‘ಮುಂಗಾರು ಮಳೆ’ ತಂಡದ ‘ಮನದ ಕಡಲು’ ಸಿನಿಮಾ ಹಾಡು ಬಿಡುಗಡೆ

Manada Kadalu: ಯೋಗರಾಜ್ ಭಟ್ ನಿರ್ದೇಶಿಸಿ, ಇ ಕೃಷ್ಣಪ್ಪ ನಿರ್ಮಾಣ ಮಾಡಿದ್ದ ‘ಮುಂಗಾರು ಮಳೆ’ ಸಿನಿಮಾ ಬಿಡುಗಡೆ ಆಗಿ ಹದಿನೆಂಟು ವರ್ಷಗಳಾಗಿವೆ. ಇದೀಗ ಇ ಕೃಷ್ಣಪ್ಪ ಮತ್ತು ಯೋಗರಾಜ್ ಭಟ್ ಮತ್ತೆ ಒಂದಾಗಿದ್ದು, ‘ಮನದು ಕಡಲು’ ಹೆಸರಿನ ಸಿನಿಮಾ ನಿರ್ಮಿಸುತ್ತಿದ್ದಾರೆ. ಈ ಸಿನಿಮಾದ ಹೊಸ ಹಾಡೊಂದು ಇದೀಗ ಬಿಡುಗಡೆ ಆಗಿದೆ.

‘ಮುಂಗಾರು ಮಳೆ’ ತಂಡದ ‘ಮನದ ಕಡಲು’ ಸಿನಿಮಾ ಹಾಡು ಬಿಡುಗಡೆ
Manada Kadalu
Follow us
ಮಂಜುನಾಥ ಸಿ.
|

Updated on: Dec 31, 2024 | 5:50 PM

‘ಮುಂಗಾರು ಮಳೆ’ ಸಿನಿಮಾ ಕನ್ನಡ ಚಿತ್ರರಂಗದ ದಿಕ್ಕು ಬದಲಾಯಿಸಿದ ಸಿನಿಮಾ. ಈಗ ‘ಕೆಜಿಎಫ್ 2’, ‘ಕಾಂತಾರ’ ಸಿನಿಮಾಗಳು ಹೇಗೋ ಒಂದು ಹಂತಕ್ಕೆ ಇವುಗಳಿಗಿಂತಲೂ ಹೆಚ್ಚಿನ ಪ್ರಭಾವನ್ನು ‘ಮುಂಗಾರು ಮಳೆ’ ಸಿನಿಮಾ ಬೀರಿತ್ತು. ಇದೀಗ ಈ ಸಿನಿಮಾ ಬಿಡುಗಡೆ ಆಗಿ ಹದಿನೆಂಟು ವರ್ಷಗಳಾಗಿದೆ. ‘ಮುಂಗಾರು ಮಳೆ’ ಸಿನಿಮಾದ ಬಳಿಕ ಅದರ ನಿರ್ಮಾಪಕರಾದ ಇ ಕೃಷ್ಣಪ್ಪ ಅವರು ಮತ್ತೊಮ್ಮೆ ಯೋಗರಾಜ್ ಭಟ್ ಜೊತೆ ಕೈ ಜೋಡಿಸಿರಲಿಲ್ಲ. ಆದರೆ ಈಗ ಇದೇ ಜೋಡಿ ಹದಿನೆಂಟು ವರ್ಷದ ಬಳಿಕ ಮತ್ತೊಮ್ಮೆ ಒಂದಾಗಿದ್ದಾರೆ.

‘ಮುಂಗಾರು ಮಳೆ’ ನಿರ್ಮಾಣ ಮಾಡಿದ್ದ ಇಕೆ ಎಂಟರ್ಟೈನ್​ಮೆಂಟ್​ ನಿರ್ಮಾಣದ ಹೊಸ ಸಿನಿಮಾ ಅನ್ನು ಯೋಗರಾಜ್ ಭಟ್ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಕ್ಕೆ ‘ಮನದ ಕಡಲು’ ಎಂದು ಹೆಸರಿಟ್ಟಿದ್ದು, ‘ಮುಂಗಾರು ಮಳೆ’ ಬಿಡುಗಡೆ ಆಗಿ ಹದಿನೆಂಟು ವರ್ಷ ಆಗಿರುವ ಕಾರಣ ‘ಮನದ ಕಡಲು’ ಸಿನಿಮಾದ ಸುಮಧುರ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ.

