AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕಿಂಗ್ ಸ್ಟಾರ್ ಯಶ್ ಮುಂದಿನ ನಡೆಯೇನು? ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

2026ರಲ್ಲಿ ಟಾಕ್ಸಿಕ್ ಸಿನಿಮಾ ಸೋಲು ಮತ್ತು ರಾಮಾಯಣ ಚಿತ್ರದ ಯಶಸ್ಸಿನ ನಂತರ ನಟ ಯಶ್ ಮುಂದಿನ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಾಗಿದೆ. ನಿರ್ದೇಶಕರಾದ ಪಿ.ಎಸ್. ಮಿತ್ರನ್ ಹಾಗೂ ಆದಿತ್ಯ ಧರ್ ಹೆಸರುಗಳು ಕೇಳಿಬರುತ್ತಿದ್ದರೂ ‘ರಾಮಾಯಣ 2’ ಹೊರತುಪಡಿಸಿ ಯಾವ ಚಿತ್ರವೂ ಇನ್ನೂ ಅಧಿಕೃತವಾಗಿ ಘೋಷಣೆಯಾಗಿಲ್ಲ.

ರಾಕಿಂಗ್ ಸ್ಟಾರ್ ಯಶ್ ಮುಂದಿನ ನಡೆಯೇನು? ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ
ಯಶ್
ರಾಜೇಶ್ ದುಗ್ಗುಮನೆ
|

Updated on: Nov 19, 2026 | 7:35 AM

Share

ಮುಖ್ಯಾಂಶಗಳು

  • ರಾಮಾಯಣ ಗೆಲುವಿನ ನಂತರ ಯಶ್ ಮುಂದಿನ ಟಾರ್ಗೆಟ್ ಏನು?
  • ತಮಿಳು ನಿರ್ದೇಶಕ ಪಿ.ಎಸ್. ಮಿತ್ರನ್ ಜೊತೆಗಿನ ಸಿನಿಮಾಕ್ಕೆ ಎದುರಾಯ್ತು ಸಂಕಷ್ಟ
  • ಬಾಲಿವುಡ್ ನಿರ್ದೇಶಕ ಆದಿತ್ಯ ಧರ್ ಜೊತೆ ರಾಕಿಂಗ್ ಸ್ಟಾರ್ ಹೊಸ ಪ್ರಾಜೆಕ್ಟ್ ಪಕ್ಕಾ ಆಯ್ತಾ?

2026ನೇ ವರ್ಷ ರಾಕಿಂಗ್ ಸ್ಟಾರ್ ಯಶ್ ಪಾಲಿಗೆ ಸಾಕಷ್ಟು ವಿಶೇಷವಾಗಿತ್ತು. ಭಾರಿ ನಿರೀಕ್ಷೆ ಮೂಡಿಸಿದ್ದ ‘ಟಾಕ್ಸಿಕ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಅಂದುಕೊಂಡಷ್ಟು ದೊಡ್ಡ ಮಟ್ಟದಲ್ಲಿ ಹವಾ ಸೃಷ್ಟಿ ಮಾಡಲೇ ಇಲ್ಲ. ಆದರೆ ‘ರಾಮಾಯಣ ಭಾಗ 1’ ಚಿತ್ರದಲ್ಲಿನ ಯಶ್ ಅವರ ರಾವಣನ ಪಾತ್ರ ಎಲ್ಲರ ಮನಗೆದ್ದಿದೆ. ಈ ಎರಡು ವಿಭಿನ್ನ ಫಲಿತಾಂಶಗಳ ನಂತರ ಈಗ ಎಲ್ಲರ ಕಣ್ಣು ಯಶ್ ಅವರ ಮುಂದಿನ ಚಿತ್ರದ ಮೇಲಿದೆ.

