‘ಶಾಂತಿಮಂತ್ರ ಸಾರಲು ಈ ಸಂದರ್ಭವನ್ನು ಸ್ಫೂರ್ತಿಯಾಗಿ ತೆಗೆದುಕೊಳ್ಳೋಣ’: ದಸರಾ ಉದ್ಘಾಟನೆ ಬಗ್ಗೆ ಹಂಸಲೇಖ ಸುದ್ದಿಗೋಷ್ಠಿ

‘ಕನ್ನಡ ಭಾಷೆಯ ಮೂಲಕ ದಕ್ಷಿಣವನ್ನು ನಾವು ಭದ್ರ ಪಡಿಸಿಕೊಳ್ಳುವ ಕಾಲ ಬಂದಿದೆ. ತೆಂಕಣದಿಂದ ಉತ್ತರವನ್ನು ಕೂಡ ನಾವು ಪ್ರಶ್ನಿಸಬೇಕು. ಇದಕ್ಕೆಲ್ಲ ಬೇಕಾದ ಪ್ರಮುಖ ಅಂಶವೇ ಕನ್ನಡ’ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ. ದಸರಾ ಉದ್ಘಾಟನೆಗೆ ಆಯ್ಕೆ ಆದ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

‘ಶಾಂತಿಮಂತ್ರ ಸಾರಲು ಈ ಸಂದರ್ಭವನ್ನು ಸ್ಫೂರ್ತಿಯಾಗಿ ತೆಗೆದುಕೊಳ್ಳೋಣ’: ದಸರಾ ಉದ್ಘಾಟನೆ ಬಗ್ಗೆ ಹಂಸಲೇಖ ಸುದ್ದಿಗೋಷ್ಠಿ
ಸಂಗೀತ ನಿರ್ದೇಶಕ ಹಂಸಲೇಖ
Follow us
ಮದನ್​ ಕುಮಾರ್​
|

Updated on:Aug 29, 2023 | 1:16 PM

2023ರ ದಸರಾ (Dasara 2023) ಉತ್ಸವವನ್ನು ಸಂಗೀತ ನಿರ್ದೇಶಕ, ಗೀತರಚನಾಕಾರ ಹಂಸಲೇಖ (Music director Hamsalekha) ಅವರು ಉದ್ಘಾಟನೆ ಮಾಡಲಿದ್ದಾರೆ. ಈ ಸುದ್ದಿ ಹೊರಬಿದ್ದ ಕೂಡಲೇ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ದಸರಾ ಹಬ್ಬ, ನಾಲ್ವಡಿ ಕೃಷ್ಣರಾಜ ಒಡೆಯರು, ಕನ್ನಡ ಭಾಷೆ ಸೇರಿದಂತೆ ಅನೇಕ ಸಂಗತಿಗಳ ಕುರಿತು ಹಂಸಲೇಖ ಅವರು ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. ‘ಇದು ನಾಲ್ವಡಿ ಕೃಷ್ಣರಾಜ ಒಡೆಯರ ಕನಸು. ಜಗತ್ತು ಕಂಡ ಅತ್ಯಂತ ಶ್ರೀಮಂತ ರಾಜ ಅವರು. ನನಗೆ ಈಗ ಸಂತೋಷವನ್ನೂ ತಡೆದುಕೊಳ್ಳುವ ವಯಸ್ಸು. ಅದಕ್ಕೂ ಒಂದು ನಿಯಂತ್ರಣ ಬೇಕು. 35 ವರ್ಷದ ಹಿಂದೆ ಆಗಿದ್ದರೆ ನಾನು ಏನೇನೋ ಮಾತನಾಡುತ್ತಿದ್ದೆ. ಮೊದಲು ನಾವು ರಾಜ್ಯ ಸರ್ಕಾರಕ್ಕೆ ಎಲ್ಲ ಕಲಾವಿದರ ಪರವಾಗಿ ಧನ್ಯವಾದ ತಿಳಿಸಬೇಕು. ಕಳೆದ ವರ್ಷ ನನಗೆ ಆರೋಗ್ಯದಲ್ಲಿ ಏರುಪೇರು ಆದಾಗ ಸಿದ್ಧರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಅವರು ಟ್ವೀಟ್​ ಮಾಡಿದ್ದರು. ದಸರಾ ಎಂಬುದು ದೊಡ್ಡ ಸಂಭ್ರಮ. ಅಂಥ ಸಂಭ್ರಮವನ್ನು ಉದ್ಘಾಟಿಸಲು ನನ್ನಂತಹ ಸ್ಟ್ರೀಟ್​ ಫೈಟರ್​ನನ್ನು ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳು. ನನ್ನ ಮನೆಯವರು ಪ್ರತ್ಯೇಕವಾಗಿ ಅಭಿನಂದನೆ ತಿಳಿಸಿದ್ದಾರೆ’ ಎಂದು ಹಂಸಲೇಖ (Hamsalekha) ಅವರು ಹೇಳಿದ್ದಾರೆ.

