AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್​​ನಲ್ಲಿ ರಿಲೀಸ್ ಆಗಲಿದೆ ‘ಮೆಜೆಸ್ಟಿಕ್ 2’ ಸಿನಿಮಾ: ಸೆನ್ಸಾರ್ ಮಂಡಳಿಯಿಂದ ಸಿಕ್ತು ಯು/ಎ

ಭರತ್ ಕುಮಾರ್, ಸಂಹಿತಾ ವಿನ್ಯಾ, ಶ್ರುತಿ ಮುಂತಾದವರು ‘ಮೆಜೆಸ್ಟಿಕ್ 2’ ಸಿನಿಮಾದಲ್ಲಿ ನಟಿಸಿದ್ದಾರೆ. ಹಿರಿಯ ನಟಿ ಮಾಲಾಶ್ರೀ ಅವರು ಈ ಸಿನಿಮಾದ ಹೀರೋ ಇಂಟ್ರಡಕ್ಷನ್ ಹಾಡಿನಲ್ಲಿ ಅಭಿನಯಿಸಿದ್ದಾರೆ. ನವೆಂಬರ್​​ನಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದ್ದು, ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ.

ನವೆಂಬರ್​​ನಲ್ಲಿ ರಿಲೀಸ್ ಆಗಲಿದೆ ‘ಮೆಜೆಸ್ಟಿಕ್ 2’ ಸಿನಿಮಾ: ಸೆನ್ಸಾರ್ ಮಂಡಳಿಯಿಂದ ಸಿಕ್ತು ಯು/ಎ
Majestic 2 Movie Still
ಮದನ್​ ಕುಮಾರ್​
|

Updated on: Oct 28, 2025 | 3:36 PM

Share

ಮೆಜೆಸ್ಟಿಕ್ (Majestic) ಎಂದರೆ ಹೊಸ ಆರಂಭದ ಸಂಕೇತ. ಯಾಕೆಂದರೆ ಬೆಂಗಳೂರಿಗೆ ಕನಸು ಕಟ್ಟಿಕೊಂಡು ಬರುವ ಲಕ್ಷಾಂತರ ಮಂದಿ ಕಾಲಿಡುವ ಜಾಗ ಇದು. ನಟ ದರ್ಶನ್ ಅವರು ಹೀರೋ ಆಗಿ ವೃತ್ತಿ ಜೀವನ ಶುರು ಮಾಡಿದ್ದು ಕೂಡ ‘ಮೆಜೆಸ್ಟಿಕ್’ ಸಿನಿಮಾ ಮೂಲಕ. ಹಾಗಾಗಿ ಆ ಶೀರ್ಷಿಕೆಗೆ ಒಂದು ತಾಕತ್ತು ಇದೆ. ಈಗ ‘ಮೆಜೆಸ್ಟಿಕ್ 2’ (Majestic 2) ಸಿನಿಮಾ ಬರುತ್ತಿದೆ. ಆದರೆ ಹೀರೋ ದರ್ಶನ್ ಅಲ್ಲ. ಹೊಸ ನಟ ಭರತ್ ಕುಮಾರ್ (Bharath Kumar) ಅವರು ಈ ಸಿನಿಮಾದಲ್ಲಿ ನಾಯಕನಾಗಿದ್ದಾರೆ. ‘ಮೆಜೆಸ್ಟಿಕ್ 2’ ಚಿತ್ರಕ್ಕೆ ಸೆನ್ಸಾರ್ ಪ್ರಕ್ರಿಯೆ ಮುಗಿದಿದೆ. ಹಾಗಾಗಿ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಚಿತ್ರದುರ್ಗದ ಹೆಚ್. ಆನಂದಪ್ಪ ಅವರು ‘ಅಮ್ಮಾ ಎಂಟರ್‌ ಪ್ರೈಸಸ್’ ಮೂಲಕ ಅದ್ದೂರಿಯಾಗಿ ‘ಮೆಜೆಸ್ಟಿಕ್ 2’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಹಿರಿಯ ನಿರ್ಮಾಪಕ ಶಿಲ್ಪಾ ಶ್ರೀನಿವಾಸ್ ಅವರ ಮಗ ಭರತ್ ಕುಮಾರ್ ಅವರು ಈ ಸಿನಿಮಾದಲ್ಲಿ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟಿ ಶೃತಿ ಅವರು ನಾಯಕನ ತಾಯಿಯ ಪಾತ್ರದಲ್ಲಿ ಅಭಿನಯಿಸಿದ್ದಾರೆ.

