‘ಕಾಂತಾರ ಪ್ರೀಕ್ವೆಲ್​ನಲ್ಲಿ ನಟಿಸಲು ಅವಕಾಶ ಕೊಡಿ’; ರಿಷಬ್​ ಶೆಟ್ಟಿ ಬಳಿ ಚಾನ್ಸ್​ ಕೇಳಿದ ಖ್ಯಾತ ನಟಿ

‘ಕಾಂತಾರ: ಚಾಪ್ಟರ್​ 1’ ಸಿನಿಮಾದಲ್ಲಿ ಪಾಯಲ್​ ರಜಪೂತ್​​ ಅವರಿಗೆ ಅವಕಾಶ ಸಿಗಲಿ ಎಂದು ಅವರ ಅಭಿಮಾನಿಗಳು ಬಯಸುತ್ತಿದ್ದಾರೆ. ಪಂಜಾಬಿ, ಹಿಂದಿ, ತೆಲುಗು, ತಮಿಳು ಸಿನಿಮಾಗಳಲ್ಲಿ ಅಭಿನಯಿಸಿ ಪಾಯಲ್​ ರಜಪೂತ್​ ಫೇಮಸ್​ ಆಗಿದ್ದಾರೆ. ಕನ್ನಡದ ಹೆಡ್​ಬುಷ್​ ಸಿನಿಮಾದಲ್ಲೂ ಅವರು ನಟಿಸಿದ್ದಾರೆ.

‘ಕಾಂತಾರ ಪ್ರೀಕ್ವೆಲ್​ನಲ್ಲಿ ನಟಿಸಲು ಅವಕಾಶ ಕೊಡಿ’; ರಿಷಬ್​ ಶೆಟ್ಟಿ ಬಳಿ ಚಾನ್ಸ್​ ಕೇಳಿದ ಖ್ಯಾತ ನಟಿ
ಪಾಯಲ್​ ರಜಪೂತ್​, ರಿಷಬ್​ ಶೆಟ್ಟಿ
Follow us
ಮದನ್​ ಕುಮಾರ್​
|

Updated on: Dec 13, 2023 | 10:57 AM

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಣ ಆಗುತ್ತಿರುವ ‘ಕಾಂತಾರ: ಚಾಪ್ಟರ್​ 1’ (Kantara Chapter 1) ಸಿನಿಮಾಗೆ ಕೆಲವೇ ದಿನಗಳ ಹಿಂದೆ ಮುಹೂರ್ತ ನೆರವೇರಿತು. ಈಗ ಆ ಸಿನಿಮಾಗೆ ಕಲಾವಿದರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಇತ್ತೀಚೆಗಷ್ಟೇ ಆಡಿಷನ್​ ಬಗ್ಗೆ ನಿರ್ಮಾಣ ಸಂಸ್ಥೆಯಿಂದ ಮಾಹಿತಿ ಹಂಚಿಕೊಳ್ಳಲಾಗಿತ್ತು. ಅದಕ್ಕೆ ಅನೇಕರು ಪ್ರತಿಕ್ರಿಯಿಸಿದ್ದಾರೆ. ವಿಶೇಷ ಏನೆಂದರೆ, ಖ್ಯಾತ ನಟಿ ಪಾಯಲ್​ ರಜಪೂತ್​ (Payal Rajput) ಕೂಡ ಈ ಸಿನಿಮಾದಲ್ಲಿ ನಟಿಸುಲು ಅವಕಾಶ ಕೊಡಿ ಎಂದು ನೇರವಾಗಿ ರಿಷಬ್​ ಶೆಟ್ಟಿ (Rishab Shetty) ಬಳಿ ಮನವಿ ಮಾಡಿಕೊಂಡಿದ್ದಾರೆ. ಅವರು ಮಾಡಿರುವ ಪೋಸ್ಟ್​ ವೈರಲ್​ ಆಗಿದೆ.

