ಜಾಮೀನು ಪಡೆಯಲು ದರ್ಶನ್​ಗೆ ಮುಳುವಾಗುತ್ತಾ ಆ ಒಂದು ಸನ್ನೆ?

ದರ್ಶನ್ ಜಾಮೀನು ಆಕ್ಷೇಪಣೆಗೆ ಪರಪ್ಪನ ಅಗ್ರಹಾರದ ರಾಜಾಥಿತ್ಯ ಪ್ರಕರಣ ಪ್ರಮುಖ ಅಸ್ತ್ರ ಆಗಲಿದೆ. ಜೈಲಿನಲ್ಲಿ ಸಿಗರೇಟ್, ಟೀ ಕಪ್, ರೌಡಿಶೀಟರ್ ಜೊತೆ ಕುಳಿತಿರುವ ಬಗ್ಗೆ ನ್ಯಾಯಾಲಯಕ್ಕೆ ಪೊಲೀಸರು ತಿಳಿಸಲಿದ್ದಾರೆ. ದರ್ಶನ್​ಗೆ ಎಷ್ಟು ಪ್ರಭಾವ ಇದೆ ಎಂಬುದನ್ನು ಕೋರ್ಟ್​ಗೆ ಮನದಟ್ಟು ಮಾಡಿಕೊಳ್ಳಲು ಫೋಟೋ ಸಹಕಾರಿ ಆಗಲಿದೆ.

ಜಾಮೀನು ಪಡೆಯಲು ದರ್ಶನ್​ಗೆ ಮುಳುವಾಗುತ್ತಾ ಆ ಒಂದು ಸನ್ನೆ?
ದರ್ಶನ್
Follow us
ರಾಜೇಶ್ ದುಗ್ಗುಮನೆ
|

Updated on:Sep 14, 2024 | 9:18 AM

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿ ಮೂರು ತಿಂಗಳು ಕಳೆದಿದೆ. ಈವರೆಗೆ ಅವರ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿಲ್ಲ. ಒಂದೊಮ್ಮೆ ಅರ್ಜಿ ಸಲ್ಲಿಕೆ ಆದರೂ ಜಾಮೀನು ಸಿಗೋದು ಅಷ್ಟು ಸುಲಭದಲ್ಲಿ ಇಲ್ಲ ಎಂಬ ಅಭಿಪ್ರಾಯ ಇದೆ. ಇದಕ್ಕೆ ಕಾರಣ ಅವರು ಮಾಡಿಕೊಳ್ಳುತ್ತಿರುವ ಎಡವಟ್ಟುಗಳು. ದರ್ಶನ್​ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಪೊಲೀಸರಿಗೆ ದಿನಕ್ಕೊಂದು ಅಸ್ತ್ರ ಸಿಗುತ್ತಿದೆ. ಈ ಸಮಸ್ಯೆಗಳನ್ನು ಸ್ವತಃ ದರ್ಶನ್ ಅವರೇ ಸೃಷ್ಟಿಸಿಕೊಳ್ಳುತ್ತಿದ್ದಾರೆ.

ದರ್ಶನ್ ಜಾಮೀನು ಆಕ್ಷೇಪಣೆಗೆ ಪರಪ್ಪನ ಅಗ್ರಹಾರದ ರಾಜಾಥಿತ್ಯ ಪ್ರಕರಣ ಪ್ರಮುಖ ಅಸ್ತ್ರ ಆಗಲಿದೆ. ಜೈಲಿನಲ್ಲಿ ಸಿಗರೇಟ್, ಟೀ ಕಪ್, ರೌಡಿಶೀಟರ್ ಜೊತೆ ಕುಳಿತಿರುವ ಬಗ್ಗೆ ನ್ಯಾಯಾಲಯಕ್ಕೆ ಪೊಲೀಸರು ತಿಳಿಸಲಿದ್ದಾರೆ. ದರ್ಶನ್​ಗೆ ಎಷ್ಟು ಪ್ರಭಾವ ಇದೆ ಎಂಬುದನ್ನು ಕೋರ್ಟ್​ಗೆ ಮನದಟ್ಟು ಮಾಡಿಕೊಳ್ಳಲು ಫೋಟೋ ಸಹಕಾರಿ ಆಗಲಿದೆ. ಜೈಲಿನಿಂದ ರೌಡಿಶೀಟರ್ ಮಗನೊಬ್ಬನಿಗೆ ದರ್ಶನ್ ವಿಡಿಯೋ ಕಾಲ್ ಮಾಡಿದ್ದರು. ಇದನ್ನೂ ಪೊಲೀಸರು ಪ್ರಮುಖ ಅಂಶವಾಗಿ ಉಲ್ಲೇಖ ಮಾಡಲಿದ್ದಾರೆ. ‘ದರ್ಶನ್ ಜೈಲಿನಲ್ಲಿದ್ದು ಮೊಬೈಲ್ ಬಳಕೆ ಮಾಡಿದ್ದಾರೆ’ ಎಂದು ಪೊಲೀಸರು ಹೇಳಲಿದ್ದಾರೆ.

