‘ಮುಸ್ಲಿಂ ಧರ್ಮಕ್ಕೆ ಬಂದರಷ್ಟೇ ಪ್ರೀತಿಸುತ್ತೇನೆ ಎನ್ನುವುದಾದರೆ ಅದು ಯಾವ ರೀತಿಯ ಪ್ರೀತಿ’; ಮಾಳವಿಕಾ ಅವಿನಾಶ್ ಪ್ರಶ್ನೆ  

ಮಾಳವಿಕಾ ಅವಿನಾಶ್ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅವರು ಈಗ ಲವ್ ಜಿಹಾದ್ ಬಗ್ಗೆ ಮಾತನಾಡಿದ್ದಾರೆ. ನೀನು ಮತಾಂತರವಾಗಿ ಮುಸ್ಲಿಂ ಧರ್ಮಕ್ಕೆ ಬಂದರಷ್ಟೇ ಪ್ರೀತಿಸುತ್ತೇನೆ ಎನ್ನುವುದಾದರೆ ಅದು ಯಾವ ರೀತಿಯ ಪ್ರೀತಿ ಎಂದಿದ್ದಾರೆ.

‘ಮುಸ್ಲಿಂ ಧರ್ಮಕ್ಕೆ ಬಂದರಷ್ಟೇ ಪ್ರೀತಿಸುತ್ತೇನೆ ಎನ್ನುವುದಾದರೆ ಅದು ಯಾವ ರೀತಿಯ ಪ್ರೀತಿ’; ಮಾಳವಿಕಾ ಅವಿನಾಶ್ ಪ್ರಶ್ನೆ   
ಮಾಳವಿಕಾ ಅವಿನಾಶ್
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ರಾಜೇಶ್ ದುಗ್ಗುಮನೆ

Updated on:Dec 04, 2023 | 10:45 AM

ನಟಿ ಮಾಳವಿಕಾ ಮೋಹನ್ (Malavika Mohan) ಅವರು ಲವ್ ಜಿಹಾದ್ ವಿಚಾರವಾಗಿ ಹಿಂದೂ ಯುವತಿಯರಿಗೆ ಕಿವಿಮಾತು ಹೇಳಿದ್ದಾರೆ. ಆಸೆ ಆಮಿಷಗಳಿಗೆ ಒಳಗಾಗಿ ಧರ್ಮ ತೊರೆಯದಂತೆ ಹಿಂದೂ ಯುವತಿಯರಿಗೆ ಮಾಳವಿಕಾ ಕರೆ ನೀಡಿದ್ದಾರೆ. ಪುತ್ತೂರಿನ ತೆಂಕಿಲದಲ್ಲಿ ನಡೆದ ಪುತ್ತೂರು ಜಿಲ್ಲಾ ಮಹಿಳಾ ಸಮ್ಮೇಳನ ‘ನಾರಿ ಶಕ್ತಿ ಸಂಗಮ’ದಲ್ಲಿ ಮಾಳವಿಕಾ ಮಾತನಾಡಿದ್ದಾರೆ. ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ.

ಲವ್ ಜಿಹಾದ್ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾಳವಿಕಾ ಮಾತನಾಡಿದ್ದಾರೆ. ‘ವಿವಿಧ ಆಸೆ, ಆಮಿಷಗಳಿಗೆ ಒಳಗಾಗಿ ಲವ್ ಜಿಹಾದ್ ಮೂಲಕ ಯುವತಿಯರು ಧರ್ಮ ತೊರೆಯುತ್ತಿದ್ದಾರೆ. ತಮ್ಮ ಧರ್ಮವನ್ನು ತೊರೆದು ಅನ್ಯ ಧರ್ಮದ ಕಟ್ಟುಪಾಡಿಗೊಳಗಾಗುವ ಮೊದಲು ಅವರು ತಮ್ಮ ಭವಿಷ್ಯದ ಕುರಿತು ಗಂಭೀರ ಚಿಂತನೆ ನಡೆಸಬೇಕು. ಹಿಂದೂ ಧರ್ಮದಲ್ಲಿ ಏಕ ಪತ್ನಿ ಸಂಸ್ಕಾರವಿದೆ. ಇಲ್ಲಿ ಪತಿ-ಪತ್ನಿಗೆ ಸಮಾನ ಹಕ್ಕಿದೆ’ ಎಂದಿದ್ದಾರೆ ಮಾಳವಿಕಾ.

