AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೇಶಕ ಆರ್. ಚಂದ್ರು ಇನ್ಮುಂದೆ ಡಾ. ಆರ್. ಚಂದ್ರು; ಸಿಕ್ತು ಗೌರವ ಡಾಕ್ಟರೇಟ್

ಚಿತ್ರರಂಗದ ಯಾವುದೇ ಹಿನ್ನೆಲೆ ಇಲ್ಲದೇ, ಹಳ್ಳಿಯಿಂದ ಬಂದು ಯಶಸ್ಸು ಕಂಡವರು ಆರ್. ಚಂದ್ರು. ನಿರ್ದೇಶಕನಾಗಿ, ನಿರ್ಮಾಪಕನಾಗಿ ಚಂದ್ರು ಅವರು ಹಲವರಿಗೆ ಅವಕಾಶಗಳನ್ನು ನೀಡಿದ್ದಾರೆ. ಅವರ ಕೊಡುಗೆಯನ್ನು ಗುರುತಿಸಿ ಮಣಿಪುರ ಇಂಟರ್ನ್ಯಾಷನಲ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ನೀಡುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ..

ನಿರ್ದೇಶಕ ಆರ್. ಚಂದ್ರು ಇನ್ಮುಂದೆ ಡಾ. ಆರ್. ಚಂದ್ರು; ಸಿಕ್ತು ಗೌರವ ಡಾಕ್ಟರೇಟ್
R. Chandru
ಮದನ್​ ಕುಮಾರ್​
|

Updated on: Feb 06, 2026 | 4:08 PM

Share

‘ತಾಜ್ ಮಹಲ್’, ‘ಚಾರ್ಮಿನಾರ್’, ‘ಕಬ್ಜ’ ಸಿನಿಮಾಗಳ ನಿರ್ದೇಶಕ ಆರ್. ಚಂದ್ರು ಅವರಿಗೆ ಮಣಿಪುರ ಇಂಟರ್ನ್ಯಾಷನಲ್ ಯೂನಿವರ್ಸಿಟಿಯು (MIU) ಗೌರವ ಡಾಕ್ಟರೇಟ್ (Honorary Doctorate) ನೀಡಿ ಗೌರವಿಸುವುದಾಗಿ ಘೋಷಿಸಿದೆ. ಸಿನಿಮಾ, ಕಲೆ, ಸಾಂಸ್ಕೃತಿಕ ಶ್ರೇಷ್ಠತೆ ಮತ್ತು ಸಮಾಜ ಸೇವೆಯಲ್ಲಿ ಆರ್. ಚಂದ್ರು ಅವರು ಮಾಡಿರುವ ಸಾಧನೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ. ಆರ್. ಚಂದ್ರು (R. Chandru) ಅವರಿಗೆ ಅಭಿಮಾನಿಗಳು ಮತ್ತು ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಕೇಶವವಾರ ಎಂಬ ಪುಟ್ಟ ಹಳ್ಳಿಯಿಂದ ಕೇವಲ ನೂರು ರೂಪಾಯಿ ಹಿಡಿದು ಬೆಂಗಳೂರಿಗೆ ಬಂದ ಒಬ್ಬ ಸಾಮಾನ್ಯ ರೈತನ ಮಗ, ಇಂದು ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸುವ ನಿರ್ದೇಶಕ, ನಿರ್ಮಾಪಕನಾಗಿ ಬೆಳೆದಿದ್ದಾರೆ. ಆ ಮೂಲಕ ಯುವಜನತೆಗೆ ಪ್ರೇರಣೆಯಾಗಿದ್ದಾರೆ ಎಂದು ಮಣಿಪುರ ಇಂಟರ್ನ್ಯಾಷನಲ್ ವಿಶ್ವವಿದ್ಯಾಲಯವು ಶ್ಲಾಘಿಸಿದೆ.

