Meghana Raj Birthday: ಟಾರ್ಚ್ ಆನ್ ಮಾಡಿ ಏನನ್ನೋ ಹುಡುಕುತ್ತಿದ್ದಾರೆ ಮೇಘನಾ ರಾಜ್​; ಬರ್ತ್​ಡೇಗೆ ‘ತತ್ಸಮ ತದ್ಭವ’ ಪೋಸ್ಟರ್

‘ತತ್ಸಮ ತದ್ಭವ’ ಚಿತ್ರದಲ್ಲಿ ಮೇಘನಾ ರಾಜ್​ ಅವರು ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಈ ಚಿತ್ರದ ಪೋಸ್ಟರ್ ಫ್ಯಾನ್ಸ್​ಗೆ ಇಷ್ಟ ಆಗಿದೆ.

Meghana Raj Birthday: ಟಾರ್ಚ್ ಆನ್ ಮಾಡಿ ಏನನ್ನೋ ಹುಡುಕುತ್ತಿದ್ದಾರೆ ಮೇಘನಾ ರಾಜ್​; ಬರ್ತ್​ಡೇಗೆ ‘ತತ್ಸಮ ತದ್ಭವ’ ಪೋಸ್ಟರ್
Meghana Raj
Follow us
ರಾಜೇಶ್ ದುಗ್ಗುಮನೆ
|

Updated on: May 03, 2023 | 10:40 AM

ನಟಿ ಮೇಘನಾ ರಾಜ್ ಅವರು ಇಂದು (ಮೇ 3) ಬರ್ತ್​ಡೇ (Meghana Raj Birthday) ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಹಲವು ಕಡೆಗಳಿಂದ ಜನ್ಮದಿನದ ಶುಭಾಶಯ ಬರುತ್ತಿದೆ. ಸೆಲೆಬ್ರಿಟಿಗಳು, ಕುಟುಂಬದವರು ಹಾಗೂ ಗೆಳೆಯರು ಮೇಘನಾ ರಾಜ್​ಗೆ (Meghana Raj) ಜನ್ಮದಿನದ ವಿಶ್ ತಿಳಿಸಿದ್ದಾರೆ. ಬರ್ತ್​ಡೇ ಪ್ರಯುಕ್ತ ಅವರ ಕಂಬ್ಯಾಕ್ ಸಿನಿಮಾ ‘ತತ್ಸಮ ತದ್ಭವ’ ಚಿತ್ರದ ಹೊಸ ಪೋಸ್ಟರ್ ರಿವೀಲ್ ಆಗಿದೆ. ಈ ಪೋಸ್ಟರ್​ ನೋಡಿ ಫ್ಯಾನ್ಸ್ ಖಷಿಪಟ್ಟಿದ್ದಾರೆ. ಈ ಪೋಸ್ಟರ್ ಸಾಕಷ್ಟು ಕುತೂಹಲದ ಗೂಡಾಗಿದೆ.

ಮೇಘನಾ ರಾಜ್ ಅವರ ಪತಿ ಚಿರಂಜೀವಿ ಸರ್ಜಾ 2020ರಲ್ಲಿ ಮೃತಪಟ್ಟರು. ಇದು ಅವರಿಗೆ ಶಾಕ್​ ತಂದಿತ್ತು. ಈ ಸಾವನ್ನು ಯಾರೂ ಊಹಿಸಿರಲಿಲ್ಲ. ಇದಾದ ಬಳಿಕ ಮೇಘನಾ ರಾಜ್ ಅವರು ಚಿತ್ರರಂಗದಿಂದ ದೂರ ಉಳಿದರು. ಮಗು ರಾಯನ್ ರಾಜ್ ಸರ್ಜಾ ಜನಿಸಿದ ನಂತರದಲ್ಲಿ ಮೇಘನಾ ಅವರ ಬದುಕಲ್ಲಿ ಖುಷಿ ಮೂಡಿದೆ. ಹೀಗಾಗಿ, ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

‘ತತ್ಸಮ ತದ್ಭವ’ ಚಿತ್ರದಲ್ಲಿ ಮೇಘನಾ ರಾಜ್​ ಅವರು ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಈ ಚಿತ್ರದ ಪೋಸ್ಟರ್ ಫ್ಯಾನ್ಸ್​ಗೆ ಇಷ್ಟ ಆಗಿದೆ. ಈ ಪೋಸ್ಟರ್​ನಲ್ಲಿ ಮೇಘನಾ ಅವರು ತೋಟದ ಮಧ್ಯೆ ಏನನ್ನೋ ಹುಡುಕುವಂತಿದೆ. ಅವರ ಕೈಯಲ್ಲಿ ಟಾರ್ಚ್​ ಇದೆ. ಈ ಸಿನಿಮಾ ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಮೂಡಿಬರುತ್ತಿದೆ. ಎರಡೂ ಭಾಷೆಯಲ್ಲಿ ಪೋಸ್ಟರ್ ರಿಲೀಸ್ ಮಾಡಲಾಗಿದೆ.

‘ತತ್ಸಮ ತದ್ಭವ’ ಚಿತ್ರದಲ್ಲಿ ಮೇಘನಾ ವಿಶೇಷ ಪಾತ್ರ ಮಾಡಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ. ಈ ಬಗ್ಗೆ ಚಿತ್ರತಂಡ ಇತ್ತೀಚೆಗೆ ಮಾಹಿತಿ ಹಂಚಿಕೊಂಡಿತ್ತು.  ಕೆಲವು ವರ್ಷಗಳಿಂದ ನಟಿ ಮೇಘನರಾಜ್ ಯಾವುದೇ ಚಿತ್ರದಲ್ಲಿ ಅಭಿನಯಿಸಿರಲಿಲ್ಲ. ಅವರು ಮರಳಿ ಚಿತ್ರರಂಗಕ್ಕೆ ಬರಬೇಕು ಎಂಬುದು ಅಭಿಮಾನಿಗಳ ಕೋರಿಕೆ ಆಗಿತ್ತು. ಈ ಕೋರಿಕೆ ಈಡೇರಿದೆ.

ಇದನ್ನೂ ಓದಿ: ಮೇಘನಾ ರಾಜ್ ನಟನೆಯ ‘ತತ್ಸಮ ತದ್ಭವ’ ಸಿನಿಮಾ ಶೂಟಿಂಗ್ ಪೂರ್ಣ; ಚುನಾವಣೆ ಬಳಿಕ ಸಿನಿಮಾ ರಿಲೀಸ್

‘ತತ್ಸಮ ತದ್ಭವ’ ಚಿತ್ರವನ್ನು ಮೇಘನಾ ಗೆಳೆಯ ಪನ್ನಗ ಭರಣ ನಿರ್ಮಾಣ ಮಾಡಿದ್ದಾರೆ. ಸ್ಫೂರ್ತಿ ಅನಿಲ್ ಪನ್ನಗ ಭರಣಗೆ ಸಾಥ್ ನೀಡಿದ್ದಾರೆ. ವಿಶಾಲ್ ಆತ್ರೇಯ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಇದೆ. ಪ್ರಜ್ವಲ್ ದೇವರಾಜ್ ಸೇರಿ ಅನೇಕ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