ಕನ್ನಡ, ಹಿಂದಿ, ಮಲಯಾಳಂ, ತಮಿಳು, ತೆಲುಗಿನಲ್ಲಿ ಬರಲಿದೆ ಮೇಘಾ ಶೆಟ್ಟಿ ಸಿನಿಮಾ; ಶೂಟಿಂಗ್​ ಮುಗಿಸಿದ ‘ಆಪರೇಷನ್ ಲಂಡನ್ ಕೆಫೆ’

Megha Shetty Movies: ‘ಜೊತೆ ಜೊತೆಯಲಿ’ ಸೀರಿಯಲ್ ಮೂಲಕ ಗಮನ ಸೆಳೆದ ಮೇಘಾ ಶೆಟ್ಟಿ ಅವರಿಗೆ ಚಿತ್ರರಂಗದಲ್ಲಿ ಹೊಸ ಹೊಸ ಅವಕಾಶಗಳು ಸಿಗುತ್ತಿವೆ. ‘ಆಪರೇಷನ್ ಲಂಡನ್ ಕೆಫೆ’ ಚಿತ್ರಕ್ಕೆ ಅವರು ಶೂಟಿಂಗ್​ ಮುಗಿಸಿದ್ದಾರೆ.

ಕನ್ನಡ, ಹಿಂದಿ, ಮಲಯಾಳಂ, ತಮಿಳು, ತೆಲುಗಿನಲ್ಲಿ ಬರಲಿದೆ ಮೇಘಾ ಶೆಟ್ಟಿ ಸಿನಿಮಾ; ಶೂಟಿಂಗ್​ ಮುಗಿಸಿದ ‘ಆಪರೇಷನ್ ಲಂಡನ್ ಕೆಫೆ’
ಮೇಘಾ ಶೆಟ್ಟಿ
Follow us
ಮದನ್​ ಕುಮಾರ್​
|

Updated on: Aug 05, 2023 | 12:00 PM

2023ರಲ್ಲಿ ಕನ್ನಡದ ಅನೇಕ ಸಿನಿಮಾಗಳು (Kannada Movies) ಗಮನ ಸೆಳೆಯುತ್ತಿವೆ. ಮುಂಬರುವ ಚಿತ್ರಗಳ ಮೇಲೆ ಬಹಳ ನಿರೀಕ್ಷೆ ಇದೆ. ಕೆಲವು ಸಿನಿಮಾಗಳು ವಿಶೇಷವಾಗಿ ನಿರೀಕ್ಷೆ ಮೂಡಿಸಿದೆ. ಆ ಪೈಕಿ ‘ಆಪರೇಷನ್ ಲಂಡನ್ ಕೆಫೆ’ (Operation London Cafe) ಸಿನಿಮಾ ಕೂಡ ಇದೆ. ಸಾಕಷ್ಟು ಕೌತುಕ ಮೂಡಿಸುತ್ತಿರುವ ಈ ಸಾಹಸಪ್ರಧಾನ ಚಿತ್ರದಲ್ಲಿ ಕವೀಶ್ ಶೆಟ್ಟಿ ಹಾಗೂ ಮೇಘಾ ಶೆಟ್ಟಿ (Megha Shetty) ಅವರು ನಟಿಸಿದ್ದಾರೆ. ಇಬ್ಬರ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ವಿಶೇಷ ಏನೆಂದರೆ ಈ ಸಿನಿಮಾ ಬಹುಭಾಷೆಯಲ್ಲಿ ಬಿಡುಗಡೆ ಆಗಲಿದೆ. ಕನ್ನಡದ ಜೊತೆ ಮರಾಠಿ, ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗು ಭಾಷೆಯಲ್ಲಿ ‘ಆಪರೇಷನ್ ಲಂಡನ್ ಕೆಫೆ’ ಸಿನಿಮಾ ತಯಾರಾಗುತ್ತಿದೆ. ಬಹುತೇಕ ಶೂಟಿಂಗ್​ ಮುಗಿಸಿರುವ ಈ ಚಿತ್ರತಂಡವು ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ಬ್ಯುಸಿಯಾಗಿದೆ.

