Meghana Raj: ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ನಟಿ ಮೇಘನಾ ರಾಜ್

|

Updated on: Jul 17, 2023 | 8:27 AM

ಪತಿ ಚಿರಂಜೀವಿ ಮೃತಪಟ್ಟ ಬಳಿಕ ಅವರು ಕಣ್ಣೀರಲ್ಲಿ ಕೈ ತೊಳೆದರು. ರಾಯನ್ ಜನಿಸಿದ ಬಳಿಕ ಅವರ ಬಾಳಲ್ಲಿ ಮತ್ತೆ ಸಂತೋಷ ಮೂಡಿತು. ಈಗ ಮೇಘನಾ ರಾಜ್ ಅವರು ಖುಷಿಯಾಗಿದ್ದಾರೆ.

Meghana Raj: ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ನಟಿ ಮೇಘನಾ ರಾಜ್
ಮೇಘನಾ ರಾಜ್
Follow us on

ಮೇಘನಾ ರಾಜ್ (Meghana Raj) ಅವರು ‘ತತ್ಸಮ ತದ್ಭವ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈಗಾಗಲೇ ಸಿನಿಮಾದ ಪೋಸ್ಟರ್​ಗಳು ಗಮನ ಸೆಳೆದಿವೆ. ಇದು ಮಹಿಳಾ ಪ್ರಧಾನ ಸಿನಿಮಾ ಎಂಬ ಕಾರಣಕ್ಕೂ ನಿರೀಕ್ಷೆ ಹೆಚ್ಚಿದೆ. ಈಗ ಮೇಘನಾ ರಾಜ್ ಅವರು ಸಿನಿಮಾ ಬಗ್ಗೆ ಅಪ್​ಡೇಟ್ ನೀಡಿದ್ದಾರೆ. ಇಂದು (ಜುಲೈ 17) ‘ತತ್ಸಮ ತದ್ಭವ’ (Tatsama Tadbhava) ಸಿನಿಮಾದ ಟೀಸರ್ ರಿಲೀಸ್ ಆಗಲಿದೆ. ಈ ವಿಚಾರ ತಿಳಿದು ಅಭಿಮಾನಿಗಳು ಖುಷಿ ಆಗಿದ್ದಾರೆ. ಟೀಸರ್ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಕೆಲ ವರ್ಷಗಳಿಂದ ಈಚೆ ಮೇಘನಾ ರಾಜ್ ಅವರ ಬಾಳಲ್ಲಿ ಹಲವು ಏರುಪೇರುಗಳು ಉಂಟಾದವು. ಪತಿ ಚಿರಂಜೀವಿ ಮೃತಪಟ್ಟ ಬಳಿಕ ಅವರು ಕಣ್ಣೀರಲ್ಲಿ ಕೈ ತೊಳೆದರು. ರಾಯನ್ ಜನಿಸಿದ ಬಳಿಕ ಅವರ ಬಾಳಲ್ಲಿ ಮತ್ತೆ ಸಂತೋಷ ಮೂಡಿತು. ಈಗ ಮೇಘನಾ ರಾಜ್ ಅವರು ಖುಷಿಯಾಗಿದ್ದಾರೆ. ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರ ಕಂಬ್ಯಾಕ್ ಸಿನಿಮಾ ‘ತತ್ಸಮ ತದ್ಭವ’ ಚಿತ್ರದ ಟೀಸರ್ ಈಗ ರಿಲೀಸ್ ಆಗುತ್ತಿದೆ.

‘ಎಲ್ಲರಿಗೂ ನಮಸ್ಕಾರ ನಾನು ನಿಮ್ಮ ಮೇಘನಾ ರಾಜ್. ಜುಲೈ 17ರಂದು ‘ತತ್ಸಮ ತದ್ಭವ’ ಸಿನಿಮಾದ ಟೀಸರ್ ರಿಲೀಸ್ ಆಗುತ್ತಿದೆ. ಬೀಟಲ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್​ನಲ್ಲಿ ಟೀಸರ್ ಬಿಡುಗಡೆ ಆಗಲಿದೆ’ ಎಂದು ಮೇಘನಾ ರಾಜ್ ಅವರು ವಿಡಿಯೋ ಮೂಲಕ ಮಾಹಿತಿ ನೀಡಿದ್ದಾರೆ. ಫ್ಯಾನ್ಸ್ ಈ ಪೋಸ್ಟ್​ ನೋಡಿ ಶುಭ ಹಾರೈಸಿದ್ದಾರೆ. ಈ ಚಿತ್ರಕ್ಕಾಗಿ ಕಾದಿದ್ದೇವೆ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.

ಕೆಲ ತಿಂಗಳ ಹಿಂದೆ ಚಿತ್ರತಂಡ ಶೂಟಿಂಗ್ ಪೂರ್ಣಗೊಳಿಸಿತ್ತು. ಈಗ ‘ತತ್ಸಮ ತದ್ಭವ’ ತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಆಗಿದೆ. ಮೇಘನಾ ರಾಜ್ ಅವರು ಮೇ 3ರಂದು ಹುಟ್ಟುಹಬ್ಬ ಆಚರಿಸಿಕೊಂಡರು. ಈ ವೇಳೆ ‘ತತ್ಸಮ ತದ್ಭವ’ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ ಆಗಿತ್ತು. ಈ ಪೋಸ್ಟರ್​ ನೋಡಿ ಫ್ಯಾನ್ಸ್ ಖಷಿಪಟ್ಟಿದ್ದರು. ಈ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿತ್ತು. ಈಗ ಟೀಸರ್ ಬಗ್ಗೆ ಕುತೂಹಲ ಮೂಡಿದೆ.

ಇದನ್ನೂ ಓದಿ: ಶಿವರಾಜ್​ಕುಮಾರ್​ಗೆ ವಿಶೇಷ ರೀತಿಯಲ್ಲಿ ವಿಶ್ ಮಾಡಿದ ನಟಿ ಮೇಘನಾ ರಾಜ್

ಮೇಘನಾ ಗೆಳೆಯ ಪನ್ನಗ ಭರಣ ‘ತತ್ಸಮ ತದ್ಭವ’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸ್ಫೂರ್ತಿ ಅನಿಲ್ ಪನ್ನಗ ಭರಣ ಜೊತೆ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ವಿಶಾಲ್ ಆತ್ರೇಯ ನಿರ್ದೇಶನ ಇದೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಪ್ರಜ್ವಲ್ ದೇವರಾಜ್ ಸೇರಿ ಅನೇಕ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