‘ರಂಗಸಮುದ್ರ’ಕ್ಕೆ ಹಾಡಿದ ಕೀರವಾಣಿ, ಸ್ಯಾಂಡಲ್​ವುಡ್​ನಲ್ಲಿ ಕೀರವಾಣಿಯ ಆತ್ಮೀಯ ಗೆಳೆಯರ್ಯಾರು ಗೊತ್ತೆ?

MM Keeravani: ಕನ್ನಡದ ರೆಟ್ರೋ ಸಿನಿಮಾ ‘ರಂಗಸಮುದ್ರ’ಕ್ಕೆ ಆಸ್ಕರ್ ವಿಜೇತ ಸಂಗೀತ ನಿರ್ದೇಶಕ, ಗಾಯಕ ಎಂಎಂ ಕೀರವಾಣಿ ಹಾಡೊಂದನ್ನು ಹಾಡಿದ್ದಾರೆ. ಈ ಸಮಯದಲ್ಲಿ ಕನ್ನಡ, ಬೆಂಗಳೂರಿನ ತಮ್ಮ ನಂಟಿನ ಬಗ್ಗೆ ಮಾತನಾಡಿದ್ದಾರೆ. ಅಂದಹಾಗೆ ಕನ್ನಡ ಚಿತ್ರರಂಗದಲ್ಲಿ ಕೀರವಾಣಿಯವರ ಆತ್ಮೀಯ ಗೆಳೆಯ ಯಾರು ಗೊತ್ತೆ?

‘ರಂಗಸಮುದ್ರ’ಕ್ಕೆ ಹಾಡಿದ ಕೀರವಾಣಿ, ಸ್ಯಾಂಡಲ್​ವುಡ್​ನಲ್ಲಿ ಕೀರವಾಣಿಯ ಆತ್ಮೀಯ ಗೆಳೆಯರ್ಯಾರು ಗೊತ್ತೆ?
ಎಂಎಂ ಕೀರವಾಣಿ
Follow us
ಮಂಜುನಾಥ ಸಿ.
|

Updated on: Dec 23, 2023 | 5:03 PM

ಹೊಸ ವರ್ಷದ (New Year) ಆದಿಯಲ್ಲಿ ಕನ್ನಡ ಸಿನಿಮಾ ‘ರಂಗಸಮುದ್ರ’ ಬಿಡುಗಡೆ ಆಗಲಿದೆ. ಸಿನಿಮಾವು ರೆಟ್ರೋ ಕತೆ ಆಧರಿಸಿದೆ. ಸಿನಿಮಾದ ಮೂರು ಹಾಡುಗಳು ಜಂಕಾರ್ ಮ್ಯೂಸಿಕ್ ಯುಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಗೊಂಡು ಸಂಗೀತ ಪ್ರಿಯರ ಮನಸ್ಸು ಗೆದ್ದಿವೆ. ಇದೀಗ ಈ ಸಿನಿಮಾಕ್ಕೆ ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎಂಎಂ ಕೀರವಾಣಿಯ ಬಲವೂ ದೊರೆತಿದೆ. ಪದ್ಮಶ್ರೀ, ರಾಷ್ಟ್ರ ಪ್ರಶಸ್ತಿ ಹಾಗೂ ವಿಶ್ವದ ಅತ್ಯಂತ ಪ್ರಮುಖ ಪ್ರಶಸ್ತಿಯಾದ ಆಸ್ಕರ್ ವಿಜೇತ ‘ಬಾಹುಬಲಿ’ ಹಾಗೂ ‘ಆರ್​ಆರ್​ಆರ್’ ಚಿತ್ರಗಳ ಸಂಗೀತ ಮಾಂತ್ರಿಕ ನಿರ್ದೇಶಕ ಎಮ್.ಎಮ್ ಕೀರವಾಣಿ ಅವರಿಂದ ಸಿನಿಮಾಕ್ಕಾಗಿ ಒಂದು ಹಾಡು ಹಾಡಿಸಲಾಗಿದೆ.

