‘ಏನಮ್ಮಿ..’ ಬಳಿಕ ಮತ್ತೊಂದು ಹಿಟ್​ ಹಾಡು ನೀಡಿದ ರಚಿತಾ ರಾಮ್-ಸತೀಶ್ ನೀನಾಸಂ; ‘ಮ್ಯಾಟ್ನಿ’ ಗೀತೆಗೆ ಮೆಚ್ಚುಗೆ

Matinee Movie Song: ಆನಂದ್ ಆಡಿಯೋ ಮೂಲಕ ‘ಸಂಜೆ ಮೇಲೆ ಸುಮ್ನೆ ಹಂಗೆ ಫೋನು ಮಾಡ್ಲ ನಿಂಗೆ..’ ಹಾಡು ಬಿಡುಗಡೆ ಆಗಿದೆ. ಪೂರ್ಣಚಂದ್ರ ತೇಜಸ್ವಿ ಅವರು ಸಾಹಿತ್ಯ ಬರೆದು, ಸಂಗೀತ ನೀಡಿರುವ ಈ ಹಾಡಿಗೆ ವಿಜಯ್ ಪ್ರಕಾಶ್ ಧ್ವನಿ ನೀಡಿದ್ದಾರೆ.

‘ಏನಮ್ಮಿ..’ ಬಳಿಕ ಮತ್ತೊಂದು ಹಿಟ್​ ಹಾಡು ನೀಡಿದ ರಚಿತಾ ರಾಮ್-ಸತೀಶ್ ನೀನಾಸಂ; ‘ಮ್ಯಾಟ್ನಿ’ ಗೀತೆಗೆ ಮೆಚ್ಚುಗೆ
‘ಮ್ಯಾಟ್ನಿ’ ಸಿನಿಮಾ ತಂಡ
Follow us
ಮದನ್​ ಕುಮಾರ್​
|

Updated on: Aug 05, 2023 | 1:01 PM

‘ಅಯೋಗ್ಯ’ ಸಿನಿಮಾ 2018ರಲ್ಲಿ ತೆರೆಕಂಡಿತ್ತು. ಆ ಸಿನಿಮಾದ ‘ಏನಮ್ಮಿ ಏನಮ್ಮಿ..’ ಹಾಡಿಗೆ ಕೇಳುಗರು ಮರುಳಾದರು. ಸತೀಶ್​ ನೀನಾಸಂ (Sathish Ninasam) ಮತ್ತು ರಚಿತಾ ರಾಮ್​ ಅವರು ಜೋಡಿಯಾಗಿ ಕಾಣಿಸಿಕೊಂಡ ಆ ಗೀತೆ ಇಂದಿಗೂ ಟ್ರೆಂಡಿಂಗ್​ನಲ್ಲಿ ಇದೆ. ಈಗ ಅದೇ ಜೋಡಿಯಿಂದ ಮತ್ತೊಂದು ಹಾಡು ಬಂದಿದೆ. ‘ಮ್ಯಾಟ್ನಿ’ ಸಿನಿಮಾದ ಹೊಸ ಸಾಂಗ್​ ಬಿಡುಗಡೆ ಮಾಡಲಾಗಿದೆ. ‘ಸಂಜೆ ಮೇಲೆ ಸುಮ್ನೆ ಹಂಗೆ ಫೋನು ಮಾಡ್ಲ ನಿಂಗೆ..’ ಎಂಬ ಸಾಲಿನಿಂದ ಶುರುವಾಗುವ ಈ ಹಾಡಿನಲ್ಲಿ ರಚಿತಾ ರಾಮ್ (Rachita Ram)​ ಮತ್ತು ನೀನಾಸಂ ಸತೀಶ್​ ಅವರು ಬಿಂದಾಸ್​ ಆಗಿ ಡ್ಯಾನ್ಸ್ ಮಾಡಿದ್ದಾರೆ. ಯೂಟ್ಯೂಬ್​ನಲ್ಲಿ ಈ ಹಾಡು 12 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡು ಮುನ್ನುಗ್ಗುತ್ತಿದೆ. ಆ ಮೂಲಕ ‘ಮ್ಯಾಟ್ನಿ’ ಸಿನಿಮಾ (Matinee Kannada Movie) ಮೇಲೆ ನಿರೀಕ್ಷೆ ಹೆಚ್ಚುವಂತಾಗಿದೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು.

‘ಆನಂದ್ ಆಡಿಯೋ’ ಮೂಲಕ ‘ಸಂಜೆ ಮೇಲೆ ಸುಮ್ನೆ ಹಂಗೆ ಫೋನು ಮಾಡ್ಲ ನಿಂಗೆ..’ ಹಾಡು ಬಿಡುಗಡೆ ಆಗಿದೆ. ಪೂರ್ಣಚಂದ್ರ ತೇಜಸ್ವಿ ಅವರು ಸಾಹಿತ್ಯ ಬರೆದು, ಸಂಗೀತ ನೀಡಿರುವ ಈ ಹಾಡಿಗೆ ವಿಜಯ್ ಪ್ರಕಾಶ್ ಅವರು ಧ್ವನಿ ನೀಡಿದ್ದಾರೆ. ತುಂಬ ಕಲರ್​ಫುಲ್​ ಆಗಿ ಈ ಗೀತೆಯನ್ನು ಚಿತ್ರಿಸಲಾಗಿದೆ. ಬಿಡುಗಡೆಯಾದ ತಕ್ಷಣ ಈ ಗೀತೆಗೆ ಜನಮೆಚ್ಚುಗೆ ಸಿಕ್ಕಿದೆ. ಹಾಡು ಸೂಪರ್​ ಹಿಟ್​ ಆಗಿರುವುದಕ್ಕೆ ನೀನಾಸಂ ಸತೀಶ್​ ಅವರಿಗೆ ಬಹಳ ಖುಷಿ ಆಗಿದೆ.

