Meghana Raj: ಮೇಘನಾ ರಾಜ್ ನಟನೆಯ ‘ತತ್ಸಮ ತದ್ಭವ’ ಸಿನಿಮಾ ಶೂಟಿಂಗ್ ಪೂರ್ಣ; ಚುನಾವಣೆ ಬಳಿಕ ಸಿನಿಮಾ ರಿಲೀಸ್

ಕೆಲವು ವರ್ಷಗಳಿಂದ ನಟಿ ಮೇಘನರಾಜ್ ಯಾವುದೇ ಚಿತ್ರದಲ್ಲಿ ಅಭಿನಯಿಸಿರಲಿಲ್ಲ. ಅವರು ಮರಳಿ ಚಿತ್ರರಂಗಕ್ಕೆ ಬರಬೇಕು ಎಂಬುದು ಅಭಿಮಾನಿಗಳ ಕೋರಿಕೆ ಆಗಿತ್ತು. ಈ ಕೋರಿಕೆ ಈಡೇರಿದೆ.

Meghana Raj: ಮೇಘನಾ ರಾಜ್ ನಟನೆಯ ‘ತತ್ಸಮ ತದ್ಭವ’ ಸಿನಿಮಾ ಶೂಟಿಂಗ್ ಪೂರ್ಣ; ಚುನಾವಣೆ ಬಳಿಕ ಸಿನಿಮಾ ರಿಲೀಸ್
ಮೇಘನಾ ರಾಜ್ ಆ್ಯಂಡ್ ಟೀಂ
Follow us
ರಾಜೇಶ್ ದುಗ್ಗುಮನೆ
|

Updated on:Apr 15, 2023 | 11:40 AM

ನಟಿ ಮೇಘನಾ ರಾಜ್ (Meghana Raj) ಬದುಕಲ್ಲಿ ಅನೇಕ ಏರುಪೇರುಗಳು ಉಂಟಾದವು. ಪತಿ ಚಿರಂಜೀವಿ ಸರ್ಜಾ ನಿಧನ ಹೊಂದಿದರು. ಇದರಿಂದ ಅವರು ಕಣ್ಣೀರಲ್ಲಿ ಕೈ ತೊಳೆಯುವಂತಾಯಿತು. ಇದಾದ ಬಳಿಕ ರಾಯನ್ ರಾಜ್ ಸರ್ಜಾ ಹುಟ್ಟಿದ. ಅವರ ಬಾಳಲ್ಲಿ ಆಗ ಖುಷಿಯ ದಿನಗಳು ಆರಂಭ ಆದವು. ಇಷ್ಟು ದಿನ ಅವರು ಮಗನ ಆರೈಕೆಯಲ್ಲಿ ಬ್ಯುಸಿ ಇದ್ದರು. ಈಗ ಅವರು ಮರಳಿ ಚಿತ್ರರಂಗಕ್ಕೆ ಬಂದಿದ್ದಾರೆ. ‘ತತ್ಸಮ ತದ್ಭವ’ (Tatsama Tadbhava Movie) ಚಿತ್ರದಲ್ಲಿ ಅವರು ನಟಿಸಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಸಿಕ್ಕಿದೆ.

ಕೆಲವು ವರ್ಷಗಳಿಂದ ನಟಿ ಮೇಘನರಾಜ್ ಯಾವುದೇ ಚಿತ್ರದಲ್ಲಿ ಅಭಿನಯಿಸಿರಲಿಲ್ಲ. ಅವರು ಮರಳಿ ಚಿತ್ರರಂಗಕ್ಕೆ ಬರಬೇಕು ಎಂಬುದು ಅಭಿಮಾನಿಗಳ ಕೋರಿಕೆ ಆಗಿತ್ತು. ಈ ಕೋರಿಕೆ ಈಡೇರಿದೆ. ‘ತತ್ಸಮ ತದ್ಭವ’ ಸಿನಿಮಾ ಮೂಲಕ ಅವರು ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಸಿನಿಮಾ ಶೂಟಿಂಗ್ ಪೂರ್ಣಗೊಂಡ ಬಗ್ಗೆ ಮಾಹಿತಿ ನೀಡಲು ಚಿತ್ರತಂಡ ಸುದ್ದಿಗೋಷ್ಠಿ ನಡೆಸಿದೆ.