ಎಂ ಎಂ ಕೀರವಾಣಿ ಅವರಿಗೆ ಕನ್ನಡ ಚಿತ್ರರಂಗ ಹೊಸದೇನೂ ಅಲ್ಲ. ಆದರೆ ದಶಕಗಳ‌ ನಂತರ “ರಂಗಸಮುದ್ರ” ಚಿತ್ರದ ಮೂಲಕ ಕನ್ನಡಕ್ಕೆ ಮರಳಿದ್ದಾರೆ. ‘ರಂಗಸಮುದ್ರ’ ಸಿನಿಮಾಕ್ಕೆ ಗೀತೆಯೊಂದನ್ನು ಹಾಡಿರುವುದು ಚಿತ್ರತಂಡದ ಆತ್ಮವಿಶ್ವಾಸ ಹೆಚ್ಚಿಸಿದಂತಾಗಿದೆ. ‘ರಂಗಸಮುದ್ರ’ ಸಿನಿಮಾದ ನಿರ್ದೇಶಕ ರಾಜ್ ಕುಮಾರ್ ಅಸ್ಕಿ , ಸಾಹಿತಿ ವಾಗೀಶ್ ಚನ್ನಗಿರಿ ಹಾಗೂ ಸಂಗೀತ ನಿರ್ದೇಶಕ ದೇಸಿ ಮೋಹನ್ ರವರು ಈ ಒಂದು ಗೀತೆಗೆ ಎಮ್ ಎಮ್ ಕೀರಾವಣಿಯವರೆ ದನಿಯಾಗಬೇಕು ಎಂದು ಚಿತ್ರದ ನಿರ್ಮಾಪಕ ಹೊಯ್ಸಳ ಕೊಣನೂರು ಅವರ ಬಳಿ ಹೇಳಿಕೊಂಡಿದ್ದರಂತೆ. ಚಿತ್ರತಂಡದ ಆಸೆಯಂತೆ ನಿರ್ಮಾಪಕರು ಕೀರವಾಣಿ ಅವರನ್ನು ಸಂಪರ್ಕಿಸಿದಾಗ ಪ್ರೀತಿಯಿಂದ ಹೈದಾರಬಾದ್ ಗೆ ಆಹ್ವಾನಿಸಿದರು ಎಂದಿದ್ದಾರೆ.

ಸಾಂಗ್ ಅನ್ನು ಒಮ್ಮೆ ಕೇಳಿದ ನಂತರ, ನಾನು ಸೀನಿಯರ್ ಎಂಬುದನ್ನು ಬದಿಗಿಟ್ಟು , ಚಿತ್ರದ ಕಥೆ ಹೇಳಿ ಎಂದು ನಗುತ್ತ ಡೈರೆಕ್ಟರ್ ಗೆ ಹೇಳಿದ್ದಾರೆ ಕಥೆ ಕೇಳಿದ 5 ನಿಮಿಷಕ್ಕೆ ಹಾಡಲು ಒಪ್ಪಿದರು ಎಂದು ವಿವರಿಸಿದ್ದಾರೆ ನಿರ್ದೇಶಕ ರಾಜಕುಮಾರ್ ಅಸ್ಕಿ. ಇನ್ನು ಹಾಡಲು ಸಿದ್ದರಾಗುವಾಗ ಗೀತೆಯನ್ನು ಕನ್ನಡದಲ್ಲೆ ಬರೆದುಕೊಂಡು, ಬಹಳ‌ ಸುಮಧುರ ವಾಗಿ ಹಾಡಿ ಕನ್ನಡ ಭಾಷೆ ಮೇಲಿರುವ ಅಭಿಮಾನವನ್ನು ಸಾಬೀತುಪಡಿಸಿದರು ಎಂದಿದ್ದಾರೆ ರಾಜಕುಮಾರ್ ಅಸ್ಕಿ.

ಇದನ್ನೂ ಓದಿ:‘ಆ ಸಿನಿಮಾಗೆ ಸಂಗೀತ ಸಂಯೋಜನೆ ಮಾಡುವಾಗ ನಿದ್ದೆ ಬಂದಿಲ್ಲ’; ದೆವ್ವದ ಚಿತ್ರಕ್ಕೆ ಹೆದರಿದ್ರಾ ಕೀರವಾಣಿ?