ಪಂಜಾಬಿ, ಹಿಂದಿ, ತೆಲುಗು, ತಮಿಳು ಸಿನಿಮಾಗಳಲ್ಲಿ ಅಭಿನಯಿಸಿ ಪಾಯಲ್​ ರಜಪೂತ್​ ಫೇಮಸ್​ ಆಗಿದ್ದಾರೆ. ಕನ್ನಡದ ಹೆಡ್​ಬುಷ್​ ಸಿನಿಮಾದಲ್ಲೂ ಅವರು ನಟಿಸಿದ್ದಾರೆ. ‘ಕಾಂತಾರ ಚಾಪ್ಟರ್​ 1 ಸಿನಿಮಾಗೆ ಆಡಿಷನ್​ ನಡೆಯುತ್ತಿರುವ ಬಗ್ಗೆ ತಿಳಿಯಿತು. ಈ ಸಿನಿಮಾಗೆ ನಾನು ಕೊಡುಗೆ ನೀಡಬೇಕು ಎಂದು ಬಯಸಿದ್ದೇನೆ. ಇತ್ತೀಚೆಗೆ ಬಿಡುಗಡೆಯಾದ ‘ಮಂಗಳವಾರಂ’ ಸಿನಿಮಾದಲ್ಲಿ ನನ್ನ ನಟನೆ ಮೆಚ್ಚುಗೆಗೆ ಪಾತ್ರವಾಗಿದೆ. ಸಮಯ ಮಾಡಿಕೊಂಡು ಈ ಸಿನಿಮಾ ನೋಡಿ. ಆಡಿಷನ್​ ಬಗ್ಗೆ ನನಗೆ ಸಲಹೆ ನೀಡಿ’ ಎಂದು ಪಾಯಲ್​ ರಜಪೂತ್​ ಪೋಸ್ಟ್​ ಮಾಡುವ ಮೂಲಕ ರಿಷಬ್​ ಶೆಟ್ಟಿ ಮತ್ತು ಹೊಂಬಾಳೆ ಫಿಲ್ಮ್ಸ್​ ಬಳಿ ಅವಕಾಶ ಕೇಳಿದ್ದಾರೆ.

‘ಕಾಂತಾರ: ಚಾಪ್ಟರ್​ 1’ ಸಿನಿಮಾದಲ್ಲಿ ಪಾಯಲ್​ ರಜಪೂತ್​​ ಅವರಿಗೆ ಅವಕಾಶ ಸಿಗಲಿ ಎಂದು ಅವರ ಅಭಿಮಾನಿಗಳು ಬಯಸುತ್ತಿದ್ದಾರೆ. ‘ನನ್ನ ಹೆಸರನ್ನು ಶಿಫಾರಸು ಮಾಡಿದ್ದಕ್ಕೆ ಮತ್ತು ಇದನ್ನು ರೀಪೋಸ್ಟ್​ ಮಾಡುತ್ತಿದ್ದಕ್ಕೆ ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳು’ ಎಂದು ಪಾಯಲ್​ ರಜಪೂತ್​ ಬರೆದುಕೊಂಡಿದ್ದಾರೆ. ಇದಕ್ಕೆ ರಿಷಬ್​ ಶೆಟ್ಟಿ ಹೇಗೆ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು.

ಆನೆಗುಡ್ಡೆ ವಿನಾಯಕನ ಮಹಿಮೆ; ಈ ದೇವರಿಂದ ರಿಷಬ್​ ಶೆಟ್ಟಿ, ಪ್ರಗತಿ ಶೆಟ್ಟಿ ಬದುಕಲ್ಲಿ ಏನೆಲ್ಲ ಆಯ್ತು ಗೊತ್ತಾ?

2022ರಲ್ಲಿ ಬಿಡುಗಡೆ ಆದ ‘ಕಾಂತಾರ’ ಬ್ಲಾಕ್​ ಬಸ್ಟರ್​ ಹಿಟ್​ ಆಯಿತು. ಈಗ ಇದಕ್ಕೆ ಪ್ರೀಕ್ವೆಲ್​ ಸಿದ್ಧವಾಗುತ್ತಿದೆ. ರಿಷಬ್​ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ನಾಯಕಿಯಾಗಿ ಯಾರು ಆಯ್ಕೆ ಆಗುತ್ತಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್