ಮತ್ತೆ ತೆರೆ ಮೇಲೆ ಬರಲಿದೆ ಮಾರ್ಗರೇಟ್-ರಾಮಾಚಾರಿಯ ಪ್ರೇಮಕತೆ: ಡಾಲಿಯಿಂದ ಶುಭ ಹಾರೈಕೆ

Margaret Lover Of Ramachari: ಐಕಾನಿಕ್ ಪಾತ್ರಗಳಾದ ರಾಮಾಚಾರಿ ಹಾಗೂ ಮಾರ್ಗರೆಟ್​ರ ಪ್ರೇಮಕತೆಯನ್ನು ಆಧರಿಸಿ ಮತ್ತೊಂದು ಸಿನಿಮಾ ತೆರೆಗೆ ಬರುತ್ತಿದೆ. ಹೊಸ ತಂಡದ ಈ ಪ್ರಯತ್ನಕ್ಕೆ ಡಾಲಿ ಧನಂಜಯ್ ಸಾಥ್ ನೀಡಿದ್ದಾರೆ.

ಮತ್ತೆ ತೆರೆ ಮೇಲೆ ಬರಲಿದೆ ಮಾರ್ಗರೇಟ್-ರಾಮಾಚಾರಿಯ ಪ್ರೇಮಕತೆ: ಡಾಲಿಯಿಂದ ಶುಭ ಹಾರೈಕೆ
ಮಾರ್ಗರೇಟ್ ಲವರ್ ಆಫ್ ರಾಮಾಚಾರಿ
Follow us
ಮಂಜುನಾಥ ಸಿ.
|

Updated on: Apr 23, 2023 | 7:37 PM

ಪುಟ್ಟಣ್ಣ ಕಣಗಾಲ್ ನಿರ್ದೇಶಿಸಿ, ವಿಷ್ಣುವರ್ಧನ್ (Vishnuvardhan), ಅಂಬರೀಶ್ (Ambareesh), ಕಲ್ಪನಾ, ಅಶ್ವತ್ಥ್, ಶುಭಾ ನಟಿಸಿದ್ದ ನಾಗರಹಾವು ಸಿನಿಮಾ ಕನ್ನಡದ ಆಲ್​ಟೈಮ್ ಕ್ಲಾಸಿಕ್​. ಆ ಸಿನಿಮಾದ ರಾಮಾಚಾರಿ, ಜಲೀಲಾ, ಅಲಮೇಲು, ಮೇಷ್ಟ್ರು, ಮಾರ್ಗರೇಟ್​ ಪಾತ್ರಗಳು ಇಂದಿಗೂ ಪ್ರೇಕ್ಷಕರ ಅಚ್ಚುಮೆಚ್ಚು. ಈ ಸಿನಿಮಾದ ರಾಮಚಾರಿ ಹಾಗೂ ಮಾರ್ಗರೇಟ್ ಪ್ರೇಮಕತೆ ಕನ್ನಡ ಸಿನಿಮಾಗಳಲ್ಲಿ ಈ ವರೆಗೆ ಬಂದ ಅತ್ಯುತ್ತಮ ಪ್ರೇಮಕತೆಗಳಲ್ಲಿ ಒಂದು. ಇದೇ ಚಿತ್ರದ ಪಾತ್ರಗಳನ್ನು ಪ್ರಧಾನವಾಗಿರಿಸಿಕೊಂಡು ಬಂದ ‘ರಾಮಾಚಾರಿ’ ಮತ್ತು ‘ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ’ ಸಿನಿಮಾ ಅದ್ಭುತ ಯಶಸ್ಸು ಕಂಡಿವೆ. ಇದೇ ನಾಗರಹಾವು ಸಿನಿಮಾದ ಮಾರ್ಗರೇಟ್ ಹಾಗೂ ರಾಮಾಚಾರಿಯ ಪಾತ್ರಗಳನ್ನು ಸ್ಫೂರ್ತಿಯಾಗಿರಿಸಿಕೊಂಡು ಹೊಸ ಸಿನಿಮಾವೊಂದು ಬರಲಿದ್ದು, ಈ ಸಿನಿಮಾಕ್ಕೆ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ (Margaret Lover Of Ramachari) ಎಂದು ಹೆಸರಿಡಲಾಗಿದೆ.

