AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Matte Maduve Trailer: ನರೇಶ್​-ಪವಿತ್ರಾ ಲೋಕೇಶ್​ ಜೋಡಿಯ ‘ಮತ್ತೆ ಮದುವೆ’ ಬಗ್ಗೆ ಇನ್ನಷ್ಟು ಮಾಹಿತಿ ಬಹಿರಂಗ

Matte Maduve: ಪವಿತ್ರಾ ಲೋಕೇಶ್​ ಹಾಗೂ ನರೇಶ್​ ನಡುವಿನ ಸಂಬಂಧದ ಬಗ್ಗೆ ಜನರಲ್ಲಿ ಅನೇಕ ಪ್ರಶ್ನೆಗಳಿವೆ. ಆ ಎಲ್ಲ ಪ್ರಶ್ನೆಗಳಿಗೆ ‘ಮತ್ತೆ ಮದುವೆ’ ಸಿನಿಮಾದಲ್ಲಿ ಉತ್ತರ ಸಿಗುವ ಸೂಚನೆ ಸಿಕ್ಕಿದೆ.

Matte Maduve Trailer: ನರೇಶ್​-ಪವಿತ್ರಾ ಲೋಕೇಶ್​ ಜೋಡಿಯ ‘ಮತ್ತೆ ಮದುವೆ’ ಬಗ್ಗೆ ಇನ್ನಷ್ಟು ಮಾಹಿತಿ ಬಹಿರಂಗ
ನರೇಶ್, ಪವಿತ್ರಾ ಲೋಕೇಶ್
ಮದನ್​ ಕುಮಾರ್​
|

Updated on: May 11, 2023 | 1:12 PM

Share

ಹಲವು ಕಾರಣಗಳಿಂದಾಗಿ ‘ಮತ್ತೆ ಮದುವೆ’ (Matte Maduve) ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಕನ್ನಡದ ನಟಿ ಪವಿತ್ರಾ ಲೋಕೇಶ್​ ಹಾಗೂ ತೆಲುಗಿನ ನಟ ನರೇಶ್​ ಅವರ ನಡುವೆ ಇರುವ ಪ್ರೀತಿಯ ವಿಚಾರವನ್ನೇ ಇಟ್ಟುಕೊಂಡು ಈ ಸಿನಿಮಾ ನಿರ್ಮಾಣ ಆಗಿದೆ ಎಂಬುದಕ್ಕೆ ಟೀಸರ್​ನಲ್ಲಿ ಸುಳಿವು ಸಿಕ್ಕಿತ್ತು. ಈಗ ಈ ಚಿತ್ರದ ಟ್ರೇಲರ್​ ಬಿಡುಗಡೆ ಆಗಿದೆ. ಪವಿತ್ರಾ ಲೋಕೇಶ್​ (Pavithra Lokesh) ಹಾಗೂ ನರೇಶ್​ ಬದುಕಿನ ಇನ್ನಷ್ಟು ವಿವರಗಳನ್ನು ‘ಮತ್ತೆ ಮದುವೆ’ ಟ್ರೇಲರ್​ (Matte Maduve Trailer) ಬಹಿರಂಗಪಡಿಸಿದೆ. ಪವಿತ್ರಾ ಲೋಕೇಶ್ ಹಾಗೂ ನರೇಶ್ ನಡುವೆ ಪ್ರೀತಿ ಚಿಗುರಿದ್ದು ಹೇಗೆ? ಆ ಪ್ರೀತಿಗೆ ನರೇಶ್ ಅವರ ಮೂರನೇ ಪತ್ನಿ ರಮ್ಯಾ ರಘುಪತಿ ಅಡ್ಡಿಯಾಗಿ ನಿಂತಿದ್ದು ಯಾಕೆ? ಈ ಮೂವರ ಜಗಳವು ಬೀದಿ ರಂಪವಾಗಿದ್ದು ಹೇಗೆ? ಮೈಸೂರು ಹೋಟೆಲ್​ನಲ್ಲಿ ಮಾಧ್ಯಮಗಳ ಎದುರಲ್ಲೇ ನಡೆದ ಹೈಡ್ರಾಮಾ ಹೇಗಿತ್ತು? ಇಂಥ ಹಲವು ಘಟನೆಗಳ ಝಲಕ್​ ಅನ್ನು ‘ಮತ್ತೆ ಮದುವೆ’ ಟ್ರೇಲರ್​ನಲ್ಲಿ ತೋರಿಸಲಾಗಿದೆ.

