Meghana Raj: ಚಿರು ಹುಟ್ಟುಹಬ್ಬಕ್ಕೆ ಮೇಘನಾ ರಾಜ್​ ಗುಡ್​ ನ್ಯೂಸ್​; ಕೈ ಜೋಡಿಸಿದ ವಾಸುಕಿ, ಪನ್ನಗ ಭರಣ

Chiranjeevi Sarja Birthday: ಅಕ್ಟೋಬರ್​ 17ರಂದು ಚಿರಂಜೀವಿ ಸರ್ಜಾ ಜನ್ಮದಿನ. ಆ ಪ್ರಯುಕ್ತ ಮೇಘನಾ ರಾಜ್​ ಅವರ ಹೊಸ ಸಿನಿಮಾ ಸೆಟ್ಟೇರಲಿದೆ. ಅವರು ಕಮ್​ಬ್ಯಾಕ್​ ಮಾಡುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

Meghana Raj: ಚಿರು ಹುಟ್ಟುಹಬ್ಬಕ್ಕೆ ಮೇಘನಾ ರಾಜ್​ ಗುಡ್​ ನ್ಯೂಸ್​; ಕೈ ಜೋಡಿಸಿದ ವಾಸುಕಿ, ಪನ್ನಗ ಭರಣ
ಮೇಘನಾ ರಾಜ್​, ಪನ್ನಗ ಭರಣ, ವಿಶಾಲ್​
Follow us
TV9 Web
| Updated By: ಮದನ್​ ಕುಮಾರ್​

Updated on: Oct 16, 2021 | 10:30 AM

ಕನ್ನಡ ಮತ್ತು ಮಲಯಾಳಂ ಚಿತ್ರರಂಗದಲ್ಲಿ ನಟಿ ಮೇಘನಾ ರಾಜ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಸಿನಿಮಾ ಮತ್ತು ಪಾತ್ರಗಳ ಆಯ್ಕೆಯಲ್ಲಿ ಅವರು ಬಹಳ ಎಚ್ಚರಿಕೆ ವಹಿಸುತ್ತಾರೆ. ಪತಿ ಚಿರಂಜೀವಿ ಸರ್ಜಾ ನಿಧನದ ಬಳಿಕ ಅವರು ನಟನೆಯಿಂದ ದೂರ ಉಳಿಯಬೇಕಾಯಿತು. ಪುತ್ರ ರಾಯನ್​ ರಾಜ್​ ಸರ್ಜಾ ಆರೈಕೆಯಲ್ಲಿ ಅವರು ಬ್ಯುಸಿ ಆಗಿದ್ದಾರೆ. ಆದಷ್ಟು ಬೇಗ ಮೇಘನಾ ರಾಜ್​ ಕಮ್​ಬ್ಯಾಕ್​ ಮಾಡಲಿ ಎಂಬುದು ಅವರ ಅಭಿಮಾನಿಗಳ ಬಯಕೆ. ಆ ಬಯಕೆ ಈಡೇರುವ ಕಾಲ ಈಗ ಬಂದಿದೆ. ಮೇಘನಾ ಅವರ ಹೊಸ ಸಿನಿಮಾ ಬಗ್ಗೆ ಮಾಹಿತಿ ಸಿಕ್ಕಿದೆ.

ಚಿರು ನಿಧನದ ಬಳಿಕ ನಟನೆಯಿಂದ ದೂರ ಉಳಿದುಕೊಂಡಿದ್ದ ಮೇಘನಾ ರಾಜ್​ ಅವರು ದೀರ್ಘ ಗ್ಯಾಪ್​ ಬಳಿಕ ಮತ್ತೆ ನಟಿಸಲು ಸಜ್ಜಾಗಿದ್ದಾರೆ. ಹೊಸ ಚಿತ್ರ ಕೂಡ ಒಪ್ಪಿಕೊಂಡಿದ್ದಾರೆ. ಈ ಚಿತ್ರವನ್ನು ಚಿರಂಜೀವಿ ಸರ್ಜಾ ಅವರ ಸ್ನೇಹಿತ ಪನ್ನಗ ಭರಣ ನಿರ್ಮಾಣ ಮಾಡಲಿದ್ದಾರೆ. ಅವರ ಜೊತೆ ಸಂಗೀತ ನಿರ್ದೇಶಕ ವಾಸುಕಿ ವೈಭವ್​, ಹೊಸ ನಿರ್ದೇಶಕ ವಿಶಾಲ್​ ಕೈ ಜೋಡಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಮೇಘನಾ ರಾಜ್​ ಮುಖ್ಯ ಭೂಮಿಕೆ ನಿಭಾಯಿಸಲಿದ್ದಾರೆ.

