Milana Nagaraj: ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದಲ್ಲಿ ಸರ್ಪ್ರೈಸ್​ ಎಂಟ್ರಿ ನೀಡಿದ ಮಿಲನಾ ನಾಗರಾಜ್​; ಹೆಚ್ಚಿತು ನಿರೀಕ್ಷೆ

Kausalya Supraja Rama: ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ಡಾರ್ಲಿಂಗ್​ ಕೃಷ್ಣ ಮತ್ತು ಬೃಂದಾ ಆಚಾರ್ಯ ಜೊತೆ ಮಿಲನಾ ನಾಗರಾಜ್​ ಅವರಿಗೂ ಒಂದು ಮುಖ್ಯವಾದ ಪಾತ್ರವಿದೆ. ಆ ಪಾತ್ರದ ಬಗ್ಗೆ ಕೌತುಕ ಮೂಡಿದೆ.

Milana Nagaraj: ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದಲ್ಲಿ ಸರ್ಪ್ರೈಸ್​ ಎಂಟ್ರಿ ನೀಡಿದ ಮಿಲನಾ ನಾಗರಾಜ್​; ಹೆಚ್ಚಿತು ನಿರೀಕ್ಷೆ
ಮಿಲನಾ ನಾಗರಾಜ್​

Updated on: Jul 17, 2023 | 3:54 PM

ನಟಿ ಮಿಲನಾ ನಾಗರಾಜ್​ (Milana Nagaraj) ಅವರು ಕನ್ನಡ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ‘ಲವ್​ ಮಾಕ್ಟೇಲ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರ ಅದೃಷ್ಟ ಖುಲಾಯಿಸಿತು. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಅವರು ಅಭಿನಯಿಸುತ್ತಿದ್ದಾರೆ. ವಿಶೇಷ ಎಂದರೆ ಪತಿ ಡಾರ್ಲಿಂಗ್​ ಕೃಷ್ಣ (Darling Krishna) ಜೊತೆಗೂ ಅವರು ಅನೇಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಅದಕ್ಕೆ ಹೊಸ ಸೇರ್ಪಡೆ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ. ಶಶಾಂಕ್​ (Director Shashank) ನಿರ್ದೇಶನದ ಈ ಸಿನಿಮಾದಲ್ಲಿ ಮಿಲನಾ ನಾಗರಾಜ್​ ನಟಿಸಿದ್ದಾರೆ ಎಂದು ಮೊದಲೇ ತಿಳಿಸಿರಲಿಲ್ಲ. ಆದರೆ ಇತ್ತೀಚೆಗೆ ಬಿಡುಗಡೆ ಆದ ಟ್ರೇಲರ್​ನಲ್ಲಿ ಈ ವಿಚಾರ ರಿವೀಲ್​ ಆಯಿತು. ಅದರಿಂದಾಗಿ ಅಭಿಮಾನಿಗಳ ವಲಯದಲ್ಲಿ ಈ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ಡಾರ್ಲಿಂಗ್​ ಕೃಷ್ಣ ಅವರಿಗೆ ಜೋಡಿಯಾಗಿ ಬೃಂದಾ ಆಚಾರ್ಯ ನಟಿಸಿದ್ದಾರೆ. ಇಬ್ಬರ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ ‘ಶಿವಾನಿ..’ ಮತ್ತು ‘ಪ್ರೀತಿಸುವೆ..’ ಹಾಡುಗಳು ಗಮನ ಸೆಳೆದಿವೆ. ಈ ಚಿತ್ರದಲ್ಲಿ ಮಿಲನಾ ನಾಗರಾಜ್​ ಅವರಿಗೂ ಒಂದು ಮುಖ್ಯವಾದ ಪಾತ್ರವಿದೆ. ಆದರೆ ಆ ಪಾತ್ರದ ಬಗ್ಗೆ ಹೆಚ್ಚಿನ ವಿವರವನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಟ್ರೇಲರ್​ನ ಕೊನೆಯಲ್ಲಿ ಮಿಲನಾ ನಾಗರಾಜ್​ ಅವರು ಸ್ಟೈಲಿಶ್​ ಆಗಿ ಎಂಟ್ರಿ ನೀಡಿದ್ದಾರೆ. ಇದು ತ್ರಿಕೋನ ಪ್ರೇಮಕಥೆಯ ಸಿನಿಮಾ ಇರಬಹುದೇ ಎಂಬ ಪ್ರಶ್ನೆ ಕೂಡ ಅಭಿಮಾನಿಗಳಲ್ಲಿ ಮೂಡಿದೆ. ಚಿತ್ರ ಬಿಡುಗಡೆ ಆದಾಗ ಅದಕ್ಕೆ ಉತ್ತರ ಸಿಗಲಿದೆ.

ಕೌಸಲ್ಯ ಸುಪ್ರಜಾ ರಾಮ; ಸಿನಿಮಾ ಬಗ್ಗೆ ನಿರ್ಮಾಪಕ ಬಿಸಿ ಪಾಟೀಲ್ ಮಾತು

ಓರ್ವ ಅನುಭವಿ ನಟಿಯೇ ಈ ಪಾತ್ರವನ್ನು ಮಾಡಬೇಕು ಎಂಬುದು ನಿರ್ದೇಶಕ ಶಶಾಂಕ್​ ಅವರ ಆಶಯ ಆಗಿತ್ತು. ಆ ಪಾತ್ರಕ್ಕೆ ಮಿಲನಾ ನಾಗರಾಜ್​ ಅವರು ಸೂಕ್ತವಾಗಿ ಹೊಂದಿಕೆ ಆಗಿದ್ದಾರೆ ಎಂದು ಶಶಾಂಕ್​ ಹೇಳಿದ್ದಾರೆ. ತುಂಬ ಸೂಕ್ಷ್ಮವಾದ ಈ ಪಾತ್ರದ ಬಗ್ಗೆ ಪ್ರೇಕ್ಷಕರಿಗೆ ನಿರೀಕ್ಷೆ ಮೂಡಿದೆ. ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದ ಪ್ರೊಮೋಷನಲ್​ ವಿಡಿಯೋಗಳಲ್ಲಿ ಮಿಲನಾ ಅವರು ಕಾಣಿಸಿಕೊಂಡಿದ್ದಾರೆ. ಅವುಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಕೌಸಲ್ಯ ಸುಪ್ರಜಾ ರಾಮ; ಟ್ರೈಲರ್ ಬಿಡುಗಡೆ: ಪುರುಷ ಅಹಂಕಾರದ ಸುತ್ತ ಪ್ರೇಮಕತೆ

‘ಕೌರವ ಪ್ರೊಡಕ್ಷನ್ ಹೌಸ್​’ ಮತ್ತು ‘ಶಶಾಂಕ್​ ಸಿನಿಮಾಸ್​’ ಮೂಲಕ ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರ ನಿರ್ಮಾಣ ಆಗಿದೆ. ಡಾರ್ಲಿಂಗ್​ ಕೃಷ್ಣ, ಮಿಲನಾ ನಾಗರಾಜ್​, ಬೃಂದಾ ಆಚಾರ್ಯ ಜೊತೆ ನಾಗಭೂಷಣ, ರಂಗಾಯಣ ರಘು, ಸುಧಾ ಬೆಳವಾಡಿ, ಅಚ್ಯುತ್​ ಕುಮಾರ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

Kousalya Supraja Rama - Official Trailer | Darling Krishna | Shashank | Arjun Janya

ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ ಈ ಚಿತ್ರ ಜುಲೈ 28ರಂದು ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:53 pm, Mon, 17 July 23

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us