AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದಲಾಯ್ತು ಮಾಲಾಶ್ರೀ ಮಗಳ ಹೆಸರು; ಇನ್ಮುಂದೆ ಈ ಸುಂದರಿಯನ್ನು ಆರಾಧನಾ ಅಂತ ಕರೆಯಬೇಕು

ಚಿತ್ರರಂಗಕ್ಕೆ ಕಾಲಿಡುವಾಗ ಹೆಸರು ಬದಲಾಯಿಸಿಕೊಳ್ಳುವ ಟ್ರೆಂಡ್​ ಮೊದಲಿನಿಂದಲೂ ಬೆಳೆದುಬಂದಿದೆ. ರಾಜ್​ಕುಮಾರ್, ವಿಷ್ಣುವರ್ಧನ್​, ಯಶ್​ ಸೇರಿದಂತೆ ಬಹುತೇಕ ಎಲ್ಲ ಸ್ಟಾರ್​ ಕಲಾವಿದರು ಕೂಡ ತಮ್ಮ ಹೆಸರನ್ನು ಬದಲಾಯಿಸಿಕೊಂಡು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅದೇ ರೀತಿ ಈಗ ಮಾಲಾಶ್ರೀ ಅವರ ಪುತ್ರಿ ಕೂಡ ತಮ್ಮ ಹೆಸರನ್ನು ಚೇಂಜ್​ ಮಾಡಿಕೊಂಡಿದ್ದಾರೆ.

ಬದಲಾಯ್ತು ಮಾಲಾಶ್ರೀ ಮಗಳ ಹೆಸರು; ಇನ್ಮುಂದೆ ಈ ಸುಂದರಿಯನ್ನು ಆರಾಧನಾ ಅಂತ ಕರೆಯಬೇಕು
ಮಾಲಾಶ್ರೀ ಪುತ್ರಿ ಆರಾಧನಾ
ಮದನ್​ ಕುಮಾರ್​
|

Updated on:Aug 20, 2023 | 10:28 AM

Share

ಕನ್ನಡ ಚಿತ್ರರಂಗದಲ್ಲಿ ಸ್ಟಾರ್​ ನಟಿ ಮಾಲಾಶ್ರೀ (Malashree) ಅವರು ಮಾಡಿದ ಮೋಡಿ ಸಣ್ಣದೇನಲ್ಲ. ಕ್ಯೂಟ್​ ಹುಡುಗಿಯಾಗಿ ಮಾತ್ರವಲ್ಲದೇ ಆ್ಯಕ್ಷನ್​ ಕ್ವೀನ್​ ಆಗಿಯೂ ಅವರು ತೆರೆ ಮೇಲೆ ಮಿಂಚಿದ್ದಾರೆ. ಇಂದು ಚಿತ್ರರಂಗಕ್ಕೆ ಕಾಲಿಡುವ ಎಷ್ಟೋ ಯುವತಿಯರಿಗೆ ಮಾಲಾಶ್ರೀ ಅವರೇ ಸ್ಫೂರ್ತಿ. ಈಗ ಅವರ ಪುತ್ರಿ (Malashree Daughter) ಕೂಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಹೊಸ ವಿಷಯ ಏನೆಂದರೆ, ಮಾಲಾಶ್ರೀ ಅವರ ಮಗಳು ಹೆಸರು ಬದಲಾಯಿಸಿಕೊಂಡಿದ್ದಾರೆ. ಇಷ್ಟು ದಿನ ಅವರನ್ನು ಅನನ್ಯಾ ಮತ್ತು ರಾಧನಾ ಎಂಬ ಹೆಸರುಗಳಿಂದ ಕರೆಯಲಾಗುತ್ತಿತ್ತು. ಈಗ ಅವರ ಹೆಸರು ಬದಲಾಗಿದೆ. ಮಗಳಿಗೆ ಆರಾಧನಾ (Aradhanaa) ಎಂದು ಮಾಲಾಶ್ರೀ ಅವರು ಹೊಸ ಹೆಸರು ಇಟ್ಟಿದ್ದಾರೆ. ಈ ಬಗ್ಗೆ ಅವರೇ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

