AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಟಿಕೆಟ್ ಬೆಲೆ ಏಕಾಏಕಿ ಏರಿಕೆ ಆರೋಪ, ಮಲ್ಟಿಪ್ಲೆಕ್ಸ್​ನಲ್ಲಿ ವಾಗ್ವಾದ

Multiplex: ಮೈಸೂರಿನ ಮಾಲ್ ಆಫ್ ಮೈಸೂರಿನ ಐನಾಕ್ಸ್ ಮಲ್ಟಿಪ್ಲೆಕ್ಸ್​ನಲ್ಲಿ ಹಠಾತ್ತನೆ ಸಿನಿಮಾ ಟಿಕೆಟ್ ಬೆಲೆ ಏರಿಕೆ ಮಾಡಿದ್ದರಿಂದ ಪ್ರೇಕ್ಷಕರು ಸಿಬ್ಬಂದಿಯೊಡನೆ ಜಗಳ ಮಾಡಿದ್ದಾರೆ. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಮೈಸೂರು: ಟಿಕೆಟ್ ಬೆಲೆ ಏಕಾಏಕಿ ಏರಿಕೆ ಆರೋಪ, ಮಲ್ಟಿಪ್ಲೆಕ್ಸ್​ನಲ್ಲಿ ವಾಗ್ವಾದ
ಐನಾಕ್ಸ್
ಮಂಜುನಾಥ ಸಿ.
|

Updated on: Aug 01, 2023 | 11:35 PM

Share

ಸಿನಿಮಾ (Cinema) ಟಿಕೆಟ್ ದರಗಳು ಈಗಾಗಲೇ ಗಗನಕ್ಕೇರಿ ಕುಳಿತಿವೆ. ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ಕಡಿಮೆ ಆಗಿರುವ ಈ ಸಮಯದಲ್ಲಿ ಸಿನಿಮಾ ಪ್ರೇಮಿಗಳು ವಿಧಿಯಿಲ್ಲದೆ ಮಲ್ಟಿಪ್ಲೆಕ್ಸ್​ಗಳನ್ನು  (Multiplex) ನೆಚ್ಚಿಕೊಳ್ಳಬೇಕಾಗಿದೆ. ಮಲ್ಟಿಪ್ಲೆಕ್ಸ್​ಗಳು ಹೆಚ್ಚು ಮೊತ್ತಕ್ಕೆ ಟಿಕೆಟ್​ಗಳನ್ನು ಮಾರಾಟ ಮಾಡುತ್ತಿವೆ. ಅಲ್ಲಿನ ಪಾಪ್​ಕಾರ್ನ್, ಕೂಲ್ ಡ್ರಿಂಕ್ಸ್​ ಬೆಲೆಗಳಂತೂ ಗಗನದಲ್ಲಿವೆ. ಹೀಗಿರುವಾಗ, ಮೈಸೂರಿನ ಮಲ್ಟಿಪ್ಲೆಕ್ಸ್ ಒಂದರಲ್ಲಿ ಹಠಾತ್ತನೆ ಟಿಕೆಟ್ ಬೆಲೆ ಏರಿಸಿದ್ದಕ್ಕೆ ಪ್ರೇಕ್ಷಕರು ಮಲ್ಟಿಪ್ಲೆಕ್ಸ್ ಸಿಬ್ಬಂದಿ ಜೊತೆ ಜಗಳ ಮಾಡಿದ್ದಾರೆ.

