ ಪುಷ್ಪ ಚಿತ್ರ ಅಚ್ಚರಿ ಮೂಡಿಸುತ್ತದೆ, ಒರಿಜಿನಲ್ ಮತ್ತು ಸೆನ್ಸೇಷನಲ್ ಆಗಿದೆ. ನಟನೆ ಅದ್ಭುತವಾಗಿದೆ. ಸುಕುಮಾರ್ ನಿರ್ದೇಶನದ ಸಿನಿಮಾಗಳು ಪ್ರಾಮಾಣಿಕವಾಗಿ ಮತ್ತು ರಾ ಆಗಿರುತ್ತವೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಬೇರೆ ಎಲ್ಲ ಸಿನಿಮಾಗಳಿಗಿಂತ ಇದು ಭಿನ್ನವಾಗಿದೆ’ ಎಂದು ಮಹೇಶ್ ಬಾಬು ಟ್ವೀಟ್ ಮಾಡಿದ್ದಾರೆ. ಇದರ ಜತೆಗೆ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಅವರ ಬಗ್ಗೆಯೂ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆದರೆ, ರಶ್ಮಿಕಾ ಬಗ್ಗೆ ಅವರು ಮೆಚ್ಚುಗೆ ಸೂಚಿಸಿಲ್ಲ.
.@alluarjun as Pushpa is stunning, original and sensational… a stellar act ??? @aryasukku proves again that his cinema is raw, rustic and brutally honest… a class apart ??
— Mahesh Babu (@urstrulyMahesh) January 4, 2022
‘ಪುಷ್ಪ’ ಸಿನಿಮಾದಲ್ಲಿ ರಶ್ಮಿಕಾ ನಟನೆ ಬಗ್ಗೆ ಪಾಸಿಟಿವ್ ರೆಸ್ಪಾನ್ಸ್ ಬಂದಿದೆ. ಆದರೆ, ಕೆಲವರು ಅವರ ಪಾತ್ರದ ಬಗ್ಗೆ ಅಷ್ಟಾಗಿ ಮೆಚ್ಚುಗೆ ಸೂಚಿಸಿಲ್ಲ. ಈಗ ಮಹೇಶ್ ಬಾಬು ಕೂಡ ಈ ಬಗ್ಗೆ ಮಾತನಾಡದೆ ಇರುವುದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ. ಅವರಿಗೆ ಪಾತ್ರ ಇಷ್ಟವಾಗಿಲ್ಲವೇ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಕೆಲವರು ಮಹೇಶ್ ಬಾಬುಗೆ ಧನ್ಯವಾದ ಹೇಳಿದ್ದಾರೆ.
Thank u MB anna for not mentioning overrated @/iamRashmika ?
— Imabzkhan MSDian™ (@MSDhoniRules) January 4, 2022
ಇದನ್ನೂ ಓದಿ: ‘ಪತ್ರಿಕೋದ್ಯಮಕ್ಕೆ ದೊಡ್ಡ ಶಕ್ತಿ ಇದೆ’; ಟಿವಿ9 ‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮದಲ್ಲಿ ರಶ್ಮಿಕಾ ಮಾತು
‘ಪುಷ್ಪ’ ಚಿತ್ರವನ್ನು ಹಾಡಿ ಹೊಗಳಿದ ಮಹೇಶ್ ಬಾಬು; ಈ ಪರಿ ಪ್ರಶಂಸೆಗೆ ಅಲ್ಲು ಅರ್ಜುನ್ ಪ್ರತಿಕ್ರಿಯೆ ಏನು?