ಯುವ ಪ್ರತಿಭೆ ಅಭಿಲಾಶ್ ನಾಯಕನಾಗಿ ಹಾಗೂ ಸೋನಲ್ ಮೊಂಥೆರೋ ನಾಯಕಿಯಾಗಿ ನಟಿಸುತ್ತಿರುವ ಮಾರ್ಗರೇಟ್ ಲವರ್ ಆಫ್ ರಾಮಾಚಾರಿ ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರಿನ ಬಂಡೇ ಮಹಾಕಾಳಿ‌ ದೇವಾಲಯದಲ್ಲಿ ನೆರವೇರಿದ್ದು, ಹೊಸ ತಂಡಕ್ಕೆ ಶುಭ ಹಾರೈಸಿ ಮಾತನಾಡಿದ ನಟ ಡಾಲಿ ಧನಂಜಯ್, ‘ಅಭಿ, ‘ಬಡವ ರಾಸ್ಕಲ್’, ‘ಹೊಯ್ಸಳ’ ಸಿನಿಮಾಗಳಲ್ಲಿ ಸಣ್ಣ ಪಾತ್ರ ಮಾಡಿದ್ದಾನೆ. ಆತ ಅಭಿಮಾನಿಯಾಗಿ ಪರಿಚಯ. ಈಗ ಹೀರೋ ಆಗುತ್ತಿದ್ದಾನೆ. ಸುಮಾರು ವರ್ಷಗಳ ಪ್ರಯತ್ನ ಅವನದ್ದು ಇಡೀ ತಂಡಕ್ಕೆ ಒಳ್ಳೆಯದಾಗಲಿ” ಎಂದಿದ್ದಾರೆ.

‌ನಿರ್ದೇಶಕ ಗಿರಿಧರ್ ಕುಂಬಾರ್ ಮಾತನಾಡಿ, ಈ ಚಿತ್ರದ ಮೂಲಕ ಇವತ್ತಿನ ಸಮಾಜಕ್ಕೆ ಬೇಕಿರುವ ಸಂದೇಶ ಕೊಡುತ್ತೇವೆ. ನಾಗರಹಾವು ಸಿನಿಮಾದ ಪಾತ್ರಗಳು ಲೆಜೆಂಡ್ ಪಾತ್ರಗಳು. ಅವುಗಳನ್ನು ನಾವು ಮುಟ್ಟಲಾಗುವುದಿಲ್ಲ. ಒಬ್ಬ ಸಾಮಾನ್ಯ ಹುಡುಗನಿಗೆ ಶ್ರೀಮಂತ ಹುಡುಗಿ ಸಿಕ್ಕಾಗ ಏನಾಗುತ್ತದೆ ಅನ್ನೋದೆ ಕಥೆ. ಮೇ 15ರಂದು ಶೂಟಿಂಗ್ ಶುರುವಾಗಲಿದೆ ಎಂದರು.

ನಟ ಅಭಿಲಾಷ್ ಮಾತನಾಡಿ, ಇದು ನನಗೆ ಬಹಳ ಭಾವುಕ ಕ್ಷಣ. ಬಹಳ ಕಷ್ಟಪಟ್ಟು ಇಲ್ಲಿ ಕೂತಿದ್ದೇನೆ. ಇದಕ್ಕೆ ಮೂಲ ಕಾರಣ ನಮ್ಮ ನಿರ್ಮಾಪಕರು. ನನ್ನ ಒದ್ದಾಟಗಳನ್ನು ಬಹಳ ಹತ್ತಿರದಿಂದ ನೋಡಿದ್ದಾರೆ. ಅವರೇ ನನ್ನ ಅನ್ನದಾತರು. ಧನಂಜಯ್ ಅಣ್ಣ ಹೇಳಿಕೊಟ್ಟ ಮಾರ್ಗದರ್ಶನಲ್ಲಿ ನಾನು ನಡೆಯುತ್ತಿದ್ದೇವೆ. ಈಗ ಅವರು ನನ್ನ ಚಿತ್ರಕ್ಕೆ ಹಾರೈಸಿರುವುದು ಖುಷಿಕೊಟ್ಟಿದೆ ಎಂದರು.

