Rashmika Mandanna: ‘ನನ್ನ ಕೈ ಸನ್ನೆಗಳು ಕೆಲವರಿಗೆ ಇಷ್ಟವಾಗದಿರಬಹುದು’; ನೇರವಾಗಿ ಹೇಳಿದ ರಶ್ಮಿಕಾ ಮಂದಣ್ಣ 

2016ರಲ್ಲಿ ತೆರೆಗೆ ಬಂದ ‘ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ರಶ್ಮಿಕಾ ಮಂದಣ್ಣ ಅವರು ಬಣ್ಣದ ಬದುಕು ಆರಂಭಿಸಿದರು. ನಂತರ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಕನ್ನಡ ಹಾಗೂ ಕನ್ನಡ ಚಿತ್ರರಂಗವನ್ನು ಅವರು ನಿರ್ಲಕ್ಷ್ಯ ಮಾಡಿದ್ದಾರೆ ಎಂಬುದು ಹಲವರ ಆರೋಪ.

Rashmika Mandanna: ‘ನನ್ನ ಕೈ ಸನ್ನೆಗಳು ಕೆಲವರಿಗೆ ಇಷ್ಟವಾಗದಿರಬಹುದು’; ನೇರವಾಗಿ ಹೇಳಿದ ರಶ್ಮಿಕಾ ಮಂದಣ್ಣ 
ರಶ್ಮಿಕಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 06, 2023 | 2:52 PM

ರಶ್ಮಿಕಾ ಮಂದಣ್ಣ (Rashmika Mandanna) ಅವರನ್ನು ನಿರಂತರವಾಗಿ ಟ್ರೋಲ್ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಅವರ ಫ್ಯಾನ್ಸ್​ಗೆ ಬೇಸರ ಇದೆ. ಸಣ್ಣ ವಿಚಾರ ಸಿಕ್ಕರೂ ರಶ್ಮಿಕಾ ಅವರನ್ನು ಟ್ರೋಲ್ ಮಾಡಲಾಗುತ್ತದೆ. ಆದರೆ, ರಶ್ಮಿಕಾ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಸೆಲೆಬ್ರಿಟಿ ಪಟ್ಟ ಸಿಕ್ಕ ನಂತರ ಈ ರೀತಿಯ ಟೀಕೆಗಳು ಸಾಮಾನ್ಯ ಎಂಬುದು ಅವರಿಗೆ ಅರಿವಾದಂತಿದೆ. ‘ನಮ್ಮನ್ನು ಎಲ್ಲರೂ ಇಷ್ಟಪಡಬೇಕು ಎಂದೇನೂ ಇಲ್ಲ’ ಎಂದಿದ್ದಾರೆ ಅವರು.

2016ರಲ್ಲಿ ತೆರೆಗೆ ಬಂದ ‘ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ರಶ್ಮಿಕಾ ಮಂದಣ್ಣ ಅವರು ಬಣ್ಣದ ಬದುಕು ಆರಂಭಿಸಿದರು. ನಂತರ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಕನ್ನಡ ಹಾಗೂ ಕನ್ನಡ ಚಿತ್ರರಂಗವನ್ನು ಅವರು ನಿರ್ಲಕ್ಷ್ಯ ಮಾಡಿದ್ದಾರೆ ಎಂಬುದು ಹಲವರ ಆರೋಪ. ಇನ್ನು, ರಕ್ಷಿತ್ ಶೆಟ್ಟಿ ಜತೆಗಿನ ಸಂಬಂಧ ಮುರಿದುಕೊಂಡಿದ್ದರಿಂದಲೂ ಹಲವರು ರಶ್ಮಿಕಾ ವಿರುದ್ಧ ಕಿಡಿಕಾರಿದರು. ಈ ಟ್ರೋಲ್​ಗಳ ಬಗ್ಗೆ ರಶ್ಮಿಕಾ ಮಾತನಾಡಿದ್ದಾರೆ.

ಬಾಲಿವುಡ್ ಬಬಲ್​ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ರಶ್ಮಿಕಾ ಮಂದಣ್ಣ, ‘ನಾವು ಕಲಾವಿದರಾಗಿ ಜನರು ನಮ್ಮನ್ನು ಮಾತ್ರ ಇಷ್ಟಪಡಬೇಕು ಎಂದು ನಾವು ನಿರೀಕ್ಷಿಸಬಾರದು. ನೀವು ಎಲ್ಲರಿಗೂ ಉತ್ತರಿಸಬೇಕೆಂದಿಲ್ಲ. ಬಹಳಷ್ಟು ದ್ವೇಷ, ಬಹಳಷ್ಟು ಪ್ರೀತಿ ಎರಡೂ ಇರುತ್ತದೆ. ನಾವು ಪಬ್ಲಿಕ್ ಫಿಗರ್​ಗಳು. ನಾವು ಸಾರ್ವಜನಿಕರ ಜತೆ ಮಾತನಾಡುತ್ತೇವೆ. ನಾವು ಸಂದರ್ಶನ ಮಾಡುತ್ತೇವೆ’ ಎಂದಿದ್ದಾರೆ ಅವರು.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

‘ನಾನು ಮಾತನಾಡುವುದು ಅಥವಾ ನನ್ನ ಕೈ ಸನ್ನೆಗಳು ಕೆಲವರಿಗೆ ಇಷ್ಟವಾಗದಿರಬಹುದು. ನಾನು ಹೆಚ್ಚು ಎಕ್ಸ್​ಪ್ರೆಸಿವ್. ಇದನ್ನೂ ಕೆಲವರು ಇಷ್ಟಪಡದಿರಬಹುದು. ನನ್ನನ್ನು ಜನರು ಇಷ್ಟಪಡದೆ ಇರಲು ಇದೆಲ್ಲವೂ ಕಾರಣ ಆಗಿರಬಹುದು. ಇದರ ಜತೆ ಅನೇಕರು ಪ್ರೀತಿ ತೋರುತ್ತಿದ್ದಾರೆ. ಇದಕ್ಕೆ ನಾನು ಕೃತಜ್ಞ’ ಎಂದಿದ್ದಾರೆ ರಶ್ಮಿಕಾ.