ಆಗಸ್ಟ್​ 4ರಂದು ಮೇಘಾ ಶೆಟ್ಟಿ ಜನ್ಮದಿನ. ‘ಆಪರೇಷನ್ ಲಂಡನ್ ಕೆಫೆ’ ಸಿನಿಮಾದ ಶೂಟಿಂಗ್​ ಮುಗಿಸಿದ ಖುಷಿಯಲ್ಲಿ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅವರಿಗೆ ಎಲ್ಲರೂ ಶುಭಾಶಯ ಕೋರಿದ್ದಾರೆ. ಈ ಸಿನಿಮಾದಲ್ಲಿನ ಅವರ ಗೆಟಪ್​ ಗಮನ ಸೆಳೆಯುತ್ತಿದೆ. ಕಿರುತೆರೆಯಿಂದ ಬಂದು ಸಿನಿಮಾ ಲೋಕದಲ್ಲಿ ಮಿಂಚುತ್ತಿರುವ ಅವರಿಗೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಅಭಿಮಾನಿಗಳು, ಸ್ನೇಹಿತರು ಮತ್ತು ಆಪ್ತರು ವಿಶ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: Megha Shetty: ನೋ ಮೇಕಪ್​, ಫುಲ್ ವರ್ಕೌಟ್​; ಜಿಮ್​ನಲ್ಲಿ ಬೆವರು ಹರಿಸಿದ ನಟಿ ಮೇಘಾ ಶೆಟ್ಟಿ

ವಿಜಯ್ ಕುಮಾರ್ ಶೆಟ್ಟಿ, ಹವರಾಲ್ ರಮೇಶ್ ಕೊಠಾರಿ, ದೀಪಕ್ ರಾಣೆ ಅವರು ‘ಇಂಡಿಯನ್ ಫಿಲ್ಮ್ ಫ್ಯಾಕ್ಟರಿ’ ಹಾಗೂ ‘ದೀಪಕ್ ರಾಣೆ ಫಿಲ್ಮ್ಸ್’ ಬ್ಯಾನರ್​ ಮೂಲಕ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ಸಡಗರ ರಾಘವೇಂದ್ರ ಅವರು ನಿರ್ದೇಶಿಸುತ್ತಿದ್ದಾರೆ. ಡಿ. ನಾಗಾರ್ಜುನ್ ಛಾಯಾಗ್ರಹಣ ಮಾಡಿದ್ದಾರೆ. ಪ್ರಾನ್ಷು ಝಾ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಕೆ.ಎಂ. ಪ್ರಕಾಶ್ ಅವರ ಸಂಕಲನ, ವರದರಾಜ್ ಕಾಮತ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ: Megha Shetty: ಗುರುತು ಸಿಗದಷ್ಟು ಬದಲಾದ ನಟಿ ಮೇಘಾ ಶೆಟ್ಟಿ; ಹೊಸ ಅವತಾರ ನೋಡಿ ನೆಟ್ಟಿಗರು ಫಿದಾ

‘ಆಪರೇಷನ್ ಲಂಡನ್ ಕೆಫೆ’ ಚಿತ್ರಕ್ಕೆ ವಿಕ್ರಂ ಮೋರ್ ಮತ್ತು ಮಾಸ್ ಮಾದ ಅವರು ಸಾಹಸ ನಿರ್ದೇಶನ ಮಾಡಿದ್ದಾರೆ. ಕವಿರಾಜ್, ವಿ. ನಾಗೇಂದ್ರ ಪ್ರಸಾದ್ ಹಾಗೂ ಕ್ಷಿತಿಜ್ ಪಟವರ್ಧನ್ ಅವರು ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. ಈ ಸಿನಿಮಾದಲ್ಲಿ ಮರಾಠಿಯ ಖ್ಯಾತ ನಟರು ಕೂಡ ಅಭಿನಯಿಸಿದ್ದಾರೆ. ಸಿನಿಮಾ ಬಗ್ಗೆ ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ಸಿಗಲಿದೆ. ‘ಜೊತೆ ಜೊತೆಯಲಿ’ ಸೀರಿಯಲ್ ಮೂಲಕ ಗಮನ ಸೆಳೆದ ಮೇಘಾ ಶೆಟ್ಟಿ ಅವರಿಗೆ ಚಿತ್ರರಂಗದಲ್ಲಿ ಹೊಸ ಹೊಸ ಅವಕಾಶಗಳು ಸಿಗುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