Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೌಂದರ್ಯಾ ಸಾವು ಆಕಸ್ಮಿಕವಲ್ಲ, ಕೊಲೆ ಮಾಡಿದ್ದು ಮೋಹನ್ ಬಾಬು’; 21 ವರ್ಷಗಳ ಬಳಿಕ ದಾಖಲಾಯ್ತು ದೂರು

ನಟಿ ಸೌಂದರ್ಯಾ ಅವರ 2004ರ ವಿಮಾನ ಅಪಘಾತದಲ್ಲಿ ಮೃತಪಟ್ಟರು. ಈ ಸಾವಿನಲ್ಲಿ 21 ವರ್ಷಗಳ ಬಳಿಕ ಮೋಹನ್ ಬಾಬು ಅವರ ಪಾತ್ರದ ಬಗ್ಗೆ ಆರೋಪಗಳು ಕೇಳಿಬಂದಿವೆ. ಚಿಟ್ಟಿಮಲ್ಲು ಎಂಬುವವರು ದೂರು ದಾಖಲಿಸಿದ್ದು, ಜಾಗದ ವಿವಾದದ ಕಾರಣ ಸೌಂದರ್ಯಾ ಮತ್ತು ಅವರ ಸಹೋದರ ಅಮರನಾಥ್ ಅವರನ್ನು ಕೊಲ್ಲಲಾಗಿದೆ ಎಂದು ಆರೋಪಿಸಿದ್ದಾರೆ.

‘ಸೌಂದರ್ಯಾ ಸಾವು ಆಕಸ್ಮಿಕವಲ್ಲ, ಕೊಲೆ ಮಾಡಿದ್ದು ಮೋಹನ್ ಬಾಬು’; 21 ವರ್ಷಗಳ ಬಳಿಕ ದಾಖಲಾಯ್ತು ದೂರು
ಸೌಂದರ್ಯಾ-ಮೋಹನ್ ಬಾಬು
Follow us
ರಾಜೇಶ್ ದುಗ್ಗುಮನೆ
|

Updated on:Mar 12, 2025 | 9:44 AM

ನಟಿ ಸೌಂದರ್ಯಾ (Soundarya) ಅವರು 2004ರ ಏಪ್ರಿಲ್ 17ರಂದು ನಿಧನ ಹೊಂದಿದರು. ಅವರು ಏರಿದ್ದ ಖಾಸಗಿ ವಿಮಾನ ಟೇಕಾಫ್ ಆದ ಕೆಲವೇ ಗಂಟೆಗಳಲ್ಲಿ ಹೊತ್ತಿ ಉರಿಯಿತು. ಅವರ ಜೊತೆ ಸಹೋದರ ಅಮರನಾಥ್ ಕೂಡ ನಿಧನ ಹೊಂದಿದರು. ಈ ಘಟನೆ ನಡೆದು 21 ವರ್ಷಗಳು ಕಳೆದಿವೆ. ಈಗ ಟಾಲಿವುಡ್​ನ ಖ್ಯಾತ ನಟ, ನಿರ್ಮಾಪಕ ಮೋಹನ್ ಬಾಬು ವಿರುದ್ಧ ದೂರು ದಾಖಲಾಗಿದೆ. ಸೌಂದರ್ಯಾ ಸಾವಿನ ಹಿಂದೆ ಇವರ ಕೈವಾಡ ಇದೆ ಎಂದು ಆರೋಪಿಸಲಾಗಿದೆ. ಈ ವಿಚಾರ ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ.

ಕೌಟುಂಬಿಕ ಸಮಸ್ಯೆ ಕಾರಣದಿಂದ ಮೋನ್ ಬಾಬು ಸಾಕಷ್ಟು ಸಮಸ್ಯೆ ಎದುರಿಸಿದ್ದರು. ಈಗ ಅವರು ಸೌಂದರ್ಯಾ ಸಾವಿನ ಪ್ರಕರಣದಲ್ಲಿ ಸಮಸ್ಯೆ ಎದುರಿಸಿದ್ದಾರೆ. ಆಂಧ್ರ ಪ್ರದೇಶದ ಖಮ್ಮಾಮ್ ಜಿಲ್ಲೆಯಲ್ಲಿ ಮೋಹನ್ ಬಾಬು ವಿರುದ್ಧ ದೂರು ದಾಖಲಾಗಿದೆ. ಸೌಂದರ್ಯಾ ಸಾವಿನ ಹಿಂದೆ ಮೋಹನ್ ಬಾಬು ಕೈವಾಡ ಇದೆ ಎಂದು ದೂರಲಾಗಿದೆ. ಚಿಟ್ಟಿಮಲ್ಲು ಎಂಬುವವರು ಈ ದೂರು ನೀಡಿದ್ದಾರೆ.

‘ಸೌಂದರ್ಯಾ ಅವರದ್ದು ಆಕಸ್ಮಿಕ ಸಾವಲ್ಲ, ಇದೊಂದು ನಿಯೋಜಿತ ಕೊಲೆ. ಜಾಗದ ವಿಚಾರದಲ್ಲಿ ಈ ಕೊಲೆ ನಡೆದಿದೆ. ಸೌಂದರ್ಯಾ ಹಾಗೂ ಅವರ ಸಹೋದರ ಅಮರನಾಥ್ ಶಂಶಾಬಾದ್​ನಲ್ಲಿರುವ ಆರು ಎಕರೆ ಜಾಗವನ್ನು ಹೊಂದಿದ್ದರು. ಇದನ್ನು ತಮಗೆ ಕೊಡುವಂತೆ ಮೋಹನ್ ಬಾಬು ಕೇಳುತ್ತಿದ್ದರು. ಇದನ್ನು ಮಾರಲು ಸೌಂದರ್ಯಾ ನಿರಾಕರಿಸಿದ್ದರು. ಇದರಿಂದ ಈ ಕೊಲೆ ನಡೆದಿದೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ
Image
ಸುಮಲತಾ-ದರ್ಶನ್ ಮಧ್ಯೆ ಬಿರುಕು? ಈ ಬೆಳವಣಿಗೆ ನೋಡಿದ್ರೆ ನೀವೂ ಒಪ್ತೀರಿ
Image
ಅಕ್ಕನ ಮಗನನ್ನೇ ‘ಡೆವಿಲ್’ ಚಿತ್ರದಿಂದ ಹೊರಗಿಟ್ಟ ದರ್ಶನ್; ಕಾರಣ ನೀಡಿದ ನಟ
Image
ಚಂದನ್ ಶೆಟ್ಟಿ ಜೊತೆ ಮತ್ತೆ ಬಾಳುತ್ತೀರಾ? ನೇರವಾಗಿ ಉತ್ತರ ನೀಡಿದ ನಿವೇದಿತಾ
Image
ಮತ್ತೆ ಚಂದನ್ ಶೆಟ್ಟಿ ತಬ್ಬಿಕೊಂಡು ಕಣ್ಣೀರು ಹಾಕಿದ ನಿವೇದಿತಾ ಗೌಡ

ಇದನ್ನೂ ಓದಿ: ನಟಿ ಸೌಂದರ್ಯಾ ಇನ್ನಿಲ್ಲ ಅನ್ನೋದು ನಂಬಲಾಗದೇ ರಮೇಶ್ ಅರವಿಂದ್ ಏನು ಮಾಡಿದ್ರು ಗೊತ್ತಾ?

ಸೌಂದರ್ಯಾ ಅವರ ಸಾವಿನ ಬಳಿಕ ಈ ಜಾಗ ಮಾರುವಂತೆ ಅವರ ಕುಟುಂಬದವರಿಗೆ ಮೋಹನ್ ಬಾಬು ಒತ್ತಡ ಹೇರಿದ್ದಾರೆ ಎಂದು ದೂರನಲ್ಲಿ ತಿಳಿಸಲಾಗಿದೆ. ಆ ಬಳಿಕ ಮೋಹನ್ ಬಾಬು ಅವರು ಅಕ್ರಮವಾಗಿ ಈ ಜಾಗವನ್ನು ಪಡೆದುಕೊಂಡರು ಎನ್ನಲಾಗಿದೆ. ಸದ್ಯ ದೂರು ನೀಡಿದ ಚಿಟ್ಟಿಮಲ್ಲು ತಮಗೆ ಪೊಲೀಸ್ ರಕ್ಷಣೆ ಬೇಕು ಎಂದು ಕೋರಿದ್ದಾರೆ. ಅಲ್ಲದೆ ಈ ಜಾಗವನ್ನು ಸರ್ಕಾರದವರು ವಶಕ್ಕೆ ಪಡೆದು ಅಗತ್ಯ ಇರುವ ವೃದ್ಧಾಶ್ರಮದವರಿಗೆ ನೀಡುವಂತೆ ಕೋರಿದ್ದಾರೆ.

ಸೌಂದರ್ಯಾ ಅವರು ಕನ್ನಡ ಸಿನಿಮಾಗಳನ್ನು ಮಾಡಿ ಗಮನ ಸೆಳೆದರು. ಅವರು ‘ಆಪ್ತಮಿತ್ರ’ ಚಿತ್ರದಲ್ಲಿ ಮಾಡಿದ ನಾಗವಲ್ಲಿ ಪಾತ್ರ ಯಾವಾಗಲೂ ನೆನಪಿನಲ್ಲಿ ಇರುವಂಥದ್ದು. ಅವರು ನಿಧನ ಹೊಂದುವಾಗ ಕೇವಲ 31 ವರ್ಷ ವಯಸ್ಸಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:47 am, Wed, 12 March 25

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!