ಇದನ್ನೂ ಓದಿ: Rachita Ram: ‘ಸಂಜು ವೆಡ್ಸ್​ ಗೀತಾ 2’ ಸಿನಿಮಾಗೆ ರಚಿತಾ ರಾಮ್​ ನಾಯಕಿ? ನಾಗಶೇಖರ್​ ಜೊತೆ ನಡೆದಿದೆ ಮಾತುಕತೆ

‘ಈ ಹಾಡಿನ ಕಲಾ ನಿರ್ದೇಶನ, ಕೊರಿಯೋಗ್ರಫಿ, ಕ್ಯಾಮೆರಾ ವರ್ಕ್​ ಎಲ್ಲವೂ ಚೆನ್ನಾಗಿದೆ. ನನ್ನ ವೃತ್ತಿಜೀವನದಲ್ಲಿ ಇದು ಅತ್ಯುತ್ತಮ ಹಾಡು. ಮ್ಯೂಸಿಕ್​ ಡೈರೆಕ್ಟರ್​ ಪೂರ್ಣಚಂದ್ರ ತೇಜಸ್ವಿಗೆ ನಾನು ತುಂಬಾ ತೊಂದರೆ ಕೊಟ್ಟಿದ್ದೇನೆ. ಅವರು ಅಷ್ಟೇ ಉತ್ತಮವಾಗಿ ಹಾಡನ್ನು ನೀಡಿದ್ದಾರೆ. ಈ ಗೀತೆಯನ್ನು ಮೊದಲು ಪೂರ್ಣಚಂದ್ರ ತೇಜಸ್ವಿ ಅವರೇ ಹಾಡಿದ್ದರು. ತಂಡದ ಎಲ್ಲರಿಗೂ ಅದು ಇಷ್ಟ ಆಗಿತ್ತು. ಆದರೂ ಕೂಡ ಈ ಹಾಡಿಗೆ ವಿಜಯ್​ ಪ್ರಕಾಶ್ ಕಂಠ ಸೂಕ್ತ ಎನಿಸಿತು. ಅದಕ್ಕೆ ಪೂರ್ಣಚಂದ್ರ ಅವರು ಒಪ್ಪಿಕೊಂಡರು’ ಎಂದಿದ್ದಾರೆ ಸತೀಶ್​ ನೀನಾಸಂ.

ಇದನ್ನೂ ಓದಿ: ‘ಮ್ಯಾಟ್ನಿ’ ಶೂಟಿಂಗ್​ ಸೆಟ್​​ನಲ್ಲಿ ಸತೀಶ್​ ‘ನೀನಾಸಂ’, ರಚಿತಾ ರಾಮ್​; ಇಲ್ಲಿವೆ ಫೋಟೋಗಳು

ಈ ಸಿನಿಮಾದಲ್ಲಿ ಒಟ್ಟು ನಾಲ್ಕು ಹಾಡುಗಳು ಇವೆ. ಅದಿತಿ ಪ್ರಭುದೇವ ಮತ್ತು ಸತೀಶ್​ ಅವರು ಜೊತೆಯಾಗಿ ಕಾಣಿಸಿಕೊಂಡ ಹಾಡು ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ನಾಗಭೂಷಣ, ಶಿವರಾಜ್ ಕೆ.ಆರ್. ಪೇಟೆ, ಪೂರ್ಣಚಂದ್ರ ಮೈಸೂರು ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸೆಪ್ಟೆಂಬರ್​ನಲ್ಲಿ ‘ಮ್ಯಾಟ್ನಿ’ ಸಿನಿಮಾ ಬಿಡುಗಡೆ ಆಗಲಿದೆ ಎಂದು ಸತೀಶ್​ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಟ್ರೇಲರ್​ ಬಿಡುಗಡೆಗಾಗಿ ಫ್ಯಾನ್ಸ್​ ಕಾದಿದ್ದಾರೆ. ಅದರಲ್ಲಿ ರಚಿತಾ ರಾಮ್​ ಪಾತ್ರದ ಬಗ್ಗೆ ಇನ್ನಷ್ಟು ವಿಷಯ ರಿವೀಲ್​ ಆಗಲಿವೆ.

ಮನೋಹರ್​ ಕಾಂಪಲ್ಲಿ ಅವರು ‘ಮ್ಯಾಟ್ನಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸತೀಶ್​ ನೀನಾಸಂ, ರಚಿತಾ ರಾಮ್​, ಅದಿತಿ ಪ್ರಭುದೇವ ಅವರ ಕಾಂಬಿನೇಷನ್​ ಇರುವುದರಿಂದ ಈ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಕೌತುಕ ಮೂಡಿದೆ. ನಿರ್ಮಾಪಕಿ ಪಾರ್ವತಿ ಎಸ್. ಗೌಡ, ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ಅವರು ಕೂಡ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