‘ಮಾರ್ಕ್’ ಹಾಗೂ ‘45’ ಸಿನಿಮಾಗಳು ಒಂದು ವಾರಕ್ಕೆ ಗಳಿಸಿದ್ದು ಎಷ್ಟು?
45 And Mark Movie Collection: ಮಾರ್ಕ್ ಹಾಗೂ 45 ಚಿತ್ರಗಳು ಬಿಡುಗಡೆಯಾಗಿ ಒಂದು ವಾರ ಕಳೆದಿದ್ದು, ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಮಾಡಿವೆ. ಎರಡೂ ಸಿನಿಮಾಗಳು ದೊಡ್ಡ ಬಜೆಟ್‌ನವಾಗಿದ್ದು, ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿವೆ. ಒಟ್ಟಾರೆ, ಈ ಚಿತ್ರಗಳು ನಿರ್ಮಾಪಕರಿಗೆ ಲಾಭ ತಂದಿವೆ ಎನ್ನಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಮಾರ್ಕ್’ ಸಿನಿಮಾ ಹಾಗೂ ‘45’ ಚಿತ್ರಗಳು ತೆರೆಗೆ ಬಂದು ಒಂದು ವಾರ ಕಳೆದಿವೆ. ಏಳು ದಿನಗಳಲ್ಲಿ ಸಿನಿಮಾಗಳು ಉತ್ತಮ ಕಲೆಕ್ಷನ್ ಮಾಡಿವೆ. ಎರಡೂ ಸಿನಿಮಾಗಳಲ್ಲಿ ಸ್ಟಾರ್ ಹೀರೋಗಳು ನಟಿಸಿದ್ದಾರೆ. ಎರಡೂ ಚಿತ್ರಗಳು ಬಿಗ್ ಬಜೆಟ್ನವು. ಈ ಕಾರಣದಿಂದ ಸಿನಿಮಾ ನಿರೀಕ್ಷೆ ಮೂಡಿಸಿತ್ತು. ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಮಾಡುತ್ತಿವೆ. ಈ ಚಿತ್ರಗಳ ಒಟ್ಟಾರೆ ಕಲೆಕ್ಷನ್ ವಿವರ ಇಲ್ಲಿದೆ.
‘ಮಾರ್ಕ್’ ಚಿತ್ರಕ್ಕೆ ಕಿಚ್ಚ ಸುದೀಪ್ ಹೀರೋ. ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಿ ಸರಿಯಾಗಿ ಒಂದು ವರ್ಷಕ್ಕೆ ಈ ಚಿತ್ರ ಬಿಡುಗಡೆ ಕಂಡಿದೆ. ಈಗ ‘ಮಾರ್ಕ್’ ಸಿನಿಮಾ ಅಬ್ಬರದ ಗಳಿಕೆ ಮಾಡಿದೆ. ನಾಲ್ಕು ದಿನಕ್ಕೆ ಚಿತ್ರ 35 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ತಂಡ ಮಾಹಿತಿ ನೀಡಿತ್ತು. ಇದಾದ ಬಳಿಕ ಸಿನಿಮಾ ನಿತ್ಯವೂ ಒಂದು ಕೋಟಿ ರೂಪಾಯಿಗೂ ಹೆಚ್ಚಿನ ಕಲೆಕ್ಷನ್ ಮಾಡಿದೆ. ‘ಮಾರ್ಕ್’ ಸಿನಿಮಾದ ಗಳಿಕೆ 40 ಕೊಟಿ ರೂಪಾಯಿ ದಾಟಿದೆ ಎನ್ನಲಾಗುತ್ತಿದೆ. ಸಿನಿಮಾ ರಿಲೀಸ್ ಆಗಿ ವಾರ ಕಳೆದ ಹಿನ್ನೆಲೆಯಲ್ಲಿ ಚಿತ್ರತಂಡ ಗಳಿಕೆ ಬಗ್ಗೆ ಅಧಿಕೃತ ಮಾಹಿತಿ ನೀಡುವ ಸಾಧ್ಯತೆ ಇದೆ.
ಇನ್ನು, ‘45’ ಚಿತ್ರದ ಲೆಕ್ಕಾಚಾರದ ಬಗ್ಗೆ ತಂಡದ ಕಡೆಯಿದ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಆದರೆ, sacnilk ಈ ಬಗ್ಗೆ ವರದಿ ಮಾಡಿದೆ. ಈ ವರದಿ ಪ್ರಕಾರ ಸಿನಿಮಾದ ಗ್ರಾಸ್ ಕಲೆಕ್ಷನ್ 15 ಕೋಟಿ ರೂಪಾಯಿ ದಾಟಿದೆ ಎನ್ನಾಗಿದೆ. ಚಿತ್ರತಂಡದ ಕಡೆಯಿಂದ ಅಧಿಕೃತ ಮಾಹಿತಿ ಸಿಕ್ಕರೆ ಅಭಿಮಾನಿಗಳಿಗೂ ಸ್ಪಷ್ಟತೆ ಸಿಕ್ಕಂತಾಗುತ್ತದೆ.
ಇದನ್ನೂ ಓದಿ: ‘ಮಾರ್ಕ್’ ವೀಕ್ಷಿಸುವಾಗ ಕಿಚ್ಚನ ಎದುರೇ ಗಿಲ್ಲಿ ಗೆಲ್ಲಬೇಕು ಎಂದ ಫ್ಯಾನ್ಸ್; ಸುದೀಪ್ ರಿಯಾಕ್ಷನ್ ಏನು?
ಮೂಲಗಳ ಪ್ರಕಾರ ‘45’ ಚಿತ್ರದ ಒಟಿಟಿ ಹಕ್ಕು, ಸ್ಯಾಟಲೈಟ್ ಹಕ್ಕು ಒಳ್ಳೆಯ ಬೆಲೆಗೆ ಮಾರಾಟ ಆಗಿದೆಯಂತೆ. ಹೀಗಾಗಿ, ನಿರ್ಮಾಪಕರಿಗೆ ಸಾಕಷ್ಟು ಹಣ ಹರಿದು ಬಂದಿದೆ. ಇದರಿಂದ ಅವರು ಸೇಫ್ ಆಗಿದ್ದಾರೆ ಎಂದು ಹೇಳಲಾಗುತ್ತಾ ಇದೆ. ಇಂದು ಹೊಸ ವರ್ಷದ ಪ್ರಯುಕ್ತ ರಜೆ ಇದೆ. ಹೀಗಾಗಿ, ಚಿತ್ರದ ಕಲೆಕ್ಷನ್ ಹೆಚ್ಚುವ ಸಾಧ್ಯತೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.




