AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲವ್​ ಮಾಕ್ಟೇಲ್​ 2’ ಸಿನಿಮಾ ರಿಲೀಸ್​ ಯಾವಾಗ? ವಿಶೇಷ ದಿನಾಂಕದ ಮೇಲೆ ಅಭಿಮಾನಿಗಳ ನಿರೀಕ್ಷೆ

Love Mocktail 2 Release Date: ‘ಲವ್​ ಮಾಕ್ಟೇಲ್​ 2’ ಸಿನಿಮಾದ ರಿಲೀಸ್​ ದಿನಾಂಕವನ್ನು ಇಂದು (ಡಿ.18) ಘೋಷಿಸುವುದಾಗಿ ಮಿಲನಾ ನಾಗರಾಜ್​ ತಿಳಿಸಿದ್ದಾರೆ. ಪ್ರೇಕ್ಷಕರ ಊಹೆ ಏನು ಎಂಬ ಪ್ರಶ್ನೆಯನ್ನೂ ಅವರು ಕೇಳಿದ್ದಾರೆ.

‘ಲವ್​ ಮಾಕ್ಟೇಲ್​ 2’ ಸಿನಿಮಾ ರಿಲೀಸ್​ ಯಾವಾಗ? ವಿಶೇಷ ದಿನಾಂಕದ ಮೇಲೆ ಅಭಿಮಾನಿಗಳ ನಿರೀಕ್ಷೆ
ಡಾರ್ಲಿಂಗ್​ ಕೃಷ್ಣ, ಮಿಲನಾ ನಾಗರಾಜ್​
Follow us
TV9 Web
| Updated By: ಮದನ್​ ಕುಮಾರ್​

Updated on: Dec 18, 2021 | 9:39 AM

2020ರ ಆರಂಭದಲ್ಲಿ ರಿಲೀಸ್​ ಆದ ‘ಲವ್​ ಮಾಕ್ಟೇಲ್​’ ಸಿನಿಮಾ ಸೂಪರ್​ ಹಿಟ್​ ಆಯಿತು. ನಟಿ ಮಿಲನಾ ನಾಗರಾಜ್​ (Milana Nagaraj) ಮತ್ತು ಡಾರ್ಲಿಂಗ್​ ಕೃಷ್ಣ (Darling Krishna) ಜೋಡಿಯಾಗಿ ಅಭಿನಯಿಸಿದ ಆ ಸಿನಿಮಾ ಜನಮೆಚ್ಚುಗೆ ಪಡೆದುಕೊಂಡಿತು. ನಂತರ ಓಟಿಟಿ ಪ್ಲಾಟ್​ಫಾರ್ಮ್​ನಲ್ಲೂ ರಿಲೀಸ್​ ಆಗಿ ಗಮನ ಸೆಳೆಯಿತು. ಆ ಯಶಸ್ಸಿನ ಪ್ರೋತ್ಸಾಹದಿಂದಾಗಿ ‘ಲವ್​ ಮಾಕ್ಟೇಲ್​ 2’ ಸಿನಿಮಾ ಘೋಷಣೆ ಮಾಡಲಾಯಿತು. ಬಹುತೇಕ ಅದೇ ತಂಡವೇ ಸೇರಿಕೊಂಡು ಸೀಕ್ವೆಲ್​ ಮಾಡಿದೆ. ಡಾರ್ಲಿಂಗ್ ಕೃಷ್ಣ ಅವರ ನಿರ್ದೇಶನದಲ್ಲಿ ‘ಲವ್​ ಮಾಕ್ಟೇಲ್​ 2’ (Love Mocktail 2) ಮೂಡಿಬರುತ್ತಿದೆ. ಹಾಗಾದರೆ ಈ ಚಿತ್ರದ ಬಿಡುಗಡೆ ಯಾವಾಗ? ಈ ಕೌತುಕದ ಪ್ರಶ್ನೆಗೆ ಇಂದು (ಡಿ.18) ಸಂಜೆ ಉತ್ತರ ಸಿಗಲಿದೆ. ಅದಕ್ಕೂ ಮುನ್ನ ಸಿನಿಪ್ರಿಯರು ಅನೇಕ ದಿನಾಂಕಗಳನ್ನು ಊಹಿಸುತ್ತಿದ್ದಾರೆ.