ಇಷ್ಟೆಲ್ಲ ಮಾಡಿದ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿಯೂ ಅವರು ಬುದ್ಧಿ ಕಲಿತಿಲ್ಲ. ಬಳ್ಳಾರಿ ಜೈಲಿನಲ್ಲಿಯ ದರ್ಶನ್ ಅಸಭ್ಯ ವರ್ತನೆ ತೋರುತ್ತಿದ್ದಾರೆ. ಕ್ಯಾಮೆರಾಗಳ ಮುಂದೆ ಮಧ್ಯದ ಬೆರಳು ತೋರಿಸಿದ್ದಾರೆ. ಆದರೆ, ಫ್ಯಾನ್ಸ್ ಇದನ್ನೂ ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಅದು ವಿಘ್ನ ಹರ ಮುದ್ರ ಎಂದು ದರ್ಶನ್ ಪರ ಫ್ಯಾನ್ಸ್ ಹೇಳುತ್ತಿದ್ದಾರೆ. ಆದರೆ, ಇದನ್ನು ಎಲ್ಲರೂ ಒಪ್ಪುತ್ತಿಲ್ಲ. ಈ ವಿಚಾರವನ್ನೂ ಪೊಲೀಸರು ಪ್ರಸ್ತಾಪ ಮಾಡಲಿದ್ದಾರೆ.

ಇದನ್ನೂ ಓದಿ: ರೇಣುಕಾ ಸ್ವಾಮಿ ಪ್ರಕರಣ: ಚಾರ್ಜ್​ಶೀಟ್​ನಲ್ಲಿ ಇಬ್ಬರು ನಟಿಯರ ಹೆಸರು ಉಲ್ಲೇಖ

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನ ಆಗಿರುವ ದರ್ಶನ್​ಗೆ ಯಾವುದೇ ಪಶ್ಚಾತ್ತಾಪದ ಭಾವನೆ ಇಲ್ಲ. ಈಗಾಗಲೇ ಸಾಕ್ಷ್ಯ ನಾಶಕ್ಕೆ ದರ್ಶನ್ ಹಲವು ಪ್ರಯತ್ನ ಮಾಡಿದ್ದಾರೆ. ‘ಹೊರಗೆ ಬಂದರೆ ಮತ್ತೆ ಪ್ರಭಾವ ಬಳಸಿ ಸಾಕ್ಷ್ಯ ನಾಶಕ್ಕೆ ಯತ್ನ ಮಾಡಬಹುದು. ರೌಡಿಶೀಟರ್​ಗಳು, ಪ್ರಭಾವಿಗಳ ಸಹಾಯದಿಂದ ಸಾಕ್ಷಿಗಳಿಗೆ ಬೆದರಿಕೆ ಹಾಕಿಸುವ ಸಾಧ್ಯತೆ. ಹೀಗಾಗಿ ದರ್ಶನ್​ಗೆ ಜಾಮೀನು ನೀಡಬಾರದು’ ಎಂದು ಪೊಲೀಸರು ಆಕ್ಷೇಪಣೆ ಸಲ್ಲಿಸೋ ಸಾಧ್ಯತೆ ಇದೆ.

(ವರದಿ: ಪ್ರದೀಪ್)

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:01 am, Sat, 14 September 24

ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು