ಜನ್ಯಗೆ ಹೃದಯಾಘಾತ, ಗೋಲ್ಡನ್ ಅವರ್ನಲ್ಲಿ ಚಿಕಿತ್ಸೆ, ಬಚಾವ್
ಮೈಸೂರು: ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಲಘು ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರ್ಜುನ್ ಜನ್ಯ ಮೈಸೂರಿನ ಬೋಗಾದಿ ಬಳಿ ಇರುವ ತಮ್ಮ ನಿವಾಸದಲ್ಲಿರುವಾಗ ಹೃದಯಾಘಾತವಾಗಿದ್ದು, ತಕ್ಷಣ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈಗಾಗಲೇ ಚಿಕಿತ್ಸೆ ಆರಂಭಿಸಿದ್ದು, ಐಸಿಯೂ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. 39 ವರ್ಷದ ಅರ್ಜುನ್ ಜನ್ಯ ಕಡಿಮೆ ವಯಸ್ಸಿಗೆ ಹೃದಯಾಘಾತಕ್ಕೊಳಗಾಗಿರುವುದು ಮಾತ್ರ ವಿಪರ್ಯಾಸ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಭಯ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಮೈಸೂರಿನ ಬೋಗಾದಿಯ ರಸ್ತೆಯ ಬಳಿ […]
ಮೈಸೂರು: ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಲಘು ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರ್ಜುನ್ ಜನ್ಯ ಮೈಸೂರಿನ ಬೋಗಾದಿ ಬಳಿ ಇರುವ ತಮ್ಮ ನಿವಾಸದಲ್ಲಿರುವಾಗ ಹೃದಯಾಘಾತವಾಗಿದ್ದು, ತಕ್ಷಣ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈಗಾಗಲೇ ಚಿಕಿತ್ಸೆ ಆರಂಭಿಸಿದ್ದು, ಐಸಿಯೂ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ.
39 ವರ್ಷದ ಅರ್ಜುನ್ ಜನ್ಯ ಕಡಿಮೆ ವಯಸ್ಸಿಗೆ ಹೃದಯಾಘಾತಕ್ಕೊಳಗಾಗಿರುವುದು ಮಾತ್ರ ವಿಪರ್ಯಾಸ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಭಯ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಮೈಸೂರಿನ ಬೋಗಾದಿಯ ರಸ್ತೆಯ ಬಳಿ ಐಷಾರಾಮಿ ವಿಲ್ಲ ಖರೀದಿಸಿದ್ದರು. ಬಿಡುವಿನ ಸಮಯದಲ್ಲಿ ವಿಶ್ರಾಂತಿ ಪಡೆಯಲು ಇಲ್ಲಿಗೆ ಬರುತ್ತಿದ್ದರು.
Published On - 7:56 am, Thu, 27 February 20