2022ರ ಬಹುನಿರೀಕ್ಷಿತ ಭಾರತೀಯ ಸಿನಿಮಾಗಳಲ್ಲಿ ಸ್ಥಾನ ಪಡೆದ ಕನ್ನಡದ ಏಕೈಕ ಚಿತ್ರ ‘ಕೆಜಿಎಫ್​ 2’ 

KGF Chapter 2: ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳು ಯಾವವು ಎಂಬ ಬಗ್ಗೆ ಕೌತುಕ ಮೂಡಿದೆ. ಇದಕ್ಕೆ ಈಗ ಉತ್ತರ ಸಿಕ್ಕಿದೆ. 2022ರ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿಯನ್ನು ಐಎಂಡಿಬಿ ಸಿದ್ಧಪಡಿಸಿದೆ.

2022ರ ಬಹುನಿರೀಕ್ಷಿತ ಭಾರತೀಯ ಸಿನಿಮಾಗಳಲ್ಲಿ ಸ್ಥಾನ ಪಡೆದ ಕನ್ನಡದ ಏಕೈಕ ಚಿತ್ರ ‘ಕೆಜಿಎಫ್​ 2’ 
ಕೆಜಿಎಫ್​-ಆರ್​ಆರ್​ಆರ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 01, 2022 | 8:14 AM

2022 ಆಗಮಿಸಿದೆ. ವಿಶ್ವಾದ್ಯಂತ ಹೊಸ ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಭಾರತದಲ್ಲಿ ಕೊವಿಡ್​ ಪ್ರಕರಣ ಹೆಚ್ಚುತ್ತಿರುವುದರಿಂದ ಸರಳವಾಗಿ ಹೊಸ ವರ್ಷ ಬರಮಾಡಿಕೊಳ್ಳಲಾಗಿದೆ. 2022 ಆಗಮಿಸುತ್ತಿದ್ದಂತೆ ಸಿನಿ ಪ್ರಿಯರ ಕೌತುಕ ಹೆಚ್ಚಿದೆ. ಯಾವ ಚಿತ್ರ ಯಾವಾಗ ರಿಲೀಸ್​ ಆಗಲಿದೆ ಎಂಬ ಬಗ್ಗೆ ಹುಡುಕಾಟ ನಡೆಸುತ್ತಿದ್ದಾರೆ. ಇದರ ಜತೆಗೆ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳು ಯಾವವು (2021 Most Awaited Movies) ಎಂಬ ಬಗ್ಗೆ ಕೌತುಕ ಮೂಡಿದೆ. ಇದಕ್ಕೆ ಈಗ ಉತ್ತರ ಸಿಕ್ಕಿದೆ. 2022ರ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿಯನ್ನು ಐಎಂಡಿಬಿ ಸಿದ್ಧಪಡಿಸಿದೆ. ಪಾಪ್ಯುಲಾರಿಟಿ ಹಾಗೂ ವೋಟ್​ಗಳ ಆಧಾರದ ಮೇಲೆ ರ‍್ಯಾಂಕ್ ನೀಡಲಾಗಿದೆ.

ಮೊದಲ ಸ್ಥಾನದಲ್ಲಿ ಎಸ್​.ಎಸ್​. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಇದೆ. ಜ್ಯೂ.ಎನ್​ಟಿಆರ್​, ರಾಮ್​ ಚರಣ್​, ಆಲಿಯಾ ಭಟ್​, ಅಜಯ್​ ದೇವಗನ್​ ನಟನೆಯ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಹೀಗಾಗಿ, ಜನರು ಇದಕ್ಕೆ ಹೆಚ್ಚು ವೋಟ್​ ಮಾಡಿದ್ದಾರೆ. ಈ ಕಾರಣಕ್ಕೆ ಬಹುನಿರೀಕ್ಷಿತ ಚಿತ್ರಗಳಲ್ಲಿ ಇದಕ್ಕೆ ಮೊದಲ ಸ್ಥಾನ ಸಿಕ್ಕಿದೆ. ಜನವರಿ 7ರಂದು ಚಿತ್ರ ತೆರೆಗೆ ಬರುತ್ತಿದೆ.