ಮೈಸೂರಿನ ಚಾಮುಂಡಿಬೆಟ್ಟದ ರಸ್ತೆಯಲ್ಲಿರುವ ಮಾಲ್ ಆಫ್ ಮೈಸೂರು ಶಾಪಿಂಗ್​ ಮಾಲ್​ನಲ್ಲಿರುವ ಐನಾಕ್ಸ್ ಮಲ್ಟಿಪ್ಲೆಕ್ಸ್​ ನಲ್ಲಿ ಇಂದು (ಆಗಸ್ಟ್ 01) ರಾತ್ರಿ ಸಿನಿಮಾ ನೋಡಲು ಹೋದವರಿಗೆ ಶಾಕ್ ನೀಡಿದ್ದಾರೆ ಮಲ್ಟಿಪ್ಲೆಕ್ಸ್ ಸಿಬ್ಬಂದಿ. ರಾತ್ರಿಯ ಶೋನ ಟಿಕೆಟ್ ದರ 160 ಇತ್ತು. ಆದರೆ ಏಕಾ-ಏಕಿ ಟಿಕೆಟ್ ಬೆಲೆ ಏರಿಸಿ 200 ರೂಪಾಯಿ ಮಾಡಲಾಗಿದೆ. ಪ್ರೇಕ್ಷಕರಿಂದ ಟಿಕೆಟ್​ ಬೆಲೆಗಿಂತಲೂ 40 ರೂಪಾಯಿ ಹೆಚ್ಚಿನ ಮೊತ್ತ ವಸೂಲಾತಿ ಮಾಡುವ ಪ್ರಯತ್ನವನ್ನು ಮಲ್ಟಿಪ್ಲೆಕ್ಸ್ ಸಿಬ್ಬಂದಿ ಮಾಡಿದ್ದಾರೆ.

ಇದರಿಂದ ಸಿಟ್ಟಾದ ಕೆಲವು ಪ್ರೇಕ್ಷಕರು ಮಲ್ಟಿಪ್ಲೆಕ್ಸ್ ಸಿಬ್ಬಂದಿ ಜೊತೆ ಜಗಳಕ್ಕಿಳಿದಿದ್ದಾರೆ. ಪಟ್ಟು ಬಿಡದ ಮಲ್ಟಿಪ್ಲೆಕ್ಸ್ ಸಿಬ್ಬಂದಿ ಪ್ರೇಕ್ಷಕರೊಟ್ಟಿಗೆ ಏರಿದ ದನಿಯಲ್ಲಿ ವಾಗ್ವಾದ ನಡೆಸಿದ್ದರಿಂದ ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದೆ. ಕೊನೆಗೆ ನಜಾರ್​ಬಾದ್ ಪೊಲೀಸರು ಮಾಲ್​ಗೆ ಆಗಮಿನಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಘಟನೆ ಕುರಿತು ಇನ್ನಷ್ಟು ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

ಕೆಲವು ದಿನಗಳ ಹಿಂದಷ್ಟೆ ಮಲ್ಟಿಪ್ಲೆಕ್ಸ್​ಗಳಲ್ಲಿ ಮಾರಾಟವಾಗುವ ಪಾಪ್​ಕಾರ್ನ್ ಇನ್ನಿತರೆ ತಿಂಡಿ ತಿನಿಸು ಹಾಗೂ ಪಾನೀಯಗಳ ಮೇಲಿನ ತೆರಿಗೆಯನ್ನು ಇಳಿಸಲಾಗಿತ್ತು. ಮಲ್ಟಿಪ್ಲೆಕ್ಸ್​ಗಳಲ್ಲಿ ಸಿನಿಮಾ ವೀಕ್ಷಣೆಯನ್ನು ತುಸು ಅಗ್ಗ ಮಾಡುವ ನಿರ್ಧಾರವನ್ನು ಸರ್ಕಾರ ತಳೆದಿತ್ತು, ಅದರ ಬೆನ್ನಲ್ಲೆ ಇದೀಗ ಮಲ್ಟಿಪ್ಲೆಕ್ಸ್​ಗಳು ಹಠಾತ್ತನೆ ಟಿಕೆಟ್ ಬೆಲೆ ಏರಿಕೆ ಮಾಡಿ, ಸಾಮಾನ್ಯನ ಜೇಬಿಗೆ ಕತ್ತರಿ ಹಾಕುವ ಯತ್ನ ಮಾಡುತ್ತಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