AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಣ್ಣಾವ್ರ ಸಾಂಗ್​ನ ಹೇಗೆ ಹಾಡಿದ್ದೀನಿ ನೋಡಿ’; ಶಿವಣ್ಣನಿಗೆ ವಿಡಿಯೋ ತೋರಿಸಿದ ಮೋಹನ್​ಲಾಲ್

ಮಲಯಾಳಂ ನಟ ಮೋಹನ್​ಲಾಲ್ ಅವರು ಡಾ. ರಾಜ್‌ಕುಮಾರ್ ಅವರ 'ಎಂದೆಂದೂ ನಿನ್ನನು ಮರೆತು ಬದುಕಿರಲಾರೆ' ಹಾಡನ್ನು ಹಾಡಿ, ಆ ವೈರಲ್ ವಿಡಿಯೋವನ್ನು ಶಿವರಾಜ್‌ಕುಮಾರ್ ಅವರಿಗೆ ತೋರಿಸಿದ್ದಾರೆ. ಅಮೆರಿಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೂಡಿಬಂದ ಈ ಹಾಡು, ಅಣ್ಣಾವ್ರ ಮೇಲಿನ ಮೋಹನ್​ಲಾಲ್ ಅವರ ಅಭಿಮಾನವನ್ನು ತೋರಿಸುತ್ತದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

‘ಅಣ್ಣಾವ್ರ ಸಾಂಗ್​ನ ಹೇಗೆ ಹಾಡಿದ್ದೀನಿ ನೋಡಿ’; ಶಿವಣ್ಣನಿಗೆ ವಿಡಿಯೋ ತೋರಿಸಿದ ಮೋಹನ್​ಲಾಲ್
ಮೋಹನ್​​ಲಾಲ್ -ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on: Apr 25, 2026 | 8:47 AM

Share

ರಾಜ್​ಕುಮಾರ್ ಮೃತಪಟ್ಟು ಅದೆಷ್ಟೋ ವರ್ಷಗಳು ಕಳೆದಿವೆ. ಆದಾಗ್ಯೂ ಅವರು ಹಾಕಿಕೊಟ್ಟ ಮಾರ್ಗದರ್ಶನ, ಅವರ ವರ್ಚಸ್ಸು ಈಗಲೂ ಹಾಗೆಯೇ ಇದೆ. ಕನ್ನಡಿಗರು ಮಾತ್ರ ಅಲ್ಲ, ಪರಭಾಷಿಗರೂ ರಾಜ್​​ಕುಮಾರ್ ಅವರನ್ನು ತುಂಬಾನೇ ಇಷ್ಟಪಡುತ್ತಾರೆ. ಇತ್ತೀಚೆಗೆ ಮಲಯಾಳಂ ನಟ ಮೋಹನ್​ಲಾಲ್ ಅವರು ರಾಜ್​​ಕುಮಾರ್ ಹಾಡನ್ನು ಹಾಡಿದ್ದರು. ಈಗ ಈ ವಿಡಿಯೋನ ಶಿವರಾಜ್​​ಕುಮಾರ್ ಅವರಿಗೆ ತೋರಿಸಿದ್ದಾರೆ. ಈ ಸಂದರ್ಭದ ವಿಡಿಯೋ ಗಮನ ಸೆಳೆದಿದೆ.

ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೋಹನ್​ಲಾಲ್ ಅವರು ಭಾಗಿ ಆಗಿದ್ದರು. ವೇದಿಕೆ ಮೇಲೆ ಅವರು ಹಾಡು ಹಾಡಿದ್ದಾರೆ. ಅದು ಕೂಡ ರಾಜ್​ಕುಮಾರ್ ಮತ್ತು ಮಂಜುಳಾ ನಟನೆಯ ‘ಎರಡು ಕನಸು’ ಸಿನಿಮಾದ್ದು. ಈ ಚಿತ್ರದ ಎವರ್​​ಗ್ರೀನ್ ಹಾಡು ‘ಎಂದೆಂದೂ ನಿನ್ನನು ಮರೆತು ಬದುಕಿರಲಾರೆ’ ಗೀತೆ ಮೋಹನ್​ಲಾಲ್ ಕಂಠದಿಂದ ಮೂಡಿ ಬಂದಿದೆ.

ಇದನ್ನೂ ಓದಿ: ಡಾ. ರಾಜ್​ಕುಮಾರ್ ಮೇಲಿನ ಅಭಿಮಾನಕ್ಕೆ ಅಮೆರಿಕದಲ್ಲಿ ಕನ್ನಡ ಗೀತೆ ಹಾಡಿದ ಮೋಹನ್​ಲಾಲ್ ಏಪ್ರಿಲ್ 24 ರಾಜ್​​ಕುಮಾರ್ ಜನ್ಮದಿನ. ಈ ವಿಶೇಷ ಸಂದರ್ಭದಲ್ಲಿ ಈ ಹಾಡು ವೈರಲ್ ಆಗಿತ್ತು. ಇದಾದ ಬೆನ್ನಲ್ಲೇ ಇದರ ಮುಂದಿನ ವರ್ಷನ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ. ತಾವು ಹಾಡಿದ ಹಾಡನ್ನು ಶಿವರಾಜ್​​ಕುಮಾರ್ ಅವರಿಗೆ ಮೋಹನ್​ಲಾಲ್ ಅವರು ತೋರಿಸಿದ್ದಾರೆ. ಮೋಹನ್​ಲಾಲ್ ಹಾಡಿದ ಹಾಡಿನ ವಿಡಿಯೋ ನೋಡುತ್ತಾ ಶಿವಣ್ಣ ತಲೆದೂಗಿದ್ದಾರೆ. ‘ನಾನು ಅಣ್ಣಾವ್ರ ಹಾಡನ್ನು ಹಾಡಿದ್ದೀನಿ ಹೇಗಿದೆ ನೋಡಿ’ ಎಂದು ಶಿವಣ್ಣಗೆ ಮೋಹನ್​​ಲಾಲ್ ಹೇಳಿದಂತಿದೆ.

ಶಿವರಾಜ್​​ಕುಮಾರ್ ಹಾಗೂ ಮೋಹನ್​ಲಾಲ್ ಅವರು ‘ಜೈಲರ್ 2’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ರಜನಿಕಾಂತ್ ಹೀರೋ. ಮೊದಲ ಭಾಗದಲ್ಲಿ ಶಿವಣ್ಣ ಹಾಗೂ ಮೋಹನ್​ಲಾಲ್ ಅವರದ್ದು ಅತಿಥಿ ಪಾತ್ರ ಆಗಿತ್ತು. ಎರಡೂ ಪಾತ್ರಗಳು ಜನಮೆಚ್ಚುಗೆ ಪಡೆದಿದ್ದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು