Abhishek Ambareesh Wedding: ಅಭಿಷೇಕ್ ಅಂಬರೀಷ್ ಮನೆಯಲ್ಲಿ ಮದುವೆ ಶಾಸ್ತ್ರಗಳು ಆರಂಭ; ಅದ್ದೂರಿ ವಿವಾಹಕ್ಕೆ ಕ್ಷಣಗಣನೆ

ಸುಮಲತಾ ಅಂಬರೀಷ್​ ಅವರ ಮನೆಯನ್ನು ಬೆಳಕಿನಿಂದ ಅಲಂಕಾರ ಮಾಡಲಾಗಿದೆ. ಈಗಾಗಲೇ ಮನೆಯಲ್ಲಿ ಮದುವೆಯ ಕಳೆ ತುಂಬಿಕೊಂಡಿದೆ. ಈ ಫೋಟೋ ವೈರಲ್ ಆಗಿದೆ.

Follow us
ರಾಜೇಶ್ ದುಗ್ಗುಮನೆ
|

Updated on:Jun 02, 2023 | 12:52 PM

ಅಭಿಷೇಕ್ ಅಂಬರೀಷ್ (Abhishek Ambareesh) ಹಾಗೂ ಅವಿವ ಬಿಡಪ ಜೂನ್ 5ರಂದು ಅದ್ದೂರಿಯಾಗಿ ಮದುವೆ ಆಗುತ್ತಿದ್ದಾರೆ. ಈ ಮದುವೆಗೆ ಈಗಾಗಲೇ ಭರದ ಸಿದ್ಧತೆ ನಡೆದಿದೆ. ಇಂದಿನಿಂದ (ಜೂನ್ 2) ಮದುವೆ (Abhishek Ambareesh Wedding) ಶಾಸ್ತ್ರಗಳು ಆರಂಭ ಆಗಿವೆ. ವಿವಾಹಕ್ಕೂ ಮೊದಲು ನಡೆಯುವ ಅರಿಶಿಣ ಶಾಸ್ತ್ರದ ಕಾರ್ಯಗಳು ಆರಂಭ ಆಗಿವೆ. ಇದರಲ್ಲಿ ಅಭಿಷೇಕ್ ಕುಟುಂಬ ಭಾಗಿ ಆಗಿದೆ. ಈ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಅದ್ದೂರಿ ಮದುವೆ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

ಸುಮಲತಾ ಅವರ ಮನೆಯನ್ನು ಬೆಳಕಿನಿಂದ ಅಲಂಕಾರ ಮಾಡಲಾಗಿದೆ. ಈಗಾಗಲೇ ಮನೆಯಲ್ಲಿ ಮದುವೆಯ ಕಳೆ ತುಂಬಿಕೊಂಡಿದೆ. ಈ ಫೋಟೋಗಳನ್ನು ಅಭಿಮಾನಿಗಳು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಅಭಿಷೇಕ್ ಅವರು ಫೋಟೋಶೂಟ್ ಮಾಡಿಸಿಕೊಳ್ಳುತ್ತಿದ್ದಾರೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವ ಬಿಡಪ ಮದುವೆ, ಆರತಕ್ಷತೆ ಬಗ್ಗೆ ವಿವರ

ಜೂನ್​ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ. ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ. ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: ನವಜೋಡಿ ಅವಿವಾ ಬಿದ್ದಪ್ಪ-ಅಭಿಷೇಕ್ ಅಂಬರೀಶ್​ರ ಹೊಸ ಕ್ಯೂಟ್ ಚಿತ್ರಗಳು

ಸುಮಲತಾ ಅವರು ಚಿತ್ರರಂಗದಲ್ಲಿ ಹಾಗೂ ರಾಜಕೀಯದಲ್ಲಿ ಗುರುತಿಸಿಕೊಂಡವರು. ಅಂಬರೀಷ್ ಕೂಡ ಸಾಕಷ್ಟು ಜನಪ್ರಿಯತೆ ಹೊಂದಿದ್ದರು. ಹೀಗಾಗಿ, ಎರಡೂ ಕ್ಷೇತ್ರದ ಗಣ್ಯರು ಆರತಕ್ಷತೆಗೆ ಬರಲಿದ್ದಾರೆ. ಮದುವೆಗೆ ಆಪ್ತ ಬಳಗದವರು ಮಾತ್ರ ಹಾಜರಿ ಹಾಕಲಿದ್ದಾರೆ. ಇನ್ನು, ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಸುಮಾರು 1 ಲಕ್ಷ ಜನರು ಇದರಲ್ಲಿ ಭಾಗಿ ಆಗೋ ನಿರೀಕ್ಷೆ ಇದೆ.

ಖ್ಯಾತ ಫ್ಯಾಷನ್​ ಡಿಸೈನರ್​ ಪ್ರಸಾದ್​ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ ಹಾಗೂ ಅಭಿಷೇಕ್​ ಅಂಬರೀಷ್​ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು. ಪರಿಚಯ ಪ್ರೀತಿಗೆ ತಿರುಗಿತು. ಕುಟುಂಬದ ಒಪ್ಪಿಗೆ ಪಡೆದು ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರೂ ಮದುವೆ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:34 am, Fri, 2 June 23

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