ನಿಜ ಜೀವನದ ಜೋಡಿ ರಣಬೀರ್​ ಕಪೂರ್​ ಹಾಗೂ ಆಲಿಯಾ ಭಟ್​ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಎರಡನೇ ರ‍್ಯಾಂಕ್ ಪಡೆದಿದೆ. ಈ ಚಿತ್ರದ ಬಗ್ಗೆ ಪ್ರೇಕ್ಷಕರು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್​ 9ರಂದು ರಿಲೀಸ್​ ಆಗುತ್ತಿದೆ.

ಪ್ರಶಾಂತ್​ ನೀಲ್​ ನಿರ್ದೇಶನದ, ಯಶ್​ ನಟನೆಯ ‘ಕೆಜಿಎಫ್​ 2’ ಚಿತ್ರ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ.ಈ ಸಿನಿಮಾ ಮೂರನೇ ಸ್ಥಾನದಲ್ಲಿದೆ. ಸಂಜಯ್ ದತ್​ ಸಿನಿಮಾದಲ್ಲಿ ಪ್ರಮುಖ ಖಳನಾಗಿ ಕಾಣಿಸಿಕೊಂಡಿದ್ದಾರೆ. ಕೊವಿಡ್​ ಕಾರಣದಿಂದ ಸಿನಿಮಾ ಕೆಲಸಗಳು ವಿಳಂಬವಾಗಿದೆ. ಬಹುನಿರೀಕ್ಷಿತ ಪಟ್ಟಿಯಲ್ಲಿರುವ ಏಕೈಕ ಕನ್ನಡ ಸಿನಿಮಾ ಇದಾಗಿದೆ.

ಪ್ರಭಾಸ್​ ಹಾಗೂ ಪೂಜಾ ಹೆಗ್ಡೆ ಒಟ್ಟಾಗಿ ಕಾಣಿಸಿಕೊಂಡಿರುವ ‘ರಾಧೆ ಶ್ಯಾಮ್​’ ಚಿತ್ರ ಜನವರಿ 14ಕ್ಕೆ ತೆರೆಗೆ ಬರುತ್ತಿದೆ. ಈ ಸಿನಿಮಾಗೆ ನಾಲ್ಕನೇ ಸ್ಥಾನವಿದೆ. ‘ಕೆಜಿಎಫ್​ 2’ ಜತೆ ರೇಸ್​ನಲ್ಲಿರುವ ಆಮೀರ್​ ಖಾನ್​ ನಟನೆಯ ‘ಲಾಲ್​ ಸಿಂಗ್​ ಛಡ್ಡಾ’ ಐದನೇ ಸ್ಥಾನದಲ್ಲಿದೆ. ಉಳಿದಂತೆ, ‘ಆದಿಪುರುಷ್​’ (6), ‘ಬೀಸ್ಟ್​’ (7), ‘ಗಂಗೂಬಾಯಿ ಕಾಠಿಯಾವಾಡಿ’ (8), ‘ಧಾಕಡ್​’ (9), ‘ಹೀರೋಪಂತಿ 2’ (10) ಸ್ಥಾನ ಗಿಟ್ಟಿಸಿಕೊಂಡಿವೆ.

ಇದನ್ನೂ ಓದಿ: ‘ಆರ್​ಆರ್​ಆರ್​’ ಬೆಂಗಳೂರು ಪ್ರೀ ರಿಲೀಸ್​ ಇವೆಂಟ್​ನಲ್ಲಿ ದಿಗ್ಗಜರು; ಸ್ಥಳ, ಸಮಯದ ಬಗ್ಗೆ ಇಲ್ಲಿದೆ ಮಾಹಿತಿ

ಹಿಂದಿಯಲ್ಲಿ ‘ಕೆಜಿಎಫ್​’ ವರ್ಸಸ್​ ‘ಪುಷ್ಪ’; ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಗೆದ್ದಿದ್ದು ಯಾರು?

Published On - 8:02 am, Sat, 1 January 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