‘ರಾಮಾಯಣ ಭಾಗ 2’ ಹೊರತುಪಡಿಸಿ ಯಶ್ ಯಾವ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ ಎಂಬ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೂ ಗಾಂಧಿನಗರದಿಂದ ಬಾಲಿವುಡ್‌ವರೆಗೆ ಯಶ್ ಮುಂದಿನ ಚಿತ್ರದ ಬಗ್ಗೆ ಅನೇಕ ವದಂತಿಗಳು ಹರಿದಾಡುತ್ತಿವೆ. ಅಭಿಮಾನಿಗಳು ಕೂಡ ತಮ್ಮ ನೆಚ್ಚಿನ ನಟನ ಮುಂದಿನ ಹೆಜ್ಜೆ ಯಾವ ಕಡೆಗೆ ಇರಬಹುದು ಎಂದು ಕಾತರದಿಂದ ಕಾಯುತ್ತಿದ್ದಾರೆ.

ಈ ಪಟ್ಟಿಯಲ್ಲಿ ತಮಿಳಿನ ‘ಸರ್ದಾರ್’ ಖ್ಯಾತಿಯ ನಿರ್ದೇಶಕ ಪಿ.ಎಸ್. ಮಿತ್ರನ್ ಅವರ ಹೆಸರು ಕೇಳಿಬರುತ್ತಿದೆ. ಇಂಡಿಯಾನಾ ಜೋನ್ಸ್ ಮಾದರಿಯ ಸಾಹಸಮಯ ಕಥೆಯೊಂದನ್ನು ಮಾಡಲು ಯಶ್ ಜೊತೆ ಮಾತುಕತೆ ನಡೆಸಿರುವುದಾಗಿ ಮಿತ್ರನ್ ಈ ಹಿಂದೆ ಹೇಳಿದ್ದರು. ಆದರೆ ಇತ್ತೀಚೆಗೆ ತೆರೆಕಂಡ ‘ಸರ್ದಾರ್ 2’ ಸಿನಿಮಾ ಸೋಲು ಕಂಡಿರುವುದರಿಂದ ಈ ಪ್ರಾಜೆಕ್ಟ್ ಮುಂದುವರಿಯುವುದು ಅನುಮಾನ ಎನ್ನಲಾಗುತ್ತಿದೆ.

ಮತ್ತೊಂದೆಡೆ ‘ಧುರಂಧರ್’ ಖ್ಯಾತಿಯ ಬಾಲಿವುಡ್ ನಿರ್ದೇಶಕ ಆದಿತ್ಯ ಧರ್ ಜೊತೆ ಯಶ್ ಕೈಜೋಡಿಸಲಿದ್ದಾರೆ ಎಂಬ ಸುದ್ದಿಯೂ ಜೋರಾಗಿದೆ. ಇವರಿಬ್ಬರ ಕಾಂಬಿನೇಷನ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಆದರೆ ಈ ಬಗ್ಗೆಯೂ ಇದುವರೆಗೆ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ ಮತ್ತು ಅಧಿಕೃತವಾಗಿ ಯಾವ ಸಿನಿಮಾಗೂ ಯಶ್ ಸಹಿ ಹಾಕಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಬಾಕ್ಸ್ ಆಫೀಸ್​ನಲ್ಲಿ ಮುಂದುವರಿದ ‘ರಾಮಾಯಣ’ ಅಬ್ಬರ; 13ನೇ ದಿನಕ್ಕೆ ಗಳಿಸಿದ್ದೆಷ್ಟು?

ಸದ್ಯಕ್ಕೆ ಯಶ್ ಕೈಯಲ್ಲಿ ‘ರಾಮಾಯಣ ಭಾಗ 2’ ಸಿನಿಮಾ ಮಾತ್ರ ಅಧಿಕೃತವಾಗಿದೆ. ದಿನದಿಂದ ದಿನಕ್ಕೆ ಹೊಸ ನಿರ್ದೇಶಕರ ಹೆಸರುಗಳು ತಳುಕು ಹಾಕಿಕೊಳ್ಳುತ್ತಿರುವುದರಿಂದ ಯಶ್ ಆದಷ್ಟು ಬೇಗ ಈ ಗೊಂದಲಗಳಿಗೆ ತೆರೆ ಎಳೆಯಬೇಕಿದೆ. ರಾಕಿಂಗ್ ಸ್ಟಾರ್ ಮುಂದಿನ ದಿನಗಳಲ್ಲಿ ಯಾವ ನಿರ್ದೇಶಕರಿಗೆ ಗ್ರೀನ್ ಸಿಗ್ನಲ್ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More