AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ..

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ರಾಜನ್(87) ಹೃದಯಾಘಾತದಿಂದ ನಿನ್ನೆ ರಾತ್ರಿ 11 ಗಂಟೆಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದ ನಿವಾಸದಲ್ಲಿ ರಾಜನ್ ಕೊನೆಯುಸಿರೆಳೆದಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ, ತುಳು ಸೇರಿ ಹಲವು ಭಾಷೆಯ 375ಕ್ಕೂ ಹೆಚ್ಚು ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದರು. ರಾಜನ್-ನಾಗೇಂದ್ರ ಎಂದೇ ಖ್ಯಾತವಾಗಿದ್ದ ಸಹೋದರರ ಪೈಕಿ ಸಂಗೀತ ನಿರ್ದೇಶಕ ರಾಜನ್ ಹಿರಿಯರಾಗಿದ್ದರು. 1950-1990ರವರೆಗೆ ಈ ಸಹೋದರರು ಮೋಡಿ ಮಾಡಿದ್ದರು. ಗಂಧದ ಗುಡಿ, ಎರಡು ಕನಸು, ಪರಸಂಗದ ಗೆಂಡೆತಿಮ್ಮ, ಬಯಲು ದಾರಿ, ನಾ ನಿನ್ನ […]

ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ..
ಆಯೇಷಾ ಬಾನು
ಆಯೇಷಾ ಬಾನು|

Updated on:Oct 12, 2020 | 3:19 PM

Share

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ರಾಜನ್(87) ಹೃದಯಾಘಾತದಿಂದ ನಿನ್ನೆ ರಾತ್ರಿ 11 ಗಂಟೆಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದ ನಿವಾಸದಲ್ಲಿ ರಾಜನ್ ಕೊನೆಯುಸಿರೆಳೆದಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ, ತುಳು ಸೇರಿ ಹಲವು ಭಾಷೆಯ 375ಕ್ಕೂ ಹೆಚ್ಚು ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದರು.

ರಾಜನ್-ನಾಗೇಂದ್ರ ಎಂದೇ ಖ್ಯಾತವಾಗಿದ್ದ ಸಹೋದರರ ಪೈಕಿ ಸಂಗೀತ ನಿರ್ದೇಶಕ ರಾಜನ್ ಹಿರಿಯರಾಗಿದ್ದರು. 1950-1990ರವರೆಗೆ ಈ ಸಹೋದರರು ಮೋಡಿ ಮಾಡಿದ್ದರು. ಗಂಧದ ಗುಡಿ, ಎರಡು ಕನಸು, ಪರಸಂಗದ ಗೆಂಡೆತಿಮ್ಮ, ಬಯಲು ದಾರಿ, ನಾ ನಿನ್ನ ಮರೆಯಲಾರೆ, ಹೊಂಬಿಸಿಲು, ಗಾಳಿಮಾತು, ಶ್ರೀನಿವಾಸ ಕಲ್ಯಾಣ, ಚಲಿಸುವ ಮೋಡಗಳು ಸೇರಿದಂತೆ ಹಲವು ಚಿತ್ರಗಳಿಗೆ ಸಂಗೀತ ನಿರ್ದೇಶಿಸಿದ್ದರು.

ಕನ್ನಡದಲ್ಲೇ 200ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ಸದ್ಯ ಈಗ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಹೆಬ್ಬಾಳದ ಸ್ಮಶಾನದಲ್ಲಿ ಇಂದು ರಾಜನ್ ಅಂತ್ಯಸಂಸ್ಕಾರ ನಡೆಯಲಿದೆ. ಈ ಬಗ್ಗೆ ಸಂಗೀತ ನಿರ್ದೇಶಕ ರಾಜನ್ ಪುತ್ರ ಅನಂತ್‌ ಮಾಹಿತಿ ತಿಳಿಸಿದ್ದಾರೆ.

Published On - 6:45 am, Mon, 12 October 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?