‘ಮುಸ್ಲಿಂ ಧರ್ಮದಲ್ಲಿ ಬಹು ಪತ್ನಿತ್ವದ ಪದ್ಧತಿಯಿದೆ. ಅನ್ಯ ಧರ್ಮೀಯರನ್ನು ವಿವಾಹವಾಗುವ ಹಿಂದೂ ಯುವತಿ ತನ್ನ ಹಕ್ಕುಗಳಿಂದ ವಂಚಿತಳಾಗುತ್ತಾಳೆ. ಇದಲ್ಲದೆ ಬಹುಪತ್ನಿತ್ವದಡಿ ಓರ್ವಳಾಗಿ ಬದುಕು ಸಾಗಿಸುವ ಅನಿವಾರ್ಯತೆ ಒದಗಿ ಬರುತ್ತದೆ. ನೀನು ಮತಾಂತರವಾಗಿ ಮುಸ್ಲಿಂ ಧರ್ಮಕ್ಕೆ ಬಂದರಷ್ಟೇ ಪ್ರೀತಿಸುತ್ತೇನೆ ಎನ್ನುವುದಾದರೆ ಅದು ಯಾವ ರೀತಿಯ ಪ್ರೀತಿ? ಪ್ರೇಮ ಅಂದರೆ ಏನು ಎಂಬುದನ್ನು ಪ್ರತಿಯೊಬ್ಬ ಯುವತಿ ಅರ್ಥೈಸಿಕೊಳ್ಳಬೇಕಾಗಿದೆ’ ಎಂದು ಅವರು ಕರೆ ನೀಡಿದ್ದಾರೆ.

 ಮಸೀದಿ ಬಗ್ಗೆ ಪ್ರಶ್ನೆ..

‘ಶಬರಿಮಲೆಗೆ ಹತ್ತು ವರ್ಷದ ಒಳಗಿನ ಹೆಣ್ಣು ಮಕ್ಕಳು ಹಾಗೂ ವಯಸ್ಸಾದ ಮಹಿಳೆಯರು ಮಾತ್ರ ಹೋಗಬಹುದು. ಅದೊಂದು ದೇವಸ್ಥಾನದಲ್ಲಿ ಮಾತ್ರ ಹರೆಯದ ಮಹಿಳೆಯರಿಗೆ ಪ್ರವೇಶವಿಲ್ಲ. ಆದರೆ ಯಾವ ಮಸೀದಿಯಲ್ಲಿ ಮುಸ್ಲಿಂ ಮಹಿಳೆಯರಿಗೆ ಪ್ರವೇಶಕ್ಕೆ ಅವಕಾಶವಿದೆ? ಮತಾಂತರ ಆದರೆ ಇದನ್ನೆಲ್ಲಾ ಹಿಂದೂ ಮಹಿಳೆಯರು ಕಳೆದುಕೊಳ್ಳಬೇಕಾಗುತ್ತದೆ’ ಎಂದಿದ್ದಾರೆ ಮಾಳವಿಕಾ.

ಇದನ್ನೂ ಓದಿ: Avinash: ‘ಕಾಳಿ ನಮ್ಮನೆಯ ಯಶೋಧಾ, ನಾನು ಹೆತ್ತವಳಷ್ಟೆ, ಆದರೆ..’; ಮಗನ ಬಗ್ಗೆ ಮಾಳವಿಕಾ ಅವಿನಾಶ್ ಮಾತು

ಸಮಾನ ಹಕ್ಕು..

‘ಕಾನೂನಿನ ಪ್ರಕಾರ ಹಿಂದೂ ಸಮಾಜದಲ್ಲಿ ವಿವಾಹ, ವಿಚ್ಛೇದನದ ಚೌಕಟ್ಟು ಮಹಿಳೆಯರ ಪರವಾಗಿದೆ. ಅದೇ ಷರಿಯತ್ ಕಾನೂನಿನಲ್ಲಿ ಒಬ್ಬನಿಗೆ ನಾಲ್ವರು ಹೆಂಡತಿಯರು ಇರಬಹುದು‌. ಆಸ್ತಿ ವಿಚಾರದಲ್ಲಿ ಹಿಂದೂ ಕಾನೂನಿನಲ್ಲಿ ಸಮಾನವಾದ ಆಸ್ತಿ ಹಕ್ಕಿದೆ. ಕಾನೂನಾತ್ಮಕವಾಗಿ ನೋಡೋದಾದರೆ ಮತಾಂತರ ಆದಾಗ ನೀವು ಸಾಕಷ್ಟನ್ನು ಕಳೆದುಕೊಳ್ಳುತ್ತೀರಿ’ ಎಂದು ಮಾಳವಿಕಾ ಎಚ್ಚರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:44 am, Mon, 4 December 23

ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