ವಿಜಯ ಕೃಷ್ಣ ಮೂವೀಸ್ ಬ್ಯಾನರ್ ಮೂಲಕ ಸ್ವತಃ ನರೇಶ್ ಅವರು ‘ಮತ್ತೆ ಮದುವೆ’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ವಯಸ್ಸಿನಲ್ಲಿ ನರೇಶ್ ಅವರು ಮತ್ತೆ ಪ್ರೀತಿಯಲ್ಲಿ ಬೀಳೋದು, ಅವರನ್ನು ನೋಡಿ ಜನರು ಹೀಯಾಳಿಸೋದು ಸೇರಿದಂತೆ ಅನೇಕ ವಿಷಯಗಳು ಈ ಟ್ರೇಲರ್​ನಲ್ಲಿ ಹೈಲೈಟ್​ ಆಗಿವೆ. ಈ ಚಿತ್ರಕ್ಕೆ ಎಂ.ಎಸ್. ರಾಜು ನಿರ್ದೇಶನ ಮಾಡಿದ್ದಾರೆ. ಇದೊಂದು ಕೌಟುಂಬಿಕ ಕಥಾಹಂದರದ ಸಿನಿಮಾ ಎಂದು ಚಿತ್ರತಂಡ ಹೇಳಿಕೊಂಡಿದೆ.

ಇದನ್ನೂ ಓದಿ
Image
‘ಡೈಮಂಡ್ ನೆಕ್ಲೆಸ್​ ನಂದೇ, ನಾನೇ ಖರೀದಿ ಮಾಡಿದ್ದೇನೆ’; ರಮ್ಯಾ ರಘುಪತಿಗೆ ಪವಿತ್ರಾ ಲೋಕೇಶ್ ತಿರುಗೇಟು
Image
Pavitra Lokesh: ‘ಗಂಡ ಸರಿಯಿಲ್ಲ ಅಂತಾರೆ, ಆದ್ರೂ ಜತೆಯೇ ಇರ್ಬೇಕು ಅಂತಾರೆ’: ರಮ್ಯಾ ರಘುಪತಿ ಬಗ್ಗೆ ಪವಿತ್ರಾ ನೇರ ಮಾತು
Image
Pavitra Lokesh: ‘ಸುಚೇಂದ್ರ ಪ್ರಸಾದ್​ ಜತೆ ನನ್ನ ಮದುವೆ ಆಗಿಲ್ಲ, 11 ವರ್ಷ ಒಟ್ಟಿಗೆ ಇದ್ದೆ ಅಷ್ಟೇ’: ನಟಿ ಪವಿತ್ರಾ ಲೋಕೇಶ್​
Image
Ramya Raghupathi: ‘ಮಹಿಳೆಯರ ಜತೆ ನರೇಶ್​ ಕೆಟ್ಟದಾಗಿ ಮಾತಾಡಿದ 400 ಕಾಲ್​ ರೆಕಾರ್ಡಿಂಗ್​ ಇದೆ’: ಗಂಡನಿಗೆ ರಮ್ಯಾ ರಘುಪತಿ ತಿರುಗೇಟು

ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್. ಬಾಲ್ ರೆಡ್ಡಿ ಛಾಯಾಗ್ರಹಣ, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಈ ಚಿತ್ರಕ್ಕಿದೆ. ಟ್ರೇಲರ್​ ಮೂಲಕ ಸದ್ದು ಮಾಡುತ್ತಿರುವ ‘ಮತ್ತೆ ಮದುವೆ’ ಸಿನಿಮಾ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಮೂಡಿಬರುತ್ತಿದ್ದು, ಮೇ 26ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: Matte Maduve: ಪವಿತ್ರಾ ಲೋಕೇಶ್​-ನರೇಶ್​ ಸಂಸಾರ ಹೇಗಿದೆ ಎಂಬುದಕ್ಕೆ ‘ಉರುಳೋ ಕಾಲವೇ..’ ಉತ್ತರ

ನರೇಶ್​ ಮತ್ತು ಪವಿತ್ರಾ ಲೋಕೇಶ್​ ಮಾತ್ರವಲ್ಲದೇ ಜಯಸುಧಾ, ಶರತ್ ಬಾಬು, ವನಿತಾ ವಿಜಯಕುಮಾರ್, ಅನನ್ಯಾ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧೂ ಸೇರಿದಂತೆ ಹಲವರು ‘ಮತ್ತೆ ಮದುವೆ’ ಸಿನಿಮಾದಲ್ಲಿ ನಟಿಸಿದ್ದಾರೆ. ಪವಿತ್ರಾ ಲೋಕೇಶ್​ ಹಾಗೂ ನರೇಶ್​ ನಡುವಿನ ಸಂಬಂಧದ ಬಗ್ಗೆ ಜನರಲ್ಲಿ ಅನೇಕ ಪ್ರಶ್ನೆಗಳಿವೆ. ಆ ಎಲ್ಲ ಪ್ರಶ್ನೆಗಳಿಗೆ ‘ಮತ್ತೆ ಮದುವೆ’ ಸಿನಿಮಾದಲ್ಲಿ ಉತ್ತರ ಸಿಗುವ ಸೂಚನೆ ಸಿಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?