AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Matte Maduve: ತಮ್ಮದೇ ಸಂಸಾರದ ಕಿರಿಕ್​ ಕಥೆಯನ್ನು ಇಟ್ಟುಕೊಂಡು ‘ಮತ್ತೆ ಮದುವೆ’ ಸಿನಿಮಾ ಮಾಡಿದ ನರೇಶ್​-ಪವಿತ್ರಾ?

Pavithra Lokesh | Naresh: ‘ಮತ್ತೆ ಮದುವೆ’ ಸಿನಿಮಾದಲ್ಲಿ ಪವಿತ್ರಾ ಲೋಕೇಶ್​ ಮತ್ತು ನರೇಶ್​ ಅವರು ಜೋಡಿಯಾಗಿ ನಟಿಸಿದ್ದಾರೆ. ರಿಯಲ್​ ಲೈಫ್​ನಲ್ಲಿ ನಡೆದ ಘಟನೆಗಳನ್ನೇ ಈ ಸಿನಿಮಾದಲ್ಲಿ ಮರುಸೃಷ್ಟಿ ಮಾಡಲಾಗಿದೆ.

Matte Maduve: ತಮ್ಮದೇ ಸಂಸಾರದ ಕಿರಿಕ್​ ಕಥೆಯನ್ನು ಇಟ್ಟುಕೊಂಡು ‘ಮತ್ತೆ ಮದುವೆ’ ಸಿನಿಮಾ ಮಾಡಿದ ನರೇಶ್​-ಪವಿತ್ರಾ?
ಪವಿತ್ರಾ ಲೋಕೇಶ್, ನರೇಶ್
ಮದನ್​ ಕುಮಾರ್​
|

Updated on: Apr 21, 2023 | 3:11 PM

Share

ತೆಲುಗು ನಟ ನರೇಶ್​ (Naresh) ಮತ್ತು ಕನ್ನಡದ ನಟಿ ಪವಿತ್ರಾ ಲೋಕೇಶ್​ ನಡುವೆ ಏನೆಲ್ಲ ನಡೆಯಿತು ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ನರೇಶ್​ ಅವರು ತಮ್ಮ ಪತ್ನಿ ರಮ್ಯಾಗೆ ವಿಚ್ಛೇದನ ನೀಡದೆಯೇ ಪವಿತ್ರಾ ಲೋಕೇಶ್​ (Pavithra Lokesh) ಜೊತೆ ಸಂಸಾರ ಶುರು ಮಾಡಿದ್ದಾರೆ ಎಂಬ ವಿಷಯ ದೊಡ್ಡ ವಿವಾದಕ್ಕೆ ಕಾರಣ ಆಗಿತ್ತು. ಮಾಧ್ಯಮಗಳ ಎದುರಿನಲ್ಲಿ ನರೇಶ್​ ಮತ್ತು ರಮ್ಯಾ ಅವರು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದರು. ಅಚ್ಚರಿ ಏನೆಂದರೆ ಈ ಘಟನೆಗಳನ್ನೇ ಆಧಾರವಾಗಿ ಇಟ್ಟುಕೊಂಡು ನರೇಶ್​ ಮತ್ತು ಪವಿತ್ರಾ ಅವರು ಸಿನಿಮಾ ಮಾಡಿದ್ದಾರೆ. ಆ ಸಿನಿಮಾದ ಹೆಸರು ‘ಮತ್ತೆ ಮದುವೆ’. ಇತ್ತೀಚೆಗೆ ಈ ಸಿನಿಮಾದ ಟೈಟಲ್​ ಅನೌನ್ಸ್​ ಆಗಿತ್ತು. ಈಗ ಟೀಸರ್​ ಕೂಡ ಬಿಡುಗಡೆ ಆಗಿದ್ದು, ಇದು ಅವರ ರಿಯಲ್​ ಲೈಫ್​ ಕಥೆಯನ್ನೇ ಆಧರಿಸಿದ ಸಿನಿಮಾ (Matte Maduve Movie) ಎಂಬುದಕ್ಕೆ ಟೀಸರ್​ನಲ್ಲಿ ಝಲಕ್​ ತೋರಿಸಲಾಗಿದೆ.