‘ನಮ್ಮ ನಾಡಿನಲ್ಲಿ ಒಕ್ಕೂಟ ವ್ಯವಸ್ಥೆ ಬರುವುಕ್ಕೂ ಮುನ್ನ, ಸಂವಿಧಾನ ಸಿದ್ಧವಾಗುವುದಕ್ಕೂ ಮುನ್ನ, ಸಂವಿಧಾನದಲ್ಲಿ ಏನೆಲ್ಲ ಇರಬೇಕು ಎಂಬುದನ್ನು ಆಲೋಚಿಸುವುದಕ್ಕೂ ಮುನ್ನ ಅದನ್ನೆಲ್ಲ ನಾಲ್ವಡಿ ಕೃಷ್ಣರಾಜ ಒಡೆಯರ್​ ಅವರು ಇಲ್ಲಿ ಜಾರಿಗೊಳಿಸಿದ್ದರು. ಅವರು ಒಂದು ಪ್ರಜಾ ಪ್ರತಿನಿಧಿ ಸಭೆ ಎಂಬ ಪರಿಕಲ್ಪನೆಯನ್ನು ಜಾರಿ ಮಾಡಿದ್ದರು. ಅದು ಇಡೀ ಭಾರತಕ್ಕೆ ಬೆಳಕಾಯಿತು. ಪ್ರಜಾ ಪ್ರತಿನಿಧಿ ಸಭೆ ಎಂದರೆ ರಾಜ್ಯದ ಹಳ್ಳಿಗಾಡಿನ ಕೃಷಿಕ, ಕಾರ್ಮಿಕ, ಶ್ರಮಿಕ ವರ್ಗದಿಂದ ಓರ್ವ ಪ್ರತಿನಿಧಿ ಅರಮನೆಯಲ್ಲಿ ಇರಬೇಕು. ಅವನು ಪ್ರಶ್ನೆಗಳನ್ನು ಕೇಳಬೇಕು. ಯೋಜನೆಯಲ್ಲಿ ಆತ ಭಾಗವಹಿಸಬೇಕು. ಮಹಾರಾಜನ ಮಟ್ಟಕ್ಕೆ ಅವನು ಮಾತನಾಡಬೇಕು ಎಂದು ಅವರು ಕನಸು ಕಂಡಿದ್ದರು. ಆ ಕನಸು ಈಗ ನನಸಾಗಿದೆ. ನಾನು ಪ್ರಜಾ ಪ್ರತಿನಿಧಿ ಆಗಿದ್ದೀನೋ ಇಲ್ಲವೋ ಗೊತ್ತಿಲ್ಲ. ಕಲಾ ಪ್ರತಿನಿಧಿಯಂತೂ ಆಗಿದ್ದೇನೆ. ಕನ್ನಡ ಚಿತ್ರರಂಗದ ಎಲ್ಲ ಲೇಖಕರ ಪರವಾಗಿ ನಾನು ಇದನ್ನು ಸ್ವೀಕರಿಸಿ, ಅಲ್ಲಿ ದೀಪ ಹಚ್ಚಲಿದ್ದೇನೆ’ ಎಂದು ಹಂಸಲೇಖ ಹೇಳಿದ್ದಾರೆ.

ಇದನ್ನೂ ಓದಿ: Mysore Dasara 2023: ಸಂಗೀತ ನಿರ್ದೇಶಕ ಹಂಸಲೇಖರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ: ಸಿದ್ದರಾಮಯ್ಯ ಘೋಷಣೆ