ಇದನ್ನೂ ಓದಿ: ‘ವಾರಿಸು’ ಟ್ರೇಲರ್​​ನಲ್ಲಿ ಕೆಲವೇ ಸೆಕೆಂಡ್​​​ಗಳ ದೃಶ್ಯಕ್ಕೆ ರಶ್ಮಿಕಾ ಸೀಮಿತ; ಸಿನಿಮಾದಲ್ಲೂ ಇದೇ ಕಥೆ?

ಈ ಮೊದಲು ರಶ್ಮಿಕಾ ಮಂದಣ್ಣ ಸಂದರ್ಶನದ ವೇಳೆ ಮೊದಲ ಸಿನಿಮಾ ‘ಕಿರಿಕ್ ಪಾರ್ಟಿ’ ಬಗ್ಗೆ ಹೇಳುವಾಗ ಪ್ರೊಡಕ್ಷನ್ ಹೌಸ್ ಹೆಸರನ್ನು ಉಲ್ಲೇಖ ಮಾಡದೆ ಕೈ ಬೆರಳಿಂದ ಸನ್ನೆ ಮಾಡಿದ್ದರು. ಈ ವಿಚಾರದಲ್ಲಿ ರಿಷಬ್ ಶೆಟ್ಟಿ ಅವರು ರಶ್ಮಿಕಾಗೆ ಪರೋಕ್ಷವಾಗಿ ಟೀಕೆ ಮಾಡಿದ್ದರು. ಈಗ ರಶ್ಮಿಕಾ ಅವರು ‘ನನ್ನ ಕೈ ಸನ್ನೆಗಳು ಕೆಲವರಿಗೆ ಇಷ್ಟವಾಗದೇ ಇರಬಹುದು’ ಎಂದು ಹೇಳಿರುವುದು ರಿಷಬ್ ಶೆಟ್ಟಿಗೆ ಹೇಳಿದ ಮಾತೇ ಎಂಬ ಚರ್ಚೆ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
Video: ಕ್ರಿಸ್​ಮಸ್​ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
Video: ಕ್ರಿಸ್​ಮಸ್​ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ವಾಜಪೇಯಿ ಜನ್ಮದಿನ, ವಿಡಿಯೋ ಮೂಲಕ ಅಟಲ್ ಕಾರ್ಯ ಹೊಗಳಿದ ಪ್ರಧಾನಿ ಮೋದಿ
ವಾಜಪೇಯಿ ಜನ್ಮದಿನ, ವಿಡಿಯೋ ಮೂಲಕ ಅಟಲ್ ಕಾರ್ಯ ಹೊಗಳಿದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಕ್ರಿಸ್ಮಸ್​ ಸಡಗರ​, ಲೈಟಿಂಗ್ಸ್​ನಲ್ಲಿ ಚರ್ಚ್​ಗಳು ಝಗಮಗ
ಬೆಂಗಳೂರಿನಲ್ಲಿ ಕ್ರಿಸ್ಮಸ್​ ಸಡಗರ​, ಲೈಟಿಂಗ್ಸ್​ನಲ್ಲಿ ಚರ್ಚ್​ಗಳು ಝಗಮಗ
ಆಪರೇಷನ್ ಬಳಿಕ ಶಿವರಾಜ್​ಕುಮಾರ್ ಹೆಲ್ತ್​ಅಪ್​ಡೇಟ್ ನೀಡಿದ ವೈದ್ಯರು
ಆಪರೇಷನ್ ಬಳಿಕ ಶಿವರಾಜ್​ಕುಮಾರ್ ಹೆಲ್ತ್​ಅಪ್​ಡೇಟ್ ನೀಡಿದ ವೈದ್ಯರು
ಎದುರಾಳಿಗಳನ್ನು ಹಣ್ಣುಗಾಯಿ ನೀರುಗಾಯಿ ಮಾಡುವ ಶಪಥ ಮಾಡಿದ ರಜತ್
ಎದುರಾಳಿಗಳನ್ನು ಹಣ್ಣುಗಾಯಿ ನೀರುಗಾಯಿ ಮಾಡುವ ಶಪಥ ಮಾಡಿದ ರಜತ್
ಮನೆಯಲ್ಲಿನ ಶಿವಲಿಂಗ ಎಷ್ಟು ಎತ್ತರ ಇರಬೇಕು, ಪೂಜಾ ವಿಧಾನ ತಿಳಿಯಿರಿ
ಮನೆಯಲ್ಲಿನ ಶಿವಲಿಂಗ ಎಷ್ಟು ಎತ್ತರ ಇರಬೇಕು, ಪೂಜಾ ವಿಧಾನ ತಿಳಿಯಿರಿ