ನಟಿ ಮಿಲನಾ ನಾಗರಾಜ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಒಂದು ಪೋಸ್ಟ್​ ಮಾಡಿದ್ದಾರೆ. ‘ಲವ್​ ಮಾಕ್ಟೇಲ್​ 2’ ಸಿನಿಮಾದ ರಿಲೀಸ್​ ದಿನಾಂಕವನ್ನು ಡಿ.18ರಂದು ಘೋಷಿಸುವುದಾಗಿ ಅವರು ತಿಳಿಸಿದ್ದಾರೆ. ಪ್ರೇಕ್ಷಕರ ಊಹೆ ಏನು ಎಂಬ ಪ್ರಶ್ನೆಯನ್ನೂ ಅವರು ಕೇಳಿದ್ದಾರೆ. ಅದಕ್ಕೆ ನೆಟ್ಟಿಗರು ಹಲವು ಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ. ಬಹುತೇಕರು ಕಣ್ಣಿಟ್ಟಿರುವುದು ಫೆ.14ರ ಮೇಲೆ.

ಶೀರ್ಷಿಕೆಯೇ ಸೂಚಿಸುವಂತೆ ಇದು ಲವ್​ ಸ್ಟೋರಿ ಸಿನಿಮಾ. ಪ್ರೇಮಿಗಳಿಗೆ ಸೂಕ್ತವಾಗುವಂತಹ ಕಥೆಯನ್ನು ನಿರೀಕ್ಷಿಸಲಾಗುತ್ತಿದೆ. ಹಾಗಾಗಿ ಫೆ.14ರ ಪ್ರೇಮಿಗಳ ದಿನದಂದು ಈ ಸಿನಿಮಾ ರಿಲೀಸ್​ ಆಗಬಹುದು ಎಂದು ಸಿನಿಪ್ರಿಯರು ಊಹಿಸುತ್ತಿದ್ದಾರೆ. ಆದರೆ ನಿಜವಾದ ದಿನಾಂಕ ಯಾವುದು ಎಂದು ಚಿತ್ರತಂಡದವರೇ ಮಾಹಿತಿ ನೀಡಬೇಕಿದೆ. ‘ಲವ್​ ಮಾಕ್ಟೇಲ್​ 2’ ಚಿತ್ರಕ್ಕೆ ನಕುಲ್​ ಅಭ್ಯಂಕರ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಹಾಡುಗಳು ಕೇಳುಗರಿಗೆ ಇಷ್ಟ ಆಗಿವೆ. ಚಿತ್ರದ ಸೆನ್ಸಾರ್​ ಪ್ರಕ್ರಿಯೆ ಕೂಡ ಮುಗಿದಿದೆ. ಸೆನ್ಸಾರ್​ ಮಂಡಳಿಯಿಂದ ‘ಯು’ ಪ್ರಮಾಣ ಪತ್ರ ಸಿಕ್ಕಿದೆ.

‘ಲವ್​ ಮಾಕ್ಟೇಲ್​’ ಯಶಸ್ಸಿನ ಬಳಿಕ ಡಾರ್ಲಿಂಗ್​ ಕೃಷ್ಣ ಮತ್ತು ವಿಲನಾ ನಾಗರಾಜ್​ ಅವರ ಚಾರ್ಮ್​ ಹೆಚ್ಚಿತು. ಹಲವು ಕಾಲದಿಂದ ಪ್ರೀತಿಸುತ್ತಿದ್ದ ಅವರು ದಾಂಪತ್ಯ ಜೀವನಕ್ಕೂ ಕಾಲಿಟ್ಟರು. ಈಗ ಅವರ ಕೈಯಲ್ಲಿ ಹಲವು ಸಿನಿಮಾ ಆಫರ್​ಗಳಿವೆ. ಅದರ ನಡುವೆ ಅವರು ‘ಲವ್​ ಮಾಕ್ಟೇಲ್​ 2’ ಚಿತ್ರದ ಕೆಲಸಗಳನ್ನು ಮುಗಿಸಿದ್ದಾರೆ. ರಚನಾ ಇಂದರ್​, ರೇಚಲ್​ ಡೇವಿಡ್​ ಮುಂತಾದವರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ:

ಮದುವೆ ಬಳಿಕ ಹೇಗಿದೆ ಮಿಲನಾ-ಡಾರ್ಲಿಂಗ್​ ಕೃಷ್ಣ ದಂಪತಿಯ ಸಿನಿಮಾ ಜರ್ನಿ ಮತ್ತು ಜೀವನ?

ವೂಟ್​ ಸೆಲೆಕ್ಟ್​ನಲ್ಲಿ ಬರಲಿದೆ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್​’ ವೆಬ್​ ಸಿರೀಸ್​; ಗಮನ ಸೆಳೆದ ಟೀಸರ್​

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