‘ಮನಸ್ಸಿನಲ್ಲಿ ಹಾಡುಗಳು ಉಕ್ಕುತ್ತಿವೆ. ಇದು ಒಳ್ಳೆಯ ಸಂದರ್ಭ. ಹಾಡು ಮಾಡಬಹುದು. ಈಗ ಒಂದು ಸಾಲು ಬರುತ್ತಿದೆ. ಬದುಕಿದು ಕನ್ನಡ ಭಿಕ್ಷೆ. ಇಲ್ಲಿ ಸಮರಸವೇ ನಮ್ಮ ರಕ್ಷೆ. ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು. ಮೆಟ್ಟಿದರೆ ಕನ್ನಡ ಮಣ್ಣ​ ಮೆಟ್ಟಬೇಕು. ಕನ್ನಡವನ್ನು ಯಾರು ಮೆಟ್ಟುತ್ತಾರೋ ಅವರನ್ನು ಮೆಟ್ಟಬೇಕು. ಒಂದು ರಾಜ್ಯ ಹಲವು ಸಿದ್ಧಾಂತ, ಸಂಘಟನೆಯಿಂದ ಹೋರಾಡುತ್ತಿರುತ್ತದೆ. ಅವರನ್ನೆಲ್ಲ ಒಗ್ಗಟ್ಟಿಗೆ ತರೋದು ಕಷ್ಟ. ಆದರೆ ಕನ್ನಡ ಎಂದರೆ ಎಲ್ಲರೂ ಒಂದಾಗಬೇಕು. ಕನ್ನಡ ಎಂದ ತಕ್ಷಣ ಎಲ್ಲ ಪಕ್ಷಗಳು ಒಂದಾಗಬೇಕು. ಸಂವಿಧಾನ ನಮಗೆ ಸ್ವಾತಂತ್ರ್ಯ ಕೊಟ್ಟಿದೆ. ಸ್ವಾತಂತ್ರ್ಯ ಅನ್ನೋದು ಒಂದು ಸವಿಯಾದ ಗಾಳಿ. ಅದು ಭಾಷೆಯ ಮೂಲಕ ಗೊತ್ತಾಗುತ್ತದೆ. ಕನ್ನಡದ ಕಾಲು ಹಿಡಿದುಕೊಂಡರೆ ಅದು ನಮ್ಮನ್ನು ಕಾಪಾಡುತ್ತದೆ. ಆ ಸ್ವಾತಂತ್ರ್ಯವನ್ನು ಇಟ್ಟುಕೊಂಡು ನಾವು ಸಂವಿಧಾನವನ್ನು ಪ್ರಶ್ನಿಸಬಹುದು. ಅದನ್ನು ಕಳೆದುಕೊಳ್ಳಬಾರದು. ನಾವು ಕನ್ನಡವನ್ನು ಕಳೆದುಕೊಳ್ಳಬಾರದು’ ಎಂದು ಹಂಸಲೇಖ ಹೇಳಿದ್ದಾರೆ.

ಇದನ್ನೂ ಓದಿ: ‘ನನ್ನ ಮುಟ್ಟಿದರೂ ಕನ್ನಡ, ನಾನು ಬಿದ್ರೂ ಕನ್ನಡ, ಕೊಂದರೂ ಕನ್ನಡ’: ಹಂಸಲೇಖ

‘ಕನ್ನಡ ಭಾಷೆಯ ಮೂಲಕ ದಕ್ಷಿಣವನ್ನು ನಾವು ಭದ್ರ ಪಡಿಸಿಕೊಳ್ಳುವ ಕಾಲ ಬಂದಿದೆ. ತೆಂಕಣದಿಂದ ಉತ್ತರವನ್ನು ಕೂಡ ನಾವು ಪ್ರಶ್ನಿಸಬೇಕು. ಇದಕ್ಕೆಲ್ಲ ಬೇಕಾದ ಪ್ರಮುಖ ಅಂಶವೇ ಕನ್ನಡ. ಇದನ್ನು ಶಾಂತಿ ಮಂತ್ರ ಕನ್ನಡ ಎನ್ನಬಹುದು. ಮನುಜ ಮತ, ವಿಶ್ವ ಪಥ ಅಂತ ಕುವೆಂಪು ಹೇಳಿದರು. ಅದನ್ನು ನಾವು ಮುಂದುವರಿಸಬೇಕು. ಅದಕ್ಕೆ ನಮ್ಮ ರಾಜ್ಯ ಸಿದ್ಧವಾಗಿದೆ. ನಮ್ಮ ಮುಖ್ಯಮಂತ್ರಿಗಳ ಆಶಯವನ್ನು ಈಡೇರಿಸುತ್ತೇನೆ. ಅವರು ನನಗೆ ಕರೆ ಮಾಡಿ ಈ ಸುದ್ದಿ ತಿಳಿಸಿದರು. ಆಗ ನನ್ನ ಅಭಿಪ್ರಾಯವನ್ನು ಖಚಿತವಾಗಿ ತಿಳಿಸಿದೆ. ಆದರೆ ಅವರು ತಮ್ಮ ಖಚಿತವಾದ ಅಭಿಪ್ರಾಯ ತಿಳಿಸಿದರು. ಅವಿರೋಧವಾಗಿ ನನ್ನ ಹೆಸರು ಆಯ್ಕೆ ಆಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು. ಆಗಲಿ ಅಂತ ಒಪ್ಪಿಕೊಂಡಿದ್ದೇನೆ. ಈ ಸಂದರ್ಭವನ್ನು ಕನ್ನಡದ ಉಳಿವಿಗೆ, ಶಾಂತಿಮಂತ್ರವನ್ನು ಜಗತ್ತಿಗೆ ಸಾರಲು ಸ್ಫೂರ್ತಿಯಾಗಿ ತೆಗೆದುಕೊಳ್ಳೋಣ’ ಎಂದಿದ್ದಾರೆ ಹಂಸಲೇಖ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:52 pm, Tue, 29 August 23

ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