AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Milana Krishna Marriage: ಪ್ರೇಮಿಗಳ ದಿನ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾದ ಕೃಷ್ಣ – ಮಿಲನಾ ಜೋಡಿ

Milana Nagaraj - Darling Krishna Wedding: ಬಹುಕಾಲದಿಂದ ಪ್ರೀತಿಯಲ್ಲಿರುವ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಫೆಬ್ರವರಿ 14ರಂದು ಹಸೆಮಣೆ ಏರಲಿದ್ದು, ಈಗಾಗಲೇ ವಿವಾಹ ಪೂರ್ವ ಪೂಜಾ ಕಾರ್ಯಕ್ರಮಗಳ ಕುರಿತಾದ ಕೆಲ ಫೋಟೋ, ವಿಡಿಯೋಗಳನ್ನು ಇಬ್ಬರೂ ಹಂಚಿಕೊಂಡಿದ್ದರು.

Milana Krishna Marriage: ಪ್ರೇಮಿಗಳ ದಿನ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾದ ಕೃಷ್ಣ - ಮಿಲನಾ ಜೋಡಿ
ಡಾರ್ಲಿಂಗ್​ ಕೃಷ್ಣ, ಮಿಲನಾ ನಾಗರಾಜ್​
Skanda
|

Updated on: Feb 13, 2021 | 12:59 PM

Share

ಈ ಬಾರಿ ಪ್ರೇಮಿಗಳ ದಿನಕ್ಕೆ ಚಂದನವನದ (Sandalwood) ಹೊಸ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದೆ. ಬಹುಕಾಲದಿಂದ ಪ್ರೀತಿಯಲ್ಲಿರುವ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ (Darling Krishna and Milana Nagaraj) ಫೆಬ್ರವರಿ 14ರಂದು ಹಸೆಮಣೆ ಏರಲಿದ್ದು, ಈಗಾಗಲೇ ವಿವಾಹ ಪೂರ್ವ ಪೂಜಾ ಕಾರ್ಯಕ್ರಮಗಳ ಕುರಿತಾದ ಕೆಲ ಫೋಟೋ, ವಿಡಿಯೋಗಳನ್ನು ಇಬ್ಬರೂ ಹಂಚಿಕೊಂಡಿದ್ದರು. ಲವ್​ ಮಾಕ್ಟೇಲ್ (Love Mocktail) ಚಿತ್ರದ ಮೂಲಕ ಮೋಡಿ ಮಾಡಿದ್ದ ಈ ಇಬ್ಬರೂ ನಿಜ ಜೀವನದಲ್ಲಿ ಒಂದಾಗುತ್ತಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ.

ಪ್ರೇಮಿಗಳ ದಿನಾಚರಣೆಯಂದೇ ಮದುವೆಯಾಗುವುದಾಗಿ ಇವರಿಬ್ಬರೂ ಕಳೆದ ವರ್ಷವೇ ಸುಳಿವು ನೀಡಿದ್ದರು. ನಂತರ ಅದು ಅಧಿಕೃತವಾಗಿ ಇದೀಗ ಅವರಿಬ್ಬರೂ ಒಂದಾಗುವ ಕಾಲ ಸನ್ನಿಹಿತವಾಗಿದೆ. ವಿವಾಹ ಕಾರ್ಯಕ್ರಮಕ್ಕೆ ಇವರಿಬ್ಬರೂ ಚಂದನವನದ ಅನೇಕ ನಟ, ನಟಿಯರನ್ನು ಆಹ್ವಾನಿಸಿದ್ದು, ಬಹುತೇಕರು ಮದುವೆ ಸಂಭ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಬೆಳಗ್ಗೆ 9.30 ರಿಂದ 10.30ರ ಕಾಲದಲ್ಲಿ ಧಾರೆ ಮುಹೂರ್ತ ಇದೆ ಎಂದು ತಿಳಿದುಬಂದಿದೆ. ಅಂತೆಯೇ, ಸಂಜೆ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: ಪ್ರೇಮಿಗಳ ದಿನದಂದೇ ಮಿಲನಾ ನಾಗರಾಜ್, ಡಾರ್ಲಿಂಗ್ ಕೃಷ್ಣ ಮದುವೆ

MILANA-NAGARAJ-DARLING-KRISHNA

ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ

ವಿವಾಹ ಪೂರ್ವ ಶಾಸ್ತ್ರಕ್ಕೆ ಸಂಬಂಧಿಸಿದಂತೆ ಡಾರ್ಲಿಂಗ್ ಕೃಷ್ಣ ಫೇಸ್​ಬುಕ್​ನಲ್ಲಿ ಅರಶಿನ ನೀರಿನಲ್ಲಿ ಸ್ನಾನ ಮಾಡುತ್ತಿರುವ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಇನ್ನು ಮಿಲನಾ ನಾಗರಾಜ್​ ಒಂದು ವಾರದ ಹಿಂದೆಯೇ ದೇಗುಲಕ್ಕೆ ಹೋಗಿ ಪೂಜೆ ಸಲ್ಲಿಸುತ್ತಿರುವ ವಿಡಿಯೋ ಒಂದನ್ನು ಹಂಚಿಕೊಂಡು, ನಮ್ಮ ವಿವಾಹಕ್ಕೆ ಸಂಬಂಧಿಸಿದ ಪೂಜಾ ಕಾರ್ಯಕ್ರಮ ಶುರುವಾಗಿದೆ ಎಂದು ಹೇಳಿಕೊಂಡಿದ್ದರು. ಸದ್ಯ ಮದುವೆಗೆ ಸಿದ್ಧವಾಗಿರುವ ಈ ಜೋಡಿ ಶೀಘ್ರದಲ್ಲೇ ಲವ್​ ಮಾಕ್ಟೇಲ್ 2 ಚಿತ್ರದ ಮೂಲಕ ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