ಆರ್. ಚಂದ್ರು ಅವರು ಸಾಮಾಜಿಕ ಕಳಕಳಿ ಹೊಂದಿದ್ದಾರೆ. ನಿರ್ದೇಶಕರಾಗಿ ಮಾತ್ರವಲ್ಲದೆ ‘ಆರ್‌ಸಿ ಸ್ಟುಡಿಯೋಸ್’ ಮೂಲಕ ನಿರ್ಮಾಪಕನಾಗಿ ನೂರಾರು ಜನರಿಗೆ ಉದ್ಯೋಗ ನೀಡಿದ್ದಾರೆ. ಪರಿಸರ ಮತ್ತು ಕೃಷಿ ಸೇವೆಯಲ್ಲೂ ತೊಡಗಿಕೊಂದ್ದಾರೆ. ಶಿಡ್ಲಘಟ್ಟದಲ್ಲಿ ಮಳೆನೀರು ಕೊಯ್ಲು ಮತ್ತು ಆಧುನಿಕ ಕೃಷಿ ಪದ್ಧತಿಯ ಮೂಲಕ ಒಣ ಭೂಮಿಯನ್ನು ಹಸಿರಾಗಿಸಿರುವುದು, ಒಂದು ಲಕ್ಷ ಗಿಡಗಳನ್ನು ನೆಟ್ಟಿರುವುದು ಹಾಗೂ ಕೋವಿಡ್ ಸಮಯದಲ್ಲಿ ಅವರು ಮಾಡಿದ ಜನಪರ ಕಾರ್ಯಗಳನ್ನು ವಿಶ್ವವಿದ್ಯಾಲಯವು ವಿಶೇಷವಾಗಿ ಗುರುತಿಸಿದೆ.

ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಡಾ. ಹರಿಕುಮಾರ್ ಪಲ್ಲತಡ್ಕ ಅವರು, ‘ದಕ್ಷಿಣ ಭಾರತದ ಹೆಮ್ಮೆ ಮತ್ತು ಈಶಾನ್ಯ ಭಾರತದ ಚೈತನ್ಯವನ್ನು ಒಂದುಗೂಡಿಸುವ ಉದ್ದೇಶದಿಂದ ಈ ಗೌರವವನ್ನು ನೀಡಲಾಗುತ್ತಿದೆ’ ಎಂದು ತಿಳಿಸಿದ್ದಾರೆ. ವಿಶ್ವವಿದ್ಯಾಲಯದ ಮುಂದಿನ ಘಟಿಕೋತ್ಸವ ಅಥವಾ ವಿಶೇಷ ಸಮಾರಂಭದಲ್ಲಿ ಆರ್. ಚಂದ್ರು ಅವರಿಗೆ ಈ ಪದವಿಯನ್ನು ಅಧಿಕೃತವಾಗಿ ಪ್ರದಾನ ಮಾಡಲಾಗುವುದು.

ಇದನ್ನೂ ಓದಿ: ತಂದೆಯಿಂದಲೇ ‘ಫಾದರ್’ ಸಿನಿಮಾದ ಥೀಮ್ ವಿಡಿಯೋ ಬಿಡುಗಡೆ ಮಾಡಿಸಿದ ಆರ್. ಚಂದ್ರು

ಮಣಿಪುರ ಇಂಟರ್ನ್ಯಾಷನಲ್ ಯೂನಿವರ್ಸಿಟಿ ಇದು ಮಣಿಪುರ ಸರ್ಕಾರದಿಂದ ಸ್ಥಾಪಿಸಲ್ಪಟ್ಟ ಸ್ವಾಯತ್ತ ಶಾಸನಬದ್ಧ ಅಂತರಾಷ್ಟ್ರೀಯ ವಿಶ್ವವಿದ್ಯಾಲಯವಾಗಿದೆ. ಯುಜಿಸಿ (UGC) ಮಾನ್ಯತೆ ಪಡೆದಿದೆ. ಈ ಸಂಸ್ಥೆಯು ಈಶಾನ್ಯ ಭಾರತದ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಪ್ರಮುಖ ಸ್ಥಾನದಲ್ಲಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