ಸರಿಸುಮಾರು ಅರ್ಧ ದಿನ ಚಿತ್ರತಂಡದೊಂದಿಗೆ ಮಾತನಾಡುತ್ತ ಕುಳಿತ ಎಮ್ ಎಮ್ ಕೀರವಾಣಿಯವರು, ಅವರ ಮತ್ತು ಕನ್ನಡ ನಂಟು ಹಾಗೂ ಬೆಂಗಳೂರಿನಲ್ಲಿ ಒಂದು ಚಿಕ್ಕ ರೂಮಿನಲ್ಲಿ ವಾಸ ಮಾಡುತ್ತಿದ್ದದ್ದು, ಚಾಮುಂಡೇಶ್ವರಿ ಸ್ಟುಡಿಯೋ ಇಂದ ತನ್ನ ಸಿನಿಪಯಣ ಶುರುವಾಗಿದ್ದು. ನನ್ನ ಆಪ್ತ ಸ್ನೇಹಿತ ದೊಡ್ಡಣ್ಣ ಎನ್ನುತ್ತಾ ಹಲವಾರು ವಿಷಯಗಳನ್ನು ಹಂಚಿಕೊಂಡರಂತೆ. ಚಿತ್ರದ ಶೂಟಿಂಗ್ ಬಗ್ಗೆ ಮಾತನಾಡುತ್ತಾ ಅಪ್ಪುರವರು ನಟಿಸಬೇಕಿದ್ದ ಸಿನಿಮಾ ‘ರಂಗಸಮುದ್ರ’ ಎಂದು ತಿಳಿದಾಗ ಭಾವುಕರಾಗಿ, ಅಪ್ಪು ಒಬ್ಬ ಅಜಾತಶತ್ರು ಈಗ ನಕ್ಷತ್ರವಾಗಿ ಮಿನುಗುತ್ತಿದ್ದಾರೆ, ಒಬ್ಬರು ಸತ್ತರೆ ಶತ್ರುಗು ಕೂಡ ಕಣ್ಣಿರು ಬರಬೇಕು ಅದರಂತೆಯೆ ಈ ಸಾಂಗ್ ನೋಡಿದ ಮೇಲೆ ಎಂತಹ ಕಲ್ಲು ಮನಸ್ಸು ಕೂಡ ಕರಗುತ್ತೆ ಎಂದಿದ್ದಾರೆ.

‘ರಂಗಸಮುದ್ರ’ ಸಿನಿಮಾದಲ್ಲಿ ರಾಘವೇಂದ್ರ ರಾಜ್ ಕುಮಾರ್, ರಂಗಾಯಣ ರಘು, ಸಂಪತ್ ರಾಜ್, ದಿವಂಗತ ಮೋಹನ್ ಜುನೇಜಾ, ಮೂಗು ಸುರೇಶ್, ಗುರುರಾಜ್ ಹೊಸಕೋಟೆ, ಉಗ್ರಂ ಮಂಜು, ಕಾರ್ತಿಕ್ ರಾವ್, ದಿವ್ಯ ಗೌಡ, ಮಹೇಂದ್ರ, ಸ್ಕಂದ ಅವರ ತಾರಾ ಬಳಗವನ್ನು ಹೊಂದಿದೆ. ಚಿತ್ರದಲ್ಲಿ‌ರುವ 4 ಗೀತೆಗಳಿಗೆ ಖ್ಯಾತ ಗಾಯಕರಾದ ಕೈಲಾಶ್ ಖೇರ್, ವಿಜಯ್ ಪ್ರಕಾಶ್, ಸಂಜಿತ್ ಹೆಗ್ಡೆ, ದೇಸಿ ಮೋಹನ್ ಅವರು ದನಿಯಾಗಿದ್ದರೆ, ಚಿತ್ರದಲ್ಲಿ ಎರಡು ಬಿಟ್ ಗಳಿಗೆ ನವೀನ್ ಸಜ್ಜು ರವರು ದನಿಯಾಗಿದ್ದಾರೆ. ರೆಟ್ರೋ ಕಥಾ ಹಂದರದ ಈ ಸಿನಿಮಾ ಜನವರಿ 12ರಂದು ರಾಜ್ಯದಾದ್ಯಂತ ಬಿಡುಗಡೆಗೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