‘ನಿಜವಾದ ಸ್ನೇಹಿತರು ಯಾವಾಗಲೂ ಜೊತೆಗಿರುತ್ತಾರೆ. ಅಂತಹ ಸ್ನೇಹಿತರು ನನಗಿದ್ದಾರೆ. ಅವರು ನನಗಾಗಿ ಸಿನಿಮಾ ಮಾಡಿದ್ದಾರೆ. ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡುತ್ತಿದ್ದೇನೆ. ಪನ್ನಗ ಭರಣ ಹಾಗೂ ಸ್ಪೂರ್ತಿ ಅನಿಲ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಿಶಾಲ್ ಆತ್ರೇಯ ಒಳ್ಳೆಯ ಕಥೆ ಮಾಡಿಕೊಂಡು ನಿರ್ದೇಶನ ಮಾಡಿದ್ದಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ ಈವರೆಗೂ ನಾನು ಇಂತಹ ಪಾತ್ರ ಮಾಡಿಲ್ಲ. ಮುಂದೆ ಮಾಡುತ್ತೀನೋ, ಇಲ್ಲವೋ ಗೊತ್ತಿಲ್ಲ’ ಎಂದು ಮೇಘನರಾಜ್ ಸಂತಸ ವ್ಯಕ್ತಪಡಿಸಿದರು.

ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಕೂಡ ನಟಿಸಿದ್ದಾರೆ. ‘ನನಗೆ ನಿರ್ದೇಶಕರು ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಸಿನಿಮಾದಲ್ಲಿ ಪ್ರಮುಖ ಪಾತ್ರ ಬರುತ್ತದೆ. ಈ ಪಾತ್ರವನ್ನು ನಾನು ಮಾಡುತ್ತಿದ್ದೇನೆ. ಸ್ನೇಹಿತರ ಸಿನಿಮಾ‌ದಲ್ಲಿ ಅಭಿನಯಿಸಿದ ಖುಷಿ ಇದೆ’ ಎಂದು ಪ್ರಜ್ವಲ್ ದೇವರಾಜ್ ಹೇಳಿದ್ದಾರೆ.

ಇದನ್ನೂ ಓದಿ:  ಹಿರಿದಾಗುತ್ತಿದೆ ಮೇಘನಾ ರಾಜ್ ನಟನೆಯ ‘ತತ್ಸಮ ತದ್ಭವ’ ಟೀಂ; ಮಹತಿ ವೈಷ್ಣವಿ ಭಟ್, ಅರವಿಂದ್ ಅಯ್ಯರ್ ಸೇರ್ಪಡೆ

ಈ ಸಿನಿಮಾ ಕ್ರೈಮ್ ಥ್ರಿಲ್ಲರ್ ಕಥೆ ಹೊಂದಿದೆ. ‘ಕನ್ನಡದಲ್ಲಿ ಇಂತಹ ಕಥೆ ಬಂದಿರುವುದು ಅಪರೂಪ. ನೋಡುಗರಿಗೂ ಇಷ್ಟವಾಗಬಹುದೆಂಬ ನಂಬಿಕೆಯಿದೆ’ ಎಂಬುದು ನಿರ್ದೇಶಕ ವಿಶಾಲ್ ಆತ್ರೇಯ ಅವರ ಮಾತು. ಸದ್ಯ ಚುನಾವಣೆಯ ಕಾವು ಜೋರಾಗಿದೆ. ಚುನಾವಣೆ, ಮತ ಎಣಿಕೆ ಮುಗಿದ ಬಳಿಕ ಸಿನಿಮಾ ಬಿಡುಗಡೆ ಮಾಡುವ ಆಲೋಚನೆ ನಿರ್ಮಾಪಕ ಪನ್ನಗ ಭರಣ ಅವರದ್ದು. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಇದೆ. ಅನೇಕ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:38 am, Sat, 15 April 23

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