‘ಉಪಾಧ್ಯಕ್ಷ’ನ ಚೆಲುವೆ ಈಗ ‘ವಿದ್ಯಾಪತಿ’ಗೆ ನಾಯಕಿ

Malaika: ‘ಉಪಾಧ್ಯಕ್ಷ’ ಸಿನಿಮಾನಲ್ಲಿ ನಾಯಕಿಯಾಗಿ ಮೊದಲ ಸಿನಿಮಾದಲ್ಲಿಯೇ ಯಶಸ್ಸು ಗಳಿಸಿದ ಮಲೈಕಾ ಈಗ ‘ವಿದ್ಯಾಪತಿ’ಗೆ ನಾಯಕಿ.

‘ಉಪಾಧ್ಯಕ್ಷ’ನ ಚೆಲುವೆ ಈಗ ‘ವಿದ್ಯಾಪತಿ’ಗೆ ನಾಯಕಿ
Follow us
ಮಂಜುನಾಥ ಸಿ.
|

Updated on: Feb 28, 2024 | 11:00 PM

ಧಾರಾವಾಹಿಯಲ್ಲಿ ಮಿಂಚಿ ಬಳಿಕ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಸೂಪರ್ ಹಿಟ್ ಆದ ‘ಉಪಾಧ್ಯಕ್ಷ’ (Upadyaksha) ಸಿನಿಮಾದಲ್ಲಿ ನಾಯಕಿಯಾಗಿಯೂ ಯಶಸ್ಸು ಗಳಿಸಿದ ನಟಿ ಮಲೈಕಾ ವಸೂಪಾಲ್, ಡಾಲಿ ಪಿಕ್ಚರ್ಸ್ ನಿರ್ಮಿಸುತ್ತಿರುವ ಹೊಸ ಸಿನಿಮಾಕ್ಕೆ ನಾಯಕಿ. ‘ಟಗರು ಪಲ್ಯ’ ಸಿನಿಮಾದ ಯಶಸ್ಸಿನ ಬಳಿಕ ಡಾಲಿ ಧನಂಜಯ್ ಹೊಸ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಮತ್ತೊಮ್ಮೆ ಧನು ಹಾಗೂ ನಾಗಭೂಷಣ್ ಕೈ ಜೋಡಿಸಿದ್ದು, ಈ ಚಿತ್ರಕ್ಕೆ ವಿದ್ಯಾಪತಿ ಎಂಬ ಹೆಸರು ಇಡಲಾಗಿದೆ. ಸಂಕ್ರಾಂತಿ ಹಬ್ಬಕ್ಕೆ ಫಸ್ಟ್ ಲುಕ್ ರಿಲೀಸ್ ಮಾಡಿದ್ದ ಚಿತ್ರತಂಡ ಇದೀಗ ನಾಯಕಿಯನ್ನು ಪ್ರೇಕ್ಷಕರಿಗೆ ಪರಿಚಯಿಸಿದೆ.

ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ಚಿಕ್ಕಣ್ಣನಿಗೆ ಉಪಾಧ್ಯಕ್ಷ ಸಿನಿಮಾದಲ್ಲಿ ನಾಯಕಿ ಮಿಂಚಿದ್ದ ಮಲೈಕಾ ವಸೂಪಾಲ್ ಈಗ ವಿದ್ಯಾಪತಿಗೆ ಜೋಡಿಯಾಗಿದ್ದಾರೆ. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದ ಮಲೈಕಾ ‘ಉಪಾಧ್ಯಕ್ಷ’ ಸಿನಿಮಾ ಮೂಲಕ ಬೆಳ್ಳಿಪರದೆಗೆ ಪ್ರವೇಶ ಮಾಡಿದ್ದರು. ಮೊದಲ ಸಿನಿಮಾದಲ್ಲಿಯೇ ಮಲೈಕಾಗೆ ದೊಡ್ಡ ಯಶಸ್ಸು ತಂದುಕೊಟ್ಟಿದೆ. ‘ಉಪಾಧ್ಯಕ್ಷ’ ಸಿನಿಮಾದಲ್ಲಿ ಇವರ ನಟನೆ ನೋಡಿ ಮೆಚ್ಚಿಕೊಂಡಿರುವ ‘ವಿದ್ಯಾಪತಿ’ ಚಿತ್ರತಂಡ ತಮ್ಮ ಸಿನಿಮಾಕ್ಕೆ ನಾಯಕಿಯನ್ನಾಗಿ ಆಯ್ಕೆ ಮಾಡಿದೆ.

ಇದನ್ನೂ ಓದಿ:Malaika Vasupal: ಬೋಲ್ಡ್​​​ ಲುಕ್​​ನಲ್ಲಿ ಹಿಟ್ಲರ್ ಕಲ್ಯಾಣ ಬೆಡಗಿ

‘ವಿದ್ಯಾಪತಿ’ ಸಿನಿಮಾದಲ್ಲಿ ಮಲೈಕಾ, ವಿದ್ಯಾ ಹೆಸರಿನ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಸರಳ, ಪಕ್ಕದ ಮನೆ ಹುಡುಗಿಯಾಗಿ ಮಲೈಕಾ ಈ ಸಿನಿಮಾನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ‘ಇಕ್ಕಟ್’ ಸಿನಿಮಾ ಮೂಲಕ ಭರವಸೆ ಹುಟ್ಟಿಸಿದ್ದ ಇಶಾಂ ಮತ್ತು ಹಸೀಂ ಖಾನ್ ‘ವಿದ್ಯಾಪತಿ’ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಜೊತೆಗೆ ಸಿನಿಮಾವನ್ನು ಇವರೆ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿದ್ದಾರೆ.

ಆಕ್ಷನ್ ಕಾಮಿಡಿ ಕಥಾಹಂದರ ಹೊಂದಿರುವ ‘ವಿದ್ಯಾಪತಿ’ ಸಿನಿಮಾದಲ್ಲಿ ನಾಗಭೂಷಣ್ ವಿಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ, ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಅರ್ಜುನ್ ಮಾಸ್ಟರ್ ಆಕ್ಷನ್ ವಿದ್ಯಾಪತಿ ಸಿನಿಮಾಕ್ಕಿದೆ. ಮಾರ್ಚ್ ತಿಂಗಳಿನಿಂದ ‘ವಿದ್ಯಾಪತಿ’ ನಾಯಕಿ ಮಲೈಕಾ ವಸೂಪಾಲ್ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಬಿಗ್ ಬಾಸ್​ ಕ್ಯಾಮೆರಾದಲ್ಲಿ ಸೆರೆ ಆಯ್ತು ಮೋಸದ ಆಟ; ಭವ್ಯಾ ಮೇಲೆ ಅನುಮಾನ
ಬಿಗ್ ಬಾಸ್​ ಕ್ಯಾಮೆರಾದಲ್ಲಿ ಸೆರೆ ಆಯ್ತು ಮೋಸದ ಆಟ; ಭವ್ಯಾ ಮೇಲೆ ಅನುಮಾನ