AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಘನಾ ರಾಜ್​ಗೆ ಮತ್ತೆ ಕಾಡುತ್ತಿದೆ ಆ ಭಯ; ಓಪನ್​ ಆಗಿಯೇ ಹೇಳಿಕೊಂಡ ನಟಿ

ಪಿ.ಬಿ. ಸ್ಟುಡಿಯೋಸ್​ ಲಾಂಛನದಲ್ಲಿ ಮೂಡಿಬರುತ್ತಿರುವ ಸಿನಿಮಾದಲ್ಲಿ ಮೇಘನಾ ನಟಿಸುತ್ತಿದ್ದಾರೆ. ವಿಶಾಲ್​ ಹೆಸರಿನ ಹೊಸ ಪ್ರತಿಭೆ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ.

ಮೇಘನಾ ರಾಜ್​ಗೆ ಮತ್ತೆ ಕಾಡುತ್ತಿದೆ ಆ ಭಯ; ಓಪನ್​ ಆಗಿಯೇ ಹೇಳಿಕೊಂಡ ನಟಿ
ಮೇಘನಾ ರಾಜ್​
TV9 Web
| Edited By: |

Updated on: Oct 17, 2021 | 3:47 PM

Share

ಮೇಘನಾ ರಾಜ್​ ಅವರು ಸ್ಯಾಂಡಲ್​ವುಡ್​ ಹಾಗೂ ಮಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದ ನಟಿ. ಅವರಿಗೆ ಎರಡೂ ಕಡೆಗಳಲ್ಲಿ ಬೇಡಿಕೆ ಇದೆ. ಆದರೆ ಕಾರಣಾಂತರಗಳಿಂದ ನಟನೆಯಿಂದ ದೂರ ಉಳಿಯುವ ಪರಿಸ್ಥಿತಿ ಬಂದೊದಗಿತ್ತು. ಈಗ ಅವರು ಮತ್ತೆ ಕಂಬ್ಯಾಕ್ ಮಾಡಿದ್ದಾರೆ. ಪನ್ನಗ ಭರಣ ನಿರ್ಮಾಣದ ಸಿನಿಮಾದಲ್ಲಿ ಅವರು ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾದ ಬಗ್ಗೆ ಮಾತನಾಡುವಾಗ ಅವರು ತಮಗೆ ಆಗುತ್ತಿರುವ ಭಯದ ಬಗ್ಗೆ ಹೇಳಿಕೊಂಡಿದ್ದಾರೆ.

ಪಿ.ಬಿ. ಸ್ಟುಡಿಯೋಸ್​ ಲಾಂಛನದಲ್ಲಿ ಮೂಡಿಬರುತ್ತಿರುವ ಸಿನಿಮಾದಲ್ಲಿ ಮೇಘನಾ ನಟಿಸುತ್ತಿದ್ದಾರೆ. ವಿಶಾಲ್​ ಹೆಸರಿನ ಹೊಸ ಪ್ರತಿಭೆ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ. ಈ ಚಿತ್ರದ ಮೂಲಕ ಮೇಘನಾ ರಾಜ್​ ಕಂಬ್ಯಾಕ್​ ಮಾಡುತ್ತಿದ್ದಾರೆ. ಇಂದು (ಅಕ್ಟೋಬರ್​ 17) ಚಿರಂಜೀವಿ ಸರ್ಜಾ ಅವರ ಜನ್ಮದಿನ. ಈ ವಿಶೇಷ ದಿನದಂದು ಚಿತ್ರತಂಡ ಮಾಧ್ಯಮದ ಎದುರು ಬಂದಿತ್ತು. ಈ ವೇಳೆ ಅವರು ಸಿನಿಮಾ ಬಗ್ಗೆ ಮಾಹಿತಿ ನೀಡಿದರು.

ಇದೊಂದು ಸಸ್ಪೆನ್ಸ್​ ಥ್ರಿಲ್ಲರ್​ ಸಿನಿಮಾ. ಮೇಘನಾ ಅವರು ತಮ್ಮ ವೃತ್ತಿಜೀವನದಲ್ಲಿ ಈ ರೀತಿಯ ಸಿನಿಮಾ ಮಾಡುತ್ತಿರುವುದು ಇದೇ ಮೊದಲಂತೆ. ಶೀಘ್ರವೇ ಸಿನಿಮಾ ಸೆಟ್ಟೇರಲಿದೆ. ಮೇಘನಾ ಮತ್ತೆ ಕ್ಯಾಮೆರಾ ಎದುರಿಸುತ್ತಿದ್ದು, ಒಂದು ಸಣ್ಣ ಭಯ ಕಾಡುತ್ತಿದೆ.

ಮಗುವನ್ನು ಪಡೆಯಬೇಕು ಎನ್ನುವ ನಿರ್ಧಾರಕ್ಕೆ ಬಂದ ನಂತರ ಮೇಘನಾ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್​ ತೆಗೆದುಕೊಂಡರು. ಇದಾದ ನಂತರ ಪತಿಯನ್ನು ಕಳೆದುಕೊಂಡರು. ಆ ನಂತರ ರಾಯನ್​ ಜನಿಸಿದ. ಅವನ ಆರೈಕೆಯಲ್ಲಿ ಮೇಘನಾ ಬ್ಯುಸಿ ಆದರು. ಈಗ ಒಂದು ಸಣ್ಣ ಗ್ಯಾಪ್​ನ ನಂತರ ಮೇಘನಾ ಮತ್ತೆ ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ. ಸಾಮಾನ್ಯವಾಗಿ ಹೊಸದಾಗಿ ಕ್ಯಾಮೆರಾ ಎದುರಿಸಬೇಕಾದರೆ ಭಯ ಉಂಟಾಗುತ್ತದೆ. ಅದೇ ರೀತಿಯ ತಳಮಳ ಅವರಿಗೆ ಆಗುತ್ತಿದೆ.

‘ಈ ಸಿನಿಮಾ ಮೂಲಕ ಮತ್ತೆ ಕಂಬ್ಯಾಕ್ ಮಾಡುತ್ತಿದ್ದೇನೆ. ಆ ಖುಷಿ ನನಗಿದೆ. ಆದರೆ, ಮೊದಲ ಬಾರಿಗೆ ಕ್ಯಾಮೆರಾ ಎದುರಿಸುವಾಗ ಆಗುತ್ತಿದ್ದ ಭಯವೇ ಈಗಲೂ ಆಗುತ್ತಿದೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಸಿನಿಮಾದಲ್ಲಿ ನಟಿಸುತ್ತಿರುವುದೇ ಒಂದು ಜವಾಬ್ದಾರಿ’ ಎಂದರು ಮೇಘನಾ.

ಇದನ್ನೂ ಓದಿ:Chiranjeevi Sarja: ಚಿರು ಹುಟ್ಟುಹಬ್ಬಕ್ಕೆ ಮೇಘನಾ ರಾಜ್​ ವಿಶೇಷ ಫೋಟೋಶೂಟ್​; ಇಲ್ಲಿದೆ ರಾಣಿ ಗೆಟಪ್​ನ ಫೋಟೋ ಆಲ್ಬಂ 

ಪತಿ ಚಿರುಗಾಗಿ ಮಹತ್ವದ ನಿರ್ಧಾರ ತೆಗೆದುಕೊಂಡು, ಆಡುವವರ ಬಾಯಿ ಮುಚ್ಚಿಸಿದ ಮೇಘನಾ ರಾಜ್

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?