ಅರ್ಜುನ್ ಜನ್ಯ ಇನ್ನೆರಡು ತಿಂಗಳು ಸಿನಿಮಾ ಕೆಲಸ, ರಿಯಾಲಿಟಿ ಶೋಗಳಿಂದ ದೂರ!

ಮೈಸೂರು: ಲಘು ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್​ವುಡ್​ನ ಸಂಗೀತ ಮಾಂತ್ರಿಕ ಅರ್ಜುನ್ ಜನ್ಯ ಡಿಸ್ಚಾರ್ಜ್​ ಆಗಿದ್ದಾರೆ. ಆಸ್ಪತ್ರೆಯಲ್ಲಿ ಅರ್ಜುನ್ ಜನ್ಯಗೆ ಆಂಜಿಯೋಗ್ರಾಮ್ ಆಂಜಿಯೋಪ್ಲ್ಯಾಸ್ಟಿ ಮಾಡಲಾಗಿದೆ. ಹೀಗಾಗಿ ಕನಿಷ್ಠ ನಾಲ್ಕು ವಾರಗಳ ಕಾಲ ಸಂಪೂರ್ಣ ವಿಶ್ರಾಂತಿಯಲ್ಲಿರುವಂತೆ ಜನ್ಯಗೆ ವೈದ್ಯರು ಸೂಚಿಸಿದ್ದಾರೆ. ಎರಡು ತಿಂಗಳು ವಿಶ್ರಾಂತಿ ಪಡೆಯಲು ಸೂಚಿಸಿರುವ ವೈದ್ಯರು ಸಿನಿಮಾ ಕೆಲಸ, ರಿಯಾಲಿಟಿ ಶೋಗಳಿಂದ ದೂರವಿರುವಂತೆ ಸಲಹೆ ನೀಡಿದ್ದಾರೆ. 39 ವರ್ಷದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಲಘು ಹೃದಯಾಘಾತವಾಗಿತ್ತು. ಅರ್ಜುನ್ ಜನ್ಯ ಹೃದಯದಲ್ಲಿ ಶೇ.99 ರಷ್ಟು […]

ಅರ್ಜುನ್ ಜನ್ಯ ಇನ್ನೆರಡು ತಿಂಗಳು ಸಿನಿಮಾ ಕೆಲಸ, ರಿಯಾಲಿಟಿ ಶೋಗಳಿಂದ ದೂರ!
ಸಾಧು ಶ್ರೀನಾಥ್​

Updated on: Feb 28, 2020 | 4:45 PM

ಮೈಸೂರು: ಲಘು ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್​ವುಡ್​ನ ಸಂಗೀತ ಮಾಂತ್ರಿಕ ಅರ್ಜುನ್ ಜನ್ಯ ಡಿಸ್ಚಾರ್ಜ್​ ಆಗಿದ್ದಾರೆ. ಆಸ್ಪತ್ರೆಯಲ್ಲಿ ಅರ್ಜುನ್ ಜನ್ಯಗೆ ಆಂಜಿಯೋಗ್ರಾಮ್ ಆಂಜಿಯೋಪ್ಲ್ಯಾಸ್ಟಿ ಮಾಡಲಾಗಿದೆ. ಹೀಗಾಗಿ ಕನಿಷ್ಠ ನಾಲ್ಕು ವಾರಗಳ ಕಾಲ ಸಂಪೂರ್ಣ ವಿಶ್ರಾಂತಿಯಲ್ಲಿರುವಂತೆ ಜನ್ಯಗೆ ವೈದ್ಯರು ಸೂಚಿಸಿದ್ದಾರೆ. ಎರಡು ತಿಂಗಳು ವಿಶ್ರಾಂತಿ ಪಡೆಯಲು ಸೂಚಿಸಿರುವ ವೈದ್ಯರು ಸಿನಿಮಾ ಕೆಲಸ, ರಿಯಾಲಿಟಿ ಶೋಗಳಿಂದ ದೂರವಿರುವಂತೆ ಸಲಹೆ ನೀಡಿದ್ದಾರೆ.

39 ವರ್ಷದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಲಘು ಹೃದಯಾಘಾತವಾಗಿತ್ತು. ಅರ್ಜುನ್ ಜನ್ಯ ಹೃದಯದಲ್ಲಿ ಶೇ.99 ರಷ್ಟು ಬ್ಲಾಕ್ ಆಗಿತ್ತು. ಹಾಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಅರ್ಜುನ್ ಜನ್ಯ ಚಿಕಿತ್ಸೆ ಪಡೆದಿದ್ದರು.

Published On - 4:20 pm, Fri, 28 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us