ನರೇಶ್​ ತೆಲುಗಿನವರು. ಪವಿತ್ರಾ ಲೋಕೇಶ್​ ಕನ್ನಡದವರು. ‘ತೆಲುಗು ಇಂಡಸ್ಟ್ರಿಯವರು ಕನ್ನಡದ ಮೇಲೆ ಕಣ್ಣು ಹಾಕ್ತಿದ್ದೀರಲ್ಲ..’ ಎಂಬ ಡೈಲಾಗ್​ನೊಂದಿಗೆ ‘ಮತ್ತೆ ಮದುವೆ’ ಸಿನಿಮಾದ ಟೀಸರ್​ ಆರಂಭ ಆಗುತ್ತದೆ. ನಂತರ ಮಹಿಳೆಯೊಬ್ಬರು ‘ನನಗೆ ಮೋಸ ಆಗಿದೆ. ಹೆಂಡತಿಯನ್ನು ಹೇಗೆ ನೋಡಿಕೊಳ್ಳಬೇಕು ಅಂತ ಗೊತ್ತಿಲ್ಲದ ಮೃಗ ಅವನು’ ಎಂದು ಮಾಧ್ಯಮದ ಮುಂದೆ ಆರೋಪ ಮಾಡುತ್ತಿರುವ ದೃಶ್ಯ ಇದೆ.

ಇದನ್ನೂ ಓದಿ: ‘ಮತ್ತೆ ಮದುವೆ’ ಆದ ಬಳಿಕ ಮನೆ ಎದುರು ರಂಗೋಲಿ ಹಾಕುತ್ತಾ ಕುಳಿತ ಪವಿತ್ರಾ ಲೋಕೇಶ್

ಈ ಸಿನಿಮಾದಲ್ಲಿ ಪವಿತ್ರಾ ಲೋಕೇಶ್​ ಮತ್ತು ನರೇಶ್​ ಅವರು ಜೋಡಿಯಾಗಿ ನಟಿಸಿದ್ದಾರೆ. ರಿಯಲ್​ ಲೈಫ್​ನಲ್ಲಿ ನಡೆದ ಘಟನೆಗಳನ್ನೇ ಈ ಸಿನಿಮಾದಲ್ಲಿ ಮರುಸೃಷ್ಟಿ ಮಾಡಲಾಗಿದೆ. ಮೈಸೂರಿನ ಹೋಟೆಲ್​ನಲ್ಲಿ ನರೇಶ್​ ಮತ್ತು ಪವಿತ್ರಾ ಲೋಕೇಶ್​ ಅವರು ಜೊತೆಯಾಗಿ ಇದ್ದಾಗ ರಮ್ಯಾ ಅವರು ದಾಳಿ ಮಾಡಿದ್ದರು. ಆಗ ನರೇಶ್​ ಅವರು ಶಿಳ್ಳೆ ಹಾಕುತ್ತಾ ಪವಿತ್ರಾ ಜೊತೆ ಹೋಟೆಲ್​ ರೂಮ್​ನಿಂದ ಹೊರಗೆ ಬಂದಿದ್ದರು. ಆ ದೃಶ್ಯ ಕೂಡ ‘ಮತ್ತೆ ಮದುವೆ’ ಟೀಸರ್​ನಲ್ಲಿ ಹೈಲೈಟ್​ ಆಗಿದೆ.

ಕನ್ನಡ ಮತ್ತು ತೆಲುಗಿನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ತೆಲುಗಿನಲ್ಲಿ ‘ಮಳ್ಳಿ ಪೆಳ್ಳಿ’ ಎಂದು ಶೀರ್ಷಿಕೆ ಇಡಲಾಗಿದೆ. ಮೇ ತಿಂಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್. ಬಾಲ್ ರೆಡ್ಡಿ ಛಾಯಾಗ್ರಹಣ, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯದ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ.

ಇದನ್ನೂ ಓದಿ: Pavitra Lokesh Marriage: ಪವಿತ್ರಾ ಲೋಕೇಶ್​ ತುಟಿಗೆ ಮುತ್ತಿಟ್ಟು ಮದುವೆ ನ್ಯೂಸ್​ ತಿಳಿಸಿದ ನರೇಶ್​; ವಿಡಿಯೋ ವೈರಲ್​

ಜಯ ಕೃಷ್ಣ ಮೂವೀಸ್ ಬ್ಯಾನರ್ ಮೂಲಕ ನರೇಶ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಎಂ.ಎಸ್. ರಾಜು ನಿರ್ದೇಶನ ಮಾಡುತ್ತಿರುವ ಈ ಸಿನಿಮಾ ಒಂದು ಫ್ಯಾಮಿಲಿ ಎಂಟರ್​ಟೇನರ್​ ಎಂದು ಚಿತ್ರತಂಡ ಹೇಳಿಕೊಂಡಿದೆ. ಜಯಸುಧಾ, ಶರತ್ ಬಾಬು, ವನಿತಾ ವಿಜಯಕುಮಾರ್, ಅನನ್ಯಾ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧೂ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಕರೆ
ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಕರೆ