ಖ್ಯಾತ ನಟ ಮೋಹನ್ ಜುನೇಜ (Mohan Juneja Death) ನಿಧನದಿಂದ ಅವರ ಕುಟುಂಬದವರು ಮತ್ತು ಅಭಿಮಾನಿಗಳಿಗೆ ದುಃಖ ಆವರಿಸಿದೆ. ಪ್ರತಿಭಾವಂತ ಕಲಾವಿದನ ಅಗಲಿಕೆಗೆ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ. ಮೋಹನ್ ಜುನೇಜ ಅವರ ಕಣ್ಣುಗಳನ್ನು ದಾನ (Eye Donation) ಮಾಡಲಾಗಿದೆ. ಆ ಮೂಲಕ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಡಾ. ರಾಜ್ಕುಮಾರ್, ಪುನೀತ್ ರಾಜ್ಕುಮಾರ್ ಸೇರಿದಂತೆ ಅನೇಕ ಕಲಾವಿದರು ಈ ವಿಚಾರದಲ್ಲಿ ಮಾದರಿ. ಅವರ ಸಾಲಿಗೆ ಮೋಹನ್ ಜುನೇಜ ಕೂಡ ಸೇರಿದ್ದಾರೆ. ಅವರ ಕಣ್ಣುಗಳಿಂದ ಅಂಧರ ಬಾಳಿಗೆ ಬೆಳಕು ಬರಲಿದೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಮೋಹನ್ ಜುನೇಜ ಅವರು ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಹೆಸರಘಟ್ಟ ರಸ್ತೆಯ ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಆಗದೇ ಶುಕ್ರವಾರ (ಮೇ 6) ರಾತ್ರಿ ಅವರು ನಿಧನರಾದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ. ‘ಕೆಜಿಎಫ್’ ಸಿನಿಮಾದಲ್ಲಿ ಅವರು ಮಾಡಿದ್ದ ಚಿಕ್ಕ ಪಾತ್ರ ಫೇಮಸ್ ಆಗಿತ್ತು. ಮೋಹನ್ ಜುನೇಜ (Mohan Juneja) ಅವರ ನಿಧನಕ್ಕೆ ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆ ಕೂಡ ಕಂಬನಿ ಮಿಡಿದಿದ್ದು, ಶ್ರದ್ಧಾಂಜಲಿ ಅರ್ಪಿಸಲಾಗಿದೆ.
‘ಕನ್ನಡದ ಖ್ಯಾತ ಹಾಸ್ಯ ನಟರಾದ ಮೋಹನ್ ಜುನೇಜ ಅವರ ಆತ್ಮಕ್ಕೆ ಶಾಂತಿ ಸಿಗಲಿ. ನಮ್ಮ ಕೆಜಿಎಫ್ ಚಿತ್ರತಂಡದ ಜತೆಗಿನ ಅವರ ಅವಿನಾಭಾವ ಸಂಬಂಧ ಮರೆಯಲಾರೆವು. ಕನ್ನಡ ಚಿತ್ರರಂಗದಲ್ಲಿ ಅವರು ಜನಪ್ರಿಯರಾಗಿದ್ದರು. ಅವರ ಕುಟುಂಬದವರಿಗೆ, ಸ್ನೇಹಿತರಿಗೆ ಮತ್ತು ಹಿತೈಷಿಗಳಿಗೆ ನಮ್ಮ ಸಾಂತ್ವನಗಳು’ ಎಂದು ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆ ಟ್ವೀಟ್ ಮಾಡಿದೆ.
ಕನ್ನಡದ ಖ್ಯಾತ ಹಾಸ್ಯ ನಟರಾದ ಮೋಹನ್ ಜುನೇಜಾ ಅವರ ಆತ್ಮಕ್ಕೆ ಶಾಂತಿ ಸಿಗಲಿ.
ನಮ್ಮ ಕೆಜಿಎಫ್ ಚಿತ್ರ ತಂಡದ ಜತೆಗಿನ ಅವರ ಅವಿನಾಭಾವ ಸಂಬಂಧ ಮರೆಯಲಾರೆವು.
Our heartfelt Condolences to actor Mohan Juneja’s family, friends & well-wishers. He was one of the best-known faces in Kannada films & our KGF family. pic.twitter.com/xDDHanWuY0
— Hombale Films (@hombalefilms) May 7, 2022
ಮೋಹನ್ ಜುನೇಜ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅವರ ತಾಯಿ ಸೇರಿದಂತೆ ಕುಟುಂಬದ ಇನ್ನಿತರ ಸದಸ್ಯರು ಕಣ್ಣೀರು ಹಾಕುವ ದೃಶ್ಯ ಮನ ಕಲಕುವಂತಿದೆ. ಹೊನ್ನಾವಳಿ ಕೃಷ್ಣ, ಡಿಂಗ್ರಿ ನಾಗರಾಜ್ ಸೇರಿದಂತೆ ಚಿತ್ರರಂಗ ಅನೇಕ ಸ್ನೇಹಿತರು ಬಂದು ಮೋಹನ್ ಜುನೇಜ ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಇಂದು (ಮೇ 7) ಮಧ್ಯಾಹ್ನ ತಮ್ಮೇನಹಳ್ಳಿ ಗ್ರಾಮದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ನೂರಾರು ಸಿನಿಮಾಗಳಲ್ಲಿ ಮೋಹನ್ ಜುನೇಜ ನಟಿಸಿದ್ದರು. ಜೋಗಿ, ಕೆಜಿಎಫ್, ಚೆಲ್ಲಾಟ ಸೇರಿದಂತೆ ಅನೇಕ ಸೂಪರ್ ಹಿಟ್ ಸಿನಿಮಾಗಳಲ್ಲಿ ಅವರು ಪಾತ್ರ ಮಾಡಿದ್ದರು. ಹಲವು ಕಿರುತೆರೆ ಧಾರಾವಾಹಿಗಳಲ್ಲಿ ನಟಿಸಿ ಫೇಮಸ್ ಆಗಿದ್ದರು. ಪೋಷಕ ಕಲಾವಿದನಾಗಿ, ಹಾಸ್ಯ ನಟನಾಗಿ ಯಾವ ಪಾತ್ರ ಕೊಟ್ಟರೂ ನ್ಯಾಯ ಒದಗಿಸುವಂತಹ ಕಲಾವಿದ ಅವರಾಗಿದ್ದರು. ‘ಕೆಜಿಎಫ್: ಚಾಪ್ಟರ್ 1’ ಸಿನಿಮಾದಲ್ಲಿ ಅಭಿನಯಿಸಿದ ಬಳಿಕ ಅವರ ಜನಪ್ರಿಯತೆ ಹೆಚ್ಚಿತ್ತು. ‘ಕೆಜಿಎಫ್ 1’ ಮತ್ತು ‘ಕೆಜಿಎಫ್ 2’ ಸಿನಿಮಾದಲ್ಲಿ ಆನಂದ್ ಇಂಗಳಗಿಗೆ ರಾಕಿ ಭಾಯ್ ಬಗ್ಗೆ ಮಾಹಿತಿ ನೀಡುವ ವ್ಯಕ್ತಿಯಾಗಿ ಮೋಹನ್ ಜುನೇಜ ನಟಿಸಿದ್ದರು. ‘ಗ್ಯಾಂಗ್ ಕಟ್ಕೊಂಡು ಬರೋನು ಗ್ಯಾಂಗ್ಸ್ಟರ್. ಅವನು ಒಬ್ಬನೇ ಬರೋನು.. ಮಾನ್ಸ್ಟರ್’ ಎಂದು ಅವರು ಹೇಳಿದ ಡೈಲಾಗ್ ಸಖತ್ ಫೇಮಸ್ ಆಗಿತ್ತು.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:38 pm, Sat, 7 May 22