‘ಮೆಜೆಸ್ಟಿಕ್ 2’ ಸಿನಿಮಾಗೆ ಈಗಾಗಲೇ ಶೂಟಿಂಗ್ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿದಿವೆ. ಇನ್ನೇನಿದ್ದರೂ ಬಿಡುಗಡೆ ಮಾತ್ರ ಬಾಕಿ. ನವೆಂಬರ್ ತಿಂಗಳಲ್ಲಿ ಸಿನಿಮಾವನ್ನು ರಿಲೀಸ್ ಮಾಡಲು ನಿರ್ಮಾಪಕರು ಪ್ಲ್ಯಾನ್ ಮಾಡಿಕೊಂಡಿದ್ದಾರೆ‌. ಇತ್ತೀಚೆಗಷ್ಟೇ ‘ಮೆಜೆಸ್ಟಿಕ್ 2’ ಸಿನಿಮಾವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಸದಸ್ಯರು U/A ಪ್ರಮಾಣ ಪತ್ರ ನೀಡಿದ್ದಾರೆ.

ಈ ಸಿನಿಮಾದಲ್ಲಿ 5 ಹಾಡುಗಳು ಇವೆ. ವಿನು ಮನಸು ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಛಾಯಾಗ್ರಾಹಕರಾಗಿ ವೀನಸ್ ಮೂರ್ತಿ ಕೆಲಸ ಮಾಡಿದ್ದಾರೆ ಸಹ ನಿರ್ದೇಶಕರಾಗಿ ವಿಜಯಕುಮಾರ್, ಸಾಹಸ ನಿರ್ದೇಶಕರಾಗಿ ಚಿನ್ನಯ್ಯ ಅವರು ಕೆಲಸ ಮಾಡಿದ್ದಾರೆ. ಈ ಸಿನಿಮಾಗೆ ನಿರ್ದೇಶಕ ರಾಮು ಅವರು ಕಥೆ ಮತ್ತು ಚಿತ್ರಕಥೆ ಬರೆದು ಆ್ಯಕ್ಷನ್-ಕಟ್ ಹೇಳಿದ್ದಾರೆ.

ಇದನ್ನೂ ಓದಿ: ಬಹುವರ್ಷಗಳ ಬಳಿಕ ‘ಮೆಜೆಸ್ಟಿಕ್​ 2’ ಚಿತ್ರಕ್ಕಾಗಿ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ ಮಾಲಾಶ್ರೀ

ಹೀರೋ ಭರತ್ ಕುಮಾರ್ ಅವರಿಗೆ ಜೋಡಿಯಾಗಿ ನಟಿ ಸಂಹಿತಾ ವಿನ್ಯಾ ಅವರು ಅಭಿನಯಿಸಿದ್ದಾರೆ. ಈಗಿನ ಮೆಜೆಸ್ಟಿಕ್ ಏರಿಯಾ ಹೇಗಿದೆ? ಅಲ್ಲಿನ ದಂಧೆಗಳು, ಅಕ್ರಮ ಚಟುವಟಿಕೆಗಳು ಹೇಗಿವೆ? ಈಗಲೂ ಅಲ್ಲಿ ರೌಡಿಸಂ ಹೇಗೆ ನಡೆಯುತ್ತೆ ಎಂಬಿತ್ಯಾದಿ ವಿವರಗಳನ್ನು ಅಲ್ಲಿಯೇ ಹುಟ್ಟಿ ಬೆಳೆದ ಹುಡುಗನೊಬ್ಬನ ಕಥೆಯ ಮೂಲಕ ನಿರ್ದೇಶಕ ರಾಮು ಅವರು ತೆರೆಗೆ ತರುತ್ತಿದ್ದಾರೆ. ಮೆಜೆಸ್ಟಿಕ್, ಹೆಚ್.ಎಂ.ಟಿ., ರಾಮೋಹಳ್ಳಿ, ಮಾಕಳಿ ಬಳಿಯ ಸಕ್ರೆ ಅಡ್ಡ, ಆರ್.ಟಿ. ನಗರದ ನಿಸರ್ಗ ಹೌಸ್, ಚಿತ್ರದುರ್ಗದ ಮರುಘಾ ಮಠ ಸೇರಿದಂತೆ ಹಲವು ಕಡೆಗಳಲ್ಲಿ ಈ ಸಿನಿಮಾಗೆ ಶೂಟಿಂಗ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್