ಇದನ್ನೂ ಓದಿ:ಬೈದು ಕಳಿಸಿದರೂ ಡಾಲಿ ಧನಂಜಯ್ ಪ್ರಗತಿಯಲ್ಲಿ ರವಿಚಂದ್ರನ್​ಗೆ ವಿಶೇಷ ಸ್ಥಾನ

ನಟ ಅಭಿಲಾಶ್​ ‘ಮಾರ್ಗರೇಟ್​ ಲವರ್​ ಆಫ್​​ ರಾಮಾಚಾರಿ’ ಸಿನಿಮಾ ಮೂಲಕ ಹೀರೋ ಆಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಈ ಮೊದಲು ‘ಕೆಜಿಎಫ್​’, ‘ಲವ್​ ಮಾಕ್ಟೇಲ್​’, ‘ಬಡವ ರಾಸ್ಕಲ್​’, ‘ಗುರುದೇವ್​ ಹೊಯ್ಸಳ’ ಮುಂತಾದ ಸಿನಿಮಾಗಳಲ್ಲಿ ಸಣ್ಣ-ಪುಟ್ಟ ಪಾತ್ರಗಳಲ್ಲಿ ಅಭಿಲಾಶ್​ ಗುರುತಿಸಿಕೊಂಡಿದ್ದಾರೆ. ಅಭಿಲಾಶ್,​ ​ರಾಮಾಚಾರಿ ಅಲಿಯಾಸ್​ ರಾಮು ಎಂಬ ಪಾತ್ರದಲ್ಲಿ ನಟಿಸಲಿದ್ದಾರೆ. ನಟಿ ಸೋನಲ್​ ಮೊಂಥೆರೋ ಮೀರಾ ರಾಘವ್​ ರಾಮ್​ ಅಲಿಯಾಸ್​ ಮ್ಯಾಗಿ ಎಂಬ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಯಶ್​ ಶೆಟ್ಟಿ, ಜಯಂತ್​ ಅಲಿಯಾಸ್​ ಜಲೀಲಾಗಿ ಕಾಣಿಸಿಕೊಳ್ಳಲಿದ್ದಾರೆ. ಅನುಭವಿ ನಟರಾದ ಅವಿನಾಶ್​ ಮತ್ತು ರವಿಶಂಕರ್​ ಮುಂತಾದವರು ಕೂಡ ನಟಿಸುತ್ತಿದ್ದಾರೆ.

ವನಿತಾ ಎಚ್​​.ಎನ್​. ಅವರ ‘ನಿಹಾಂತ್​ ಪ್ರೊಡಕ್ಷನ್ಸ್​’ ಮೂಲಕ ‘ಮಾರ್ಗರೇಟ್​ ಲವರ್​ ಆಫ್​ ರಾಮಾಚಾರಿ’ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ. ಈ ಚಿತ್ರಕ್ಕೆ ವಾಸುಕಿ ವೈಭವ್​ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಮಾರ್ಗರೇಟ್​ ಲವರ್​ ಆಫ್​​ ರಾಮಾಚಾರಿ’ ಮುಹೂರ್ತ ನೆರವೇರಿದ್ದು, ಮೇ 15ರಿಂದು ಚಿತ್ರದುರ್ಗದಲ್ಲಿ ಶೂಟಿಂಗ್ ಶುರುವಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