‘ಮುಂಗಾರು ಮಳೆ’ ಸಿನಿಮಾ ಬಿಡುಗಡೆ ಆಗಿ ಡಿಸೆಂಬರ್​ಗೆ ಹದಿನೆಂಟು ವರ್ಷವಾಗಿದೆ. ‘ಮುಂಗಾರು ಮಳೆ’ ಬಿಡುಗಡೆಯಾದ ದಿನವೇ ‘ಮನದ ಕಡಲು’ ಸಿನಿಮಾಕ್ಕಾಗಿ ಯೋಗರಾಜ್ ಭಟ್ ಸಾಹಿತ್ಯ ರಚಿಸಿ, ವಿ.ಹರಿಕೃಷ್ಣ ಸಂಗೀತ ನೀಡಿರುವ ‘ಹೂ ದುಂಬಿಯ ಕಥೆಯ’ ಎಂಬ ಸುಂದರ ಹಾಡು ಬಿಡುಗಡೆ ಆಗಿದೆ. ಸಂಜಿತ್ ಹೆಗ್ಡೆ ಈ ಸುಮಧುರ ಹಾಡಿಗೆ ಧನಿಯಾಗಿದ್ದಾರೆ. ‘ಮನದ ಕಡಲು’ ಸಿನಿಮಾದ ಮೊದಲ ಹಾಡು ಇದ್ದಾಗಿದ್ದು,‌ ವಿ ಹರಿಕೃಷ್ಣ ಅವರು ಹಾಡನ್ನು ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ:ಅಂದು ‘ಮುಂಗಾರು ಮಳೆ’, ಇಂದು ‘ಮನದ ಕಡಲು’: ಯೋಗರಾಜ್ ಭಟ್-ಇ. ಕೃಷ್ಣಪ್ಪ ಹೊಸ ಸಿನಿಮಾ

ನಿರ್ದೇಶಕ ಯೋಗರಾಜ್ ಭಟ್ ಮಾತನಾಡಿ, ‘ಮನದ ಕಡಲು’ ಸಿನಿಮಾದ ಈ ಹಾಡು ಹುಟ್ಟಿದ್ದು ನಿರ್ಮಾಪಕರ ತೋಟದ ಮನೆಯಲ್ಲಿ. ಕಂಪೋಸ್ ಆಗಿದ್ದು‌ ನನ್ನ‌ ಆಫೀಸ್​ನ ಮೇಲಿರುವ ಸ್ಟುಡಿಯೋದಲ್ಲಿ. ಹರಿಕೃಷ್ಣ ಅವರ ಸಂಗೀತ ಸಂಯೋಜನೆಯಲ್ಲಿ ಸಂಚಿತ್ ಹೆಗ್ಡೆ ಗಾಯನದಲ್ಲಿ ಮುರಳಿ ನೃತ್ಯ ಸಂಯೋಜನೆಯಲ್ಲಿ ‘ಹೂ ದುಂಬಿಯ ಕಥೆಯ’ ಹಾಡು ಮೂಡಿಬಂದಿದೆ.‌ ಸುಮುಖ ಹಾಗು ರಾಶಿಕಾ ಶೆಟ್ಟಿ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ ಎಂದರು.

‘ಹದಿನೆಂಟು ವರ್ಷಗಳ ನಂತರ ಯೋಗರಾಜ್ ಭಟ್ ಅವರ ಜೊತೆ ಮತ್ತೆ ಚಿತ್ರ ಮಾಡುತ್ತಿದ್ದೇನೆ. ಆದರೆ ನಿಮ್ಮ ಜೊತೆ ಸಿನಿಮಾ ಮಾಡುವುದಾದರೆ ಹೊಸ ನಾಯಕನೇ ಇರಬೇಕು ಅಂದಿದೆ. ಹೊಸ ಪ್ರತಿಭೆ ಸುಮುಖ ನಾಯಕನಾಗಿ, ರಾಶಿಕಾ ಹಾಗೂ ಅಂಜಲಿ ನಾಯಕಿಯರಾಗಿ ನಟಿಸಿದ್ದಾರೆ. ಯಾವುದೇ ಕೊರತೆ ಬಾರದ ಹಾಗೆ ಒಂದೊಳ್ಳೆ ಸಿನಿಮಾ‌ ಮಾಡಿದ್ದೀನಿ. ಮುಂದಿನದ್ದು ಪ್ರೇಕ್ಷಕರಿಗೆ ಬಿಟ್ಟಿದ್ದು. ಇಂದು ಬಿಡುಗಡೆ ಆಗಿರುವ ಹಾಡು ಚೆನ್ನಾಗಿದೆ ಎಂದರು ನಿರ್ಮಾಪಕ ಇ.ಕೃಷ್ಣಪ್ಪ.

‘ಸಿನಿಮಾವನ್ನು ತುಂಬಾ ಪ್ರೀತಿಸುವ ತಂಡದ ಜೊತೆಗೆ ಕೆಲಸ ಮಾಡಿದ್ದು ತುಂಬಾ ಖುಷಿಯಾಗಿದೆ ಎಂದು ಮಾತನಾಡಿದ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ, ಯೋಗರಾಜ್ ಭಟ್ ಅವರು ಬರೆದಿರುವ ಹಾಡನ್ನು ಸಂಜಿತ್ ಸುಶ್ರಾವ್ಯವಾಗಿ ಹಾಡಿದ್ದಾರೆ. ತೆರೆಯ ಮೇಲೂ ಹಾಡು ಬಹಳ ಚೆನ್ನಾಗಿ ಬಂದಿದೆ ಎಂದರು. ಯೋಗರಾಜ್ ಭಟ್ ಬರೆದಿರುವ, ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಹಾಡಲು ಬಹಳ ಖುಷಿಯಾಗಿದೆ ಎಂದು ತಿಳಿಸಿದ ಗಾಯಕ ಸಂಜಿತ್ ಹೆಗ್ಡೆ, ತಾವೇ ಹಾಡಿರುವ ಹಾಡಿನ‌ ನಾಲ್ಕು ಸಾಲುಗಳನ್ನು ವೇದಿಕೆಯ ಮೇಲೂ ಹಾಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