ಚಿತ್ರರಂಗಕ್ಕೆ ಕಾಲಿಡುವಾಗ ಹೆಸರು ಬದಲಾಯಿಸಿಕೊಳ್ಳುವ ಟ್ರೆಂಡ್​ ಮೊದಲಿನಿಂದಲೂ ಬೆಳೆದುಬಂದಿದೆ. ರಾಜ್​ಕುಮಾರ್, ವಿಷ್ಣುವರ್ಧನ್​, ಯಶ್​ ಸೇರಿದಂತೆ ಬಹುತೇಕ ಎಲ್ಲ ಸ್ಟಾರ್​ ಕಲಾವಿದರು ಕೂಡ ತಮ್ಮ ಹೆಸರನ್ನು ಬದಲಾಯಿಸಿಕೊಂಡು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅದೇ ರೀತಿಯ ಈಗ ಮಾಲಾಶ್ರೀ ಅವರ ಮಗಳು ಕೂಡ ತಮ್ಮ ಹೆಸರನ್ನು ಚೇಂಜ್​ ಮಾಡಿಕೊಂಡಿದ್ದಾರೆ. ಇನ್ಮುಂದೆ ಅವರನ್ನು ಆರಾಧನಾ ಎಂದು ಕರೆಯಲಾಗುತ್ತದೆ. ಇದು ಕೇವಲ ಒಂದು ಸಿನಿಮಾಗೆ ಮಾತ್ರವಲ್ಲ. ಎಲ್ಲ ಸಿನಿಮಾಗಳಲ್ಲೂ ಅವರು ಇದೇ ಹೆಸರಿನಿಂದ ಗುರುತಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ‘ಪ್ರಾರ್ಥನೆ ಮಾಡಿದ ಬಳಿಕ ಮೂರೇ ತಿಂಗಳಲ್ಲಿ ಕೊರಗಜ್ಜನ ಪವಾಡ ನಡೆಯಿತು’: ನಟಿ ಮಾಲಾಶ್ರೀ

ಹೆಸರು ಬದಲಾವಣೆ ಮಾಡಿಕೊಂಡಿರುವ ಆರಾಧನಾ ಅವರು ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ಈ ವಿಷಯ ತಿಳಿಸಿದ್ದಾರೆ. ‘ಎಲ್ಲರಿಗೂ ನಮಸ್ಕಾರ. ನಾನು ನಿಮ್ಮ ರಾಧನಾ ರಾಮ. ಇಂದಿನಿಂದ ನನ್ನ ಹೆಸರು ಆರಾಧನಾ ಎಂದು ನಿಮಗೆ ಸುದ್ದಿ ನೀಡಲು ನಾನು ಬಯಸುತ್ತೇನೆ. ಈ ಬದಲಾವಣೆಗಾಗಿ ನಿಮ್ಮೆಲ್ಲರ ಆಶೀರ್ವಾದವನ್ನು ನೀಡಬೇಕೆಂದು ನಾನು ಕೇಳುತ್ತೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ತುಂಬಾ ಧನ್ಯವಾದಗಳು ಮತ್ತು ಇದು ಯಾವಾಗಲೂ ನನ್ನೊಂದಿಗೆ ಸದಾ ಇರಲಿ ಎಂದು ಕೇಳಿಕೊಳ್ಳುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

ಆರಾಧನಾ ಇನ್​ಸ್ಟಾಗ್ರಾಮ್​ ಪೋಸ್ಟ್​:

ನಿರ್ಮಾಪಕ ಕೋಟಿ ರಾಮು ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದರು. ಅನೇಕ ಸೂಪರ್​ ಹಿಟ್​ ಸಿನಿಮಾಗಳನ್ನು ನಿರ್ಮಾಣ ಮಾಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ರಾಮು-ಮಾಲಾಶ್ರೀ ದಂಪತಿಯ ಮಗಳು ಆರಾಧನಾ ಕೂಡ ಈಗ ಚಿತ್ರರಂಗಕ್ಕೆ ಪ್ರವೇಶ ಪಡೆಯುತ್ತಿದ್ದಾರೆ. ಅವರ ಮೊದಲ ಸಿನಿಮಾಗೆ ತರುಣ್​ ಸುಧೀರ್​ ಅವರು ನಿರ್ದೇಶನ ಮಾಡುತ್ತಿದ್ದು, ರಾಕ್​ಲೈನ್ ವೆಂಕಟೇಶ್​ ಅವರು ಬಂಡವಾಳ ಹೂಡುತ್ತಿದ್ದಾರೆ. ‘ರಾಕ್ ಲೈನ್ ವೆಂಕಟೇಶ್, ತರುಣ್ ಸುಧೀರ್ ಮತ್ತು ನಾನು ಒಟ್ಟಾಗಿ ಚರ್ಚಿಸಿ ಆರಾಧನಾ ಎಂಬ ಹೆಸರನ್ನು ಆಯ್ಕೆ ಮಾಡಿದ್ದೇವೆ’ ಎಂದು ಮಾಲಾಶ್ರೀ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:15 am, Sun, 20 August 23

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?