ನಾಳೆ (ಅ.17) ಚಿರಂಜೀವಿ ಸರ್ಜಾ ಜನ್ಮದಿನ. ಆ ಪ್ರಯುಕ್ತ ಮೇಘನಾ ರಾಜ್​ ಅವರ ಹೊಸ ಸಿನಿಮಾ ಸೆಟ್ಟೇರಲಿದೆ. ಈ ಸಿನಿಮಾವನ್ನು ಚಿರು ಜೊತೆ ಸೇರಿ ನಿರ್ಮಾಣ ಮಾಡಬೇಕು ಎಂದು ಪ್ಲ್ಯಾನ್​ ಮಾಡಲಾಗಿತ್ತು. ಆದರೆ ಅದಕ್ಕೆ ವಿಧಿ ಅವಕಾಶ ನೀಡಲಿಲ್ಲ. ಈಗ ಚಿರು ಹುಟ್ಟುಹಬ್ಬದ ದಿನ ಈ ಚಿತ್ರ ಸೆಟ್ಟೇರಲಿದೆ. ಈ ಕಾರ್ಯಕ್ರಮಕ್ಕೆ ಹಿರಿಯ ನಿರ್ದೇಶಕ ನಾಗಾಭರಣ, ನಟ ಸುಂದರ್​ ರಾಜ್​, ಕಲಾ ನಿರ್ದೇಶಕ ಶಿವಕುಮಾರ್​ ಮುಂತಾದವರು ಆಗಮಿಸಲಿದ್ದಾರೆ.

ಪಿ.ಬಿ. ಸ್ಟುಡಿಯೋಸ್​ ಲಾಂಛನದಲ್ಲಿ ಈ ಚಿತ್ರ ಮೂಡಿಬರಲಿದೆ. ಚಿತ್ರದ ಶೀರ್ಷಿಕೆ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಮೇಘನಾ ರಾಜ್​ ಅವರಿಗೆ ಈ ಸಿನಿಮಾದಲ್ಲಿ ಯಾವ ಪಾತ್ರ ಇರಲಿದೆ ಎಂಬುದನ್ನು ತಿಳಿದುಕೊಳ್ಳಲು ಅವರ ಅಭಿಮಾನಿಗಳು ಕಾಯುತ್ತಿದ್ದಾರೆ. ಒಟ್ಟಿನಲ್ಲಿ ಅವರು ಮತ್ತೆ ಚಿತ್ರರಂಗದಲ್ಲಿ ಸಕ್ರಿಯವಾಗಲು ನಿರ್ಧರಿಸಿರುವುದು ಫ್ಯಾನ್ಸ್​ಗೆ ಖುಷಿ ನೀಡಿದೆ.

ಇದನ್ನೂ ಓದಿ:

ಹಿಂದೂ-ಕ್ರೈಸ್ತ ಸಂಪ್ರದಾಯದಂತೆ ಮಗನಿಗೆ ಹೆಸರಿಟ್ಟಿದ್ದಕ್ಕೆ ಕಾರಣ ತಿಳಿಸಿದ ಮೇಘನಾ ರಾಜ್​

‘ಮೇಘನಾಳನ್ನು ನಾವು ನೋಡಿಕೊಳ್ತೀವಿ, ಬೇರೆ ಯಾರೂ ಬೇಡ’; ಪ್ರಮೀಳಾ ಜೋಷಾಯ್​ ನೇರ​ ಮಾತು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